ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಗೆ ಈರುಳ್ಳಿ ಹಾರ, ಸಿಲಿಂಡರ್ ಗಿಫ್ಟ್ ಮಾಡಿ ಬೆಲೆ ಏರಿಕೆ ಖಂಡಿಸಿ ಸಿಲಿಕಾನ್ ಸಿಟಿಯಲ್ಲಿ ಇಂದು ಪ್ರತಿಭಟನೆ ನಡೆಯಿತು.
ಬೆಂಗಳೂರು ನಗರ ಜಿಲ್ಲಾ ಕೇಂದ್ರ ಕಾಂಗ್ರೆಸ್ ಪ್ರಚಾರ ಸಮಿತಿ ವತಿಯಿಂದ ದಿನಬಳಕೆ ವಸ್ತುಗಳಾದ ಅಡುಗೆ ಆನಿಲ, ಪೆಟ್ರೋಲ್, ಡೀಸೆಲ್, ಈರುಳ್ಳಿ ದರ ಏರಿಕೆ ಖಂಡಿಸಿ ಮೌರ್ಯ ವೃತ್ತ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ಮಾಡಿದರು. ಬೆಲೆ ಏರಿಕೆ ಮಾಡುವುದೇ ಬಿಜೆಪಿ ಪಕ್ಷದ ಅಚ್ಚೆ ದಿನ್ ಎಂದು ತಿಳಿದುಕೊಂಡಿದ್ದಾರೆ ಅಂತ ಪ್ರತಿಭಟನಾಕಾರರು ಆಕ್ರೋಶ ಹೊರಹಾಕಿದರು.
ಪ್ರಧಾನಿ ನರೇಂದ್ರ ಮೋದಿ ಸರ್ವಧಿಕಾರಿ ಧೋರಣೆಯಿಂದ ದೇಶ ಸಂಕಷ್ಟದ ಪರಿಸ್ಥಿತಿ ಬಂದಿದೆ. ನೋಟು ಅಮಾನೀಕರಣ, ಅವೈಜ್ಞಾನಿಕ ಜಿಎಸ್‍ಟಿ ಮತ್ತು ಈರುಳ್ಳಿ ಬೆಲೆ ನಿಯಂತ್ರಣಕ್ಕೆ ಸಿಗುತ್ತಿಲ್ಲ. ರೈತರ ಸಂಕಷ್ಟಗಳನ್ನು ಕೇಳುವವರು ಇಲ್ಲದಂತಾಗಿದೆ ಎಂದು ಕಿಡಿಕಾರಿದ್ದಾರೆ.
ಕರ್ನಾಟಕ ರಾಜ್ಯದಲ್ಲಿ 18ಕ್ಕೂ ಜಿಲ್ಲೆ ಮಳೆ ಪ್ರವಾಹದಿಂದ ಲಕ್ಷಾಂತರ ಜನ ಬೀದಿ ಪಾಲಾಗಿದ್ದಾರೆ. ಕೋಟ್ಯಂತರ ರೂಪಾಯಿ ರೈತನಿಗೆ ಬೆಳೆ ಹಾನಿಯಾದರೂ ಬಿಜೆಪಿ, ಕೇಂದ್ರ ಸರ್ಕಾರ ಹೆಚ್ಚು ಪರಿಹಾರ ನಿಧಿ ಕೊಡುವಲ್ಲಿ ವಿಫಲವಾಗಿದೆ. ಭಾರತದ ಆರ್ಥಿಕ ಪರಿಸ್ಥಿತಿ ಕುಸಿತ ಕಂಡಿದೆ ಉದ್ಯೋಗ ಸೃಷ್ಟಿ ಗಗನಕುಸಮವಾಗಿದೆ. ಯುವಕರು ಕಂಗಾಲಾಗಿದ್ದಾರೆ ಎಂದು ಸಿಡಿಮಿಡಿಗೊಂಡರು.