ಬೆಂಗಳೂರು: ಜಾರಿ ನಿರ್ದೇಶನಾಲಯ (ಇಡಿ) ಬಂಧನಕ್ಕೆ ಒಳಗಾದ ಮಾಜಿ ಸಚಿವ ಡಿ.ಕೆ ಶಿವಕುಮಾರ್ ಗೆ ಮೈಲಾರಲಿಂಗೇಶ್ವರನ ಶಾಪ ಕಾರಣ. ಅದೇ ಕಾರಣಕ್ಕೆ ಅವರು ಜೈಲಿಗೆ ಹೋದರು ಅನ್ನೋ ಮಾತುಗಳು ಕೇಳಿ ಬಂದಿತ್ತು.
ಡಿಕೆಶಿ ಬಳ್ಳಾರಿ ಜಿಲ್ಲೆಯ ಹೂವಿನ ಹಡಗಲಿಯ ದೇವಸ್ಥಾನದ ಮೇಲೆ ಹೆಲಿಕಾಪ್ಟರ್ ನಲ್ಲಿ ತೆರಳಿದ್ದರಿಂದ ಮೈಲಾರ ಲಿಂಗೇಶ್ವರನ ಶಾಪಕ್ಕೆ ಗುರಿಯಾಗಿದ್ದಾರೆ ಅನ್ನೋ ಅಪವಾದ ಕೇಳಿ ಬಂದಿತ್ತು. ಆ ಅಪವಾದದಿಂದ ಮುಕ್ತವಾಗಿ ಶಾಪದಿಂದ ಮುಕ್ತಿ ಪಡೆಯಲು ಡಿಕೆಶಿ ಮೈಲಾರ ಲಿಂಗೇಶ್ವರನ ದರ್ಶನಕ್ಕೆ ಮುಂದಾಗಿದ್ದಾರೆ.
ಇದೇ ನವೆಂಬರ್ 17 ರಂದು ಹೂವಿನ ಹಡಗಲಿಗೆ ಹೋಗಿ ಮೈಲಾರಲಿಂಗೇಶ್ವರನ ದರ್ಶನ ಪಡೆದು ಪೂಜೆ ಸಲ್ಲಿಸಲು ಮುಂದಾಗಿದ್ದಾರೆ. ಒಟ್ಟಾರೆ ಡಿ.ಕೆ ಶಿವಕುಮಾರ್ ಬಂಧನಕ್ಕೆ ಮೈಲಾರಲಿಂಗೇಶ್ವರನ ಶಾಪ ಕಾರಣನಾ ಗೊತ್ತಿಲ್ಲ. ಆದರೆ ಅಂತದೊಂದು ಮಾತು ಕೇಳಿಬಂದ ಹಿನ್ನೆಲೆಯಲ್ಲಿ ಮೈಲಾರಲಿಂಗೇಶ್ವರನ ಸನ್ನಿಧಿಗೆ ಹೋಗಿ ಪೂಜೆ ಸಲ್ಲಿಸಲು ಮುಂದಾಗಿದ್ದಾರೆ.
ಸದ್ಯ ಡಿಕೆಶಿ ಸೋಮವಾರ ಮಧ್ಯರಾತ್ರಿ ಎದೆನೋವು ಮತ್ತು ಉಸಿರಾಟ ತೊಂದರೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಶೇಷಾದ್ರಿಪುರಂ ಬಳಿಯಿರುವ ಅಪೋಲೋ ಅಸ್ಪತ್ರೆಗೆ ದಾಖಲು ಮಾಡಲಾಗಿದೆ. ಕಳೆದ ಹತ್ತು ದಿನದ ಹಿಂದೆಯಷ್ಟೇ ಡಿಕೆಶಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದರು. ಬಿಪಿ ಶುಗರ್ ಪರೀಕ್ಷೆಗೆ ಎಂದು ದಾಖಲಾಗಿ ಚಿಕಿತ್ಸೆ ಪಡೆದಿದ್ದರು. ಇದೀಗ ಮತ್ತೆ ನಿನ್ನೆ ಮಧ್ಯರಾತ್ರಿ 1 ಗಂಟೆ ಸುಮಾರಿಗೆ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ದಾಖಲಾಗಿದ್ದಾರೆ.