ಬೆಂಗಳೂರು: ರಾಜ್ಯ ಕಾಂಗ್ರೆಸ್ಸಿನಲ್ಲಿ ಅಂತರ್ಯುದ್ಧಗಳು ಮುಗಿಲು ಮುಟ್ಟಿವೆ. ಈ ಕುರಿತು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಪತ್ನಿ ಟಬು ಕೂಡ ಫೇಸ್‍ಬುಕ್ ನಲ್ಲಿ ಪೋಸ್ಟ್ ಮಾಡುವ ಮೂಲಕ ಬಹಿರಂಗಪಡಿಸಿದ್ದರು. ಈ ಬೆನ್ನಲ್ಲೇ ಇದೀಗ ಮೂಲ ಮತ್ತು ವಲಸಿಗರ ನಡುವೆ ಸಿಎಲ್‍ಪಿ(ಕಾಂಗ್ರೆಸ್ ಶಾಸಕಾಂಗ ಸಭೆ) ನಾಯಕ ಹಾಗೂ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕಾಗಿ ಫೈಟ್ ನಡೆಯುತ್ತಿದೆ.
ದಿನೇಶ್ ಗುಂಡೂರಾವ್ ಪದೇ ಪದೇ ರಾಜೀನಾಮೆ ಕೊಡಲು ಸಿದ್ಧ ಎನ್ನುವ ಹಿಂದೆ ಸಿದ್ದರಾಮಯ್ಯರ ಇದ್ದಾರೆ ಎನ್ನಲಾಗುತ್ತಿದೆ. ದಿನೇಶ್ ಗುಂಡೂರಾವ್ ವಿರುದ್ಧ ಮೂಲ ಕಾಂಗ್ರೆಸ್ಸಿಗರು ಮುನಿಸಿಕೊಂಡಿರುವುದರಿಂದ ಅವರ ಬದಲಾವಣೆ ಕೂಗು ಜೋರಾಗುವ ಸಾಧ್ಯತೆ ಇದೆ. ಒಂದು ವೇಳೆ ಹಾಗೇನಾದರೂ ಬದಲಾವಣೆಯಾದರೆ ಆ ಸ್ಥಾನಕ್ಕೆ ಯಾರು ಬೇಕಾದರು ಬರಬಹುದು ಎಂಬ ಮಾಹಿತಿ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ.
Advertisement
Advertisement
ಒಂದು ವೇಳೆ ಟ್ರಬಲ್ ಶೂಟರ್ ಡಿಕೆ ಶಿವಕುಮಾರ್ ಜೈಲಿನಿಂದ ಬಿಡುಗಡೆ ಆದರೆ ಅಧ್ಯಕ್ಷ ಸ್ಥಾನಕ್ಕೆ ಡಿಕೆಶಿಯನ್ನೇ ಹೈಕಮಾಂಡ್ ತಂದರೂ ಅಚ್ಚರಿ ಇಲ್ಲ. ಆದ್ದರಿಂದ ಸಿದ್ದರಾಮಯ್ಯರ ಬಣವೇ ದಿನೇಶ್ ಹತ್ತಿರ ರಾಜೀನಾಮೆಯ ಬಗ್ಗೆ ಮಾತನಾಡಿಸುತ್ತಿದೆ ಎಂದು ಹೇಳಲಾಗುತ್ತಿದೆ. ಆ ಮೂಲಕ ಬದಲಾವಣೆ ಮಾಡುವುದಾದರೆ ಈಗಲೇ ಮಾಡಲಿ ಅನ್ನೋದು ಸಿದ್ದರಾಮಯ್ಯ ಬಣದ ಪ್ಲಾನ್ ಆಗಿದೆ. ಇದನ್ನೂ ಓದಿ: ‘ಕೈ’ ಪಾಳಯದಲ್ಲಿ ಶುರುವಾಯ್ತು ‘ಟಬು’ ಸುನಾಮಿ – ಟಬು ರಾವ್‍ರಿಂದ ಸ್ಫೋಟಕ ಸತ್ಯ
Advertisement
ಡಿಕೆಶಿ ಬರುವುದರೊಳಗೆ ತಮ್ಮವರೊಬ್ಬರನ್ನ ಕೆಪಿಸಿಸಿ ಅಧ್ಯಕ್ಷ ಸ್ಥಾನದಲ್ಲಿ ಕೂರಿಸಿದರೆ ಸೇಫ್ ಆಗುತ್ತೇವೆ. ಇದರಿಂದ ಪಕ್ಷದ ಸಂಪೂರ್ಣ ಹಿಡಿತ ತಮ್ಮ ಕೈಯಲ್ಲೇ ಇರುತ್ತದೆ ಎಂಬುದು ಸಿದ್ದರಾಮಯ್ಯ ಬಣದ ಲೆಕ್ಕಾಚಾರವಾಗಿದೆ. ಆದ್ದರಿಂದ ಡಿಕೆ ಶಿವಕುಮಾರ್ ಬರುವುದರೊಳಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನವನ್ನ ಲಾಕ್ ಮಾಡುವ ಪ್ರಯತ್ನಕ್ಕೆ ಸಿದ್ದರಾಮಯ್ಯ ಮುಂದಾಗಿದ್ದಾರೆ ಎಂದು ಹೇಳಲಾಗುತ್ತಿದೆ.
Advertisement
ಸಿದ್ದರಾಮಯ್ಯರ ಈ ಪ್ರಯತ್ನ ಯಶಸ್ವಿಯಾಗಿ ಕೆಪಿಸಿಸಿ ಗಾದಿ ಲಾಕ್ ಆಗುತ್ತಾ ಅಥವಾ ಅಷ್ಟರಲ್ಲಿ ಡಿಕೆಗೆ ಬೇಲ್ ಆಗಿ ಐಡಿಯಾ ಫ್ಲಾಪ್ ಆಗುತ್ತಾ ಅನ್ನೋದೇ ಸದ್ಯದ ಕುತೂಹಲವಾಗಿದೆ.