ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ, ಒನಕೆ ಓಬವ್ವ ಬಗ್ಗೆ ಕೀಳುಮಟ್ಟದ ಪೋಸ್ಟ್ ಹಂಚಿದ್ದನ್ನು ಖಂಡಿಸಿ ಸಂಸದ ಪ್ರತಾಪ್ ಸಿಂಹ ವಿರುದ್ಧ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಕಾರ್ಯಕರ್ತರಿಗೆ ಕಾಂಗ್ರೆಸ್ ಹಣ ಹಂಚಿಕೆ ಮಾಡಿದೆ.
ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಲಕ್ಷ್ಮಿ ಹೆಬ್ಬಾಳ್ಕರ್ ನೇತೃತ್ವದಲ್ಲಿ ಇಂದು ನಗರದ ಮೌರ್ಯ ಸರ್ಕಲ್ ನಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಪ್ರತಿಭಟನೆ ನಡೆಸಿದ ನಂತರ ಬಿಜೆಪಿ ಹಾಗೂ ಪ್ರತಾಪ್ ಸಿಂಹ ಅವರ ವಿರುದ್ಧ ಧಿಕ್ಕಾರ ಕೂಗಿದವರಿಗೆ ಕೆಪಿಸಿಸಿ ವತಿಯಿಂದ ಹಣ ಹಂಚಿಕೆ ಮಾಡುತ್ತಿರುವ ದೃಶ್ಯ ವಿಡಿಯೋದಲ್ಲಿ ಸೆರೆಯಾಗಿದೆ.
Advertisement
Advertisement
ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಎಲ್ಲಾ ಮಹಿಳೆಯರಿಗೆ 100 ರೂ. ಹಾಗೂ 500 ರೂ. ಮುಖ ಬೆಲೆಯ ನೋಟುಗಳನ್ನು ಹಂಚಿಕೆ ಮಾಡುತ್ತಿರುವುದು ಕ್ಯಾಮೆರಾದಲ್ಲಿ ಸೆರೆಯಾಗಿದೆ. (ಇದನ್ನೂ ಓದಿ: ಸಂಸದ ಪ್ರತಾಪ್ ಸಿಂಹ ಬೆಂಬಲಿಗರ ವಿರುದ್ಧ ದೂರು ದಾಖಲು )
Advertisement
ಈ ಸಂದರ್ಭದಲ್ಲಿ ಮಾತನಾಡಿದ ಲಕ್ಷ್ಮಿ ಹೆಬ್ಬಾಳ್ಕರ್, ನಾಡಿನ ಇತಿಹಾಸ ಗೊತ್ತಿಲ್ಲದೇ ಏನೇನೋ ಮಾತನಾಡುತ್ತಿರುವ ಬಿಜೆಪಿ ನಾಯಕರು ಹಾಗೂ ಸಂಸದ ಪ್ರತಾಪ್ ಸಿಂಹ ಅವರಿಗೆ ನಾಚಿಕೆಯಾಗ್ಬೇಕು. ಇಡೀ ದೇಶಕ್ಕೆ, ರಾಜ್ಯಕ್ಕೆ ವೀರ ವನಿತೆ ಒಬವ್ವ ಮತ್ತು ಕಿತ್ತೂರು ರಾಣಿ ಚೆನ್ನಮ್ಮ ಯಾರು ಎನ್ನುವುದು ಗೊತ್ತು. ಬಿಜೆಪಿಯವರು ಇಡೀ ಸ್ತ್ರೀ ಕುಲಕ್ಕೆ ಅವಮಾನ ಮಾಡಿದ್ದಾರೆ. ಇದಕ್ಕೆ ತಕ್ಕ ಶಿಕ್ಷೆಯನ್ನು ಅನುಭವಿಸಲಿದ್ದಾರೆ ಎಂದು ವಾಗ್ದಾಳಿ ನಡೆಸಿದರು. (ಇದನ್ನೂ ಓದಿ: ಓಬವ್ವ, ಕಿತ್ತೂರು ರಾಣಿ ಬಗ್ಗೆ ಪ್ರಕಟವಾದ ಪೋಸ್ಟಿಗೂ ನನಗೂ ಸಂಬಂಧವಿಲ್ಲ: ಪ್ರತಾಪ್ ಸಿಂಹ )
Advertisement
ಈ ಹಿಂದೆ ನೋಟ್ ಬ್ಯಾನ್ ಆದ ಸಂದರ್ಭಲ್ಲಿ ಕಳೆದ ವರ್ಷ ಕಾಂಗ್ರೆಸ್ ನವೆಂಬರ್ ತಿಂಗಳಿನಲ್ಲಿ ಆಕ್ರೋಶ್ ದಿನವನ್ನು ಆಚರಿಸಲು ಕರೆ ಕೊಟ್ಟಿತ್ತು. ಈ ವೇಳೆ ಪ್ರತಿಭಟನೆಗೆ ಆಗಮಿಸಿದ್ದ ಜನರಿಗೆ ಹಣವನ್ನು ಹಂಚಿಕೆ ಮಾಡಿದ್ದು ಕ್ಯಾಮೆರಾದಲ್ಲಿ ಸೆರೆಯಾಗಿತ್ತು.
https://www.youtube.com/watch?v=EkN6SRtlWtY