ಬೆಂಗಳೂರು: ಹುಣಸೂರು ಉಪ ಚುನಾವಣೆಯಲ್ಲಿ ಬಿಜೆಪಿ ಆಮಿಷ ಒಡ್ಡಿ ಮತದಾರರನ್ನು ಸೆಳೆಯುತ್ತಿದ್ದು ಚುನಾವಣೆ ಆಯೋಗ ತಕ್ಷಣ ಕ್ರಮ ತೆಗೆದುಕೊಳ್ಳಬೇಕೆಂದು ಕಾಂಗ್ರೆಸ್ ಒತ್ತಾಯಿಸಿದೆ.
ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಧ್ಯಮ ವಿಭಾಗ ಮುಖ್ಯಸ್ಥ ಉಗ್ರಪ್ಪ, ಹಾಗೂ ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪಾ ಅಮರನಾಥ್, ಹುಣಸೂರು ಕ್ಷೇತ್ರದಲ್ಲಿ ಅವ್ಯವಹಾರ, ಅಕ್ರಮ ನಡೆಯುತ್ತಿದೆ. ಯೋಗೇಶ್ವರ್ ಫೋಟೋ ಸಮೇತ ಸೀರೆಗಳು ಕ್ಷೇತ್ರದಲ್ಲಿ ಸಿಕ್ಕಿವೆ. ಯೋಗೇಶ್ವರ್ ಅವರ ಭಾವಚಿತ್ರ ಸಮೇತ ಮತ ಬಿಜೆಪಿ ಹಾಕಿ ಅಂತ ಆಮಿಷ ಒಡ್ಡಲಾಗುತ್ತಿದೆ ಎಂದು ವಾಗ್ದಾಳಿ ಮಾಡಿದ್ದಾರೆ.
Advertisement
Advertisement
ಬಿಜೆಪಿ ಅಕ್ರಮ ಮಾರ್ಗದಲ್ಲಿ ಚುನಾವಣೆ ನಡೆಸುತ್ತಿದೆ. ಮತದಾರರಿಗೆ ಆಮಿಷ ಒಡ್ಡುತ್ತಿದ್ದಾರೆ. ಕೊನೆ ಕ್ಷಣದಲ್ಲಿ ಬಿಜೆಪಿ ಅಭ್ಯರ್ಥಿ ಬದಲಾಗಿದ್ದಾರೆ. ಆದರೆ ಬಿಜೆಪಿ ಅವರೇ ಇದನ್ನು ಮಾಡಿದ್ದಾರೆ. ಕೂಡಲೇ ಚುನಾವಣೆ ಆಯೋಗ ಸುಮೋಟೋ ಕೇಸ್ ದಾಖಲಿಸಿ ಕ್ರಮ ತೆಗೆದುಕೊಳ್ಳಬೇಕು. ಬಿಜೆಪಿ ಅಭ್ಯರ್ಥಿ ನಾಮಪತ್ರ ತಿರಸ್ಕಾರ ಮಾಡಬೇಕು. ಹುಣಸೂರು ಕ್ಷೇತ್ರದಲ್ಲಿ ಬಿಜೆಪಿಯನ್ನು ಚುನಾವಣೆ ಕಣದಿಂದ ಹಿಂದೆ ಕಳಿಸಬೇಕು ಎಂದು ಒತ್ತಾಯಿಸಿದ್ದಾರೆ.
Advertisement
ಈ ವೇಳೆ ಮಾತನಾಡಿದ ಉಗ್ರಪ್ಪ ಬಿಜೆಪಿಯ ಈ ಕೆಲಸ ನೋಡಿದರೆ ಸೋಲನ್ನು ಒಪ್ಪಿಕೊಂಡಿದ್ದಾರೆ ಅನ್ನಿಸುತ್ತೆ. 15 ಕ್ಷೇತ್ರದಲ್ಲಿ ಗೆಲುವು ಸಾಧ್ಯ ಇಲ್ಲ ಅಂತ ವಾಮ ಮಾರ್ಗದಲ್ಲಿ ಗೆಲ್ಲಲು ಪ್ಲ್ಯಾನ್ ಮಾಡಿದೆ. ಹುಣಸೂರಿನಲ್ಲಿ 30 ಸಾವಿರ ಸೀರೆ ಹಂಚುವ ಕೆಲಸ ಮಾಡುತ್ತಿದ್ದಾರೆ. ಸಿಎಂ ಕೂಡಾ ಶಿವಾಜಿನಗರದ ಟಿಕೆಟ್ ಅನ್ನು ತಮಿಳು ಜನಾಂಗದವರಿಗೆ ಕೊಡುತ್ತಿದ್ದೇವೆ ಎಂದು ಹೇಳಿದ್ದಾರೆ.
Advertisement
ಅನರ್ಹರನ್ನ ಮಂತ್ರಿ ಮಾಡೋದಾಗಿ ಸಿಎಂ ಹೇಳಿದ್ದಾರೆ. ಶಂಕರ್ ಅವರನ್ನು ಎಂಎಲ್‍ಸಿ ಮಾಡಿ ಮಂತ್ರಿ ಮಾಡ್ತೀನಿ ಎಂದು ಸಿಎಂ ಹೇಳಿದ್ದಾರೆ. ಇದು ಕಾನೂನಿನ ಪ್ರಕಾರ ಅಪರಾಧ.ಬಿಜೆಪಿ ಆಮಿಷ ಒಡ್ಡಿ ಚುನಾವಣೆ ಗೆಲ್ಲಲು ಹೋಗ್ತಿದೆ, ಕೂಡಲೇ ಚುನಾವಣೆ ಆಯೋಗ ಕ್ರಮ ಜರುಗಿಸಬೇಕು ಅಂತ ಒತ್ತಾಯಿಸಿದರು.