ಕ್ರೇಜಿಸ್ಟಾರ್ ರವಿಚಂದ್ರನ್ ನಟನಾಗಿ, ನಿರ್ದೇಶಕನಾಗಿ, ನಿರ್ಮಾಪಕನಾಗಿ ಸಾಕಷ್ಟು ವರ್ಷಗಳಿಂದ ಕನ್ನಡ ಚಿತ್ರರಂಗಕ್ಕೆ ಸೇವೆ ಸಲ್ಲಿಸಿದ್ದಾರೆ. ಅವರ ಸಾಧನೆಯನ್ನು ಗುರುತಿಸಿ ಬೆಂಗಳೂರು ನಗರ ವಿಶ್ವವಿದ್ಯಾನಿಲಯ ಗೌರವ ಡಾಕ್ಟರೇಟ್ ಪದವಿಯನ್ನು ಘೋಷಣೆ ಮಾಡಿದೆ ಎಂದು ವಿವಿಯ ಕುಲಪತಿ ಲಿಂಗರಾಜ್ ಗಾಂಧಿ ತಿಳಿಸಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿರುವ ವಿಶ್ವವಿದ್ಯಾನಿಲಯದ ಕುಲಪತಿಯಾಗಿರುವ ಲಿಂಗ್‌ರಾಜ್ ಗಾಂಧಿ, ಬೆಂಗಳೂರು ವಿವಿಯ ವಾರ್ಷಿಕ ಘಟಿಕೋತ್ಸವ ಕಾರ್ಯಕ್ರಮದಲ್ಲಿ ನಟ ವಿ.ರವಿಚಂದ್ರನ್ ಸೇರಿದಂತೆ ಮೂವರು ಸಾಧಕರಿಗೆ ಗೌರವ ಪ್ರಧಾನ ಮಾಡಲಾಗುತ್ತದೆ.
ಈ ಪ್ರಶಸ್ತಿ ಪ್ರಧಾನ ಸಮಾರಂಭವು ಇದೇ ತಿಂಗಳ ೧೧ರಂದು ಘಟಿಕೋತ್ಸವ ಕಾರ್ಯಕ್ರಮ ಆಯೋಜಿಸಿ ಗೌರವಿಸಲಾಗುತ್ತದೆ. ಇನ್ನು ಕಾರ್ಯಕ್ರಮದ ಅಧ್ಯಕ್ಷತೆಯನ್ನು ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ವಹಿಸಲಿದ್ದಾರೆ. ಈ ಕಾರ್ಯಕ್ರಮವನ್ನ ಬೆಂಗಳೂರಿನ ಸೆಂಟ್ರಲ್ ಕಾಲೇಜಿನ ಜ್ಞಾನಜ್ಯೊತಿ ಆಡಿಟೋರಿಯಂ ನಲ್ಲಿ ನಡೆಯಲಿದೆ. ಇದನ್ನು ಓದಿ:ಏ.18ಕ್ಕೆ ದುನಿಯಾ ವಿಜಯ್ ನಿರ್ದೇಶನದ ‘ಭೀಮ’ನಿಗೆ ಮುಹೂರ್ತ
ಇನ್ನು ಕಾರ್ಯಕ್ರಮದಲ್ಲಿ ಸಿನಿಮಾ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ವಿ. ರವಿಚಂದ್ರನ್, ಸಮಾಜ ಸೇವೆಗಾಗಿ ಎಂ. ಆರ್ ಜೈ ಶಂಕರ್, ಮತ್ತು ವೈದ್ಯಕೀಯ ಕ್ಷೇತ್ರದಲ್ಲಿ ಡಾ. ಸತ್ಯನಾರಾಯಣ ಅವರಿಗೆ ಡಾಕ್ಟರೇಟ್ ನೀಡಲಾಗುತ್ತದೆ ಎಂದು ವಿವಿಯ ಕುಲಪತಿ ಲಿಂಗರಾಜ್ ಗಾಂಧಿ ತಿಳಿಸಿದ್ದಾರೆ.