ಬೆಂಗಳೂರು: ಉಗ್ರರ ದಾಳಿ ಹಿನ್ನೆಲೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅವರು ಹೈ ಅಲರ್ಟ್ ಘೋಷಣೆ ಮಾಡಿದ್ದಾರೆ.
ಯಾವುದೇ ಕ್ಷಣದಲ್ಲಿ ಉಗ್ರರರು ದಾಳಿ ಮಾಡಬಹುದು ಎಂದು ಕೇಂದ್ರ ಗುಪ್ತಚರ ಇಲಾಖೆ ಮಾಹಿತಿ ನೀಡಿದೆ. ಈ ಹಿನ್ನೆಲೆ ಜನನಿಬಿಡ ಪ್ರದೇಶಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್, ಭದ್ರತೆಗೆ ಪೊಲೀಸ್ ಇಲಾಖೆ ಮುಂದಾಗಿದೆ.
Advertisement
ಎಲ್ಲಾ ಆಯ ಕಟ್ಟಿನ ಸ್ಥಳಗಳಲ್ಲಿ ಭಾರೀ ಭದ್ರತೆ ಒದಗಿಸಬೇಕು. ಪ್ರತಿಯೊಂದು ಜಾಗದಲ್ಲಿಯೂ ಸಿಸಿಟಿವಿ ಕ್ಯಾಮೆರಾ ಸರಿಯಾಗಿ ಕಾರ್ಯನಿರ್ವಹಿಸುವಂತೆ ನೋಡಿಕೊಳ್ಳಿ. ಎಲ್ಲಾ ಹಿರಿಯ ಪೊಲೀಸ್ ಅಧಿಕಾರಿಗಳು ನಿರಂತರವಾಗಿ ಪ್ರಮುಖ ಸ್ಥಳಗಳಲ್ಲಿ ಖುದ್ದು ಇದ್ದು ಭದ್ರತೆ ನೋಡಿಕೊಳ್ಳಬೇಕು. ನಗರದಲ್ಲಿ ಅನುಮಾನಾಸ್ಪದ ರೀತಿಯ ವ್ಯಕ್ತಿ, ವಾಹನ, ಬ್ಯಾಗ್‍ಗಳನ್ನು ತಪಾಸಣೆ ಮಾಡಿ ಎಂದು ಭಾಸ್ಕರ್ ರಾವ್ ಅವರು ಸಿಬ್ಬಂದಿಗೆ ಸೂಚನೆ ನೀಡಿದ್ದಾರೆ.
Advertisement
Advertisement
ಪ್ರೈವೆಟ್ ಸೆಕ್ಯೂರಿಟಿ ಗಾರ್ಡ್ ಗಳನ್ನು ಭದ್ರತೆಗೆ ಬಳಸಿಕೊಳ್ಳಿ. ಎಲ್ಲಾ ಹಿರಿಯ ಪೊಲೀಸ್ ಅಧಿಕಾರಿಗಳ ರೌಂಡ್ಸ್ ನಲ್ಲಿ ಇರಬೇಕು. ತಮ್ಮ ವ್ಯಾಪ್ತಿಯ ಆಯಕಟ್ಟಿನ ಪ್ರದೇಶದಲ್ಲಿ ಹಿರಿಯ ಅಧಿಕಾರಿಗಳು ಮೊಕಾಂ ಹುಡಬೇಕು. ನೈಟ್ ರೌಂಡ್ಸ್ ಇರುವ ಅಧಿಕಾರಿಗಳು ಅನುಮಾನಾಸ್ಪದ ವ್ಯಕ್ತಿ ಹಾಗೂ ವಾಹನ ಕಂಡು ಬಂದರೆ ವಶಕ್ಕೆ ಪಡೆಯಬೇಕು. ಪಿಜಿ, ಹಾಸ್ಟೆಲ್,ಅಪಾಟ್ರ್ಮೆಂಟ್, ಮಸೀದಿ, ದೇವಸ್ಥಾನಗಳ ಬಳಿ ಪೊಲೀಸರು ತಪಾಸಣೆ ನಡೆಸಬೇಕು ಎಂದು ಆದೇಶ ನೀಡಿದ್ದಾರೆ.
Advertisement
ತಮ್ಮ ತಮ್ಮ ಪ್ರದೇಶದ ಬಿಟ್ ಪೊಲೀಸರು ಅಲರ್ಟ್ ಆಗಿರಬೇಕು. ಪ್ರಮುಖ ಆಯಕಟ್ಟಿನ ಪ್ರದೇಶಗಳಲ್ಲಿ ಸಂಪೂರ್ಣ ತಪಾಸಣೆ ಮಾಡಬೇಕು. ಚೆಕ್ ಪೋಸ್ಟ್ ಗಳು, ನಗರದ ಒಳಗೆ ಹೊರಗೆ ಹೋಗುವ ವಾಹನಗಳ ತಪಾಸಣೆಯಾಗಬೇಕು. ವಿಧಾನಸೌಧ, ಬಸ್ ನಿಲ್ದಾಣ, ರೈಲ್ವೇ ಸ್ಟೇಷನ್, ಮಾಲ್, ಮಾರ್ಕೆಟ್ ಸುತ್ತಮುತ್ತ ಹೈ ಅಲರ್ಟ್ ಆಗಿರಿ. ಎಲ್ಲಾ ಕಡೆ ಕೆಎಸ್‍ಆರ್ ಪಿ ನಿಯೋಜನೆ ಮಾಡಬೇಕು ಎಂದು ಸೂಚಿಸಿದ್ದಾರೆ.