ಬೆಂಗಳೂರು: ಹೃದಯ ಸಂಬಂಧಿ ಸಮಸ್ಯೆಯಿಂದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಇಂದು ಡಿಸ್ಚಾರ್ಜ್ ಆಗುವ ಸಾಧ್ಯತೆಗಳಿವೆ.
ಸಿದ್ದರಾಮಯ್ಯ ಅವರ ಆರೋಗ್ಯ ವಿಚಾರಿಸಲು ಬಂದ ಅವರ ಆಪ್ತ ಶಾಸಕರು ಹಾಗೂ ಮುಖಂಡರು, ಸಿಎಲ್‍ಪಿ ಹಾಗೂ ವಿಪಕ್ಷ ನಾಯಕನ ಸ್ಥಾನಕ್ಕೆ ನೀಡಿದ್ದ ರಾಜೀನಾಮೆ ವಾಪಾಸ್ ಪಡೆಯುವಂತೆ ಒತ್ತಾಯಿಸಿದ್ದಾರೆ. ಈ ವೇಳೆ ಮಾತನಾಡಿದ ಸಿದ್ದರಾಮಯ್ಯ ರಾಜೀನಾಮೆಯನ್ನು ಯಾವ ಕಾರಣಕ್ಕೂ ವಾಪಾಸ್ ಪಡೆಯಲ್ಲ ಎಂದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
Advertisement
Advertisement
ರಾಜೀನಾಮೆ ವಾಪಾಸ್ ಪಡೆಯೋದಲ್ಲ, ನಾನು ಇನ್ನೂ ಒಂದು ಹೆಜ್ಜೆ ಮುಂದೆ ಇಡಲು ಮುಂದಾಗಿದ್ದೆ. ಶಾಸಕ ಸ್ಥಾನಕ್ಕೂ ರಾಜೀನಾಮೆ ಕೊಡೋಕೆ ಮುಂದಾಗಿದ್ದೆ. ಆದರೆ ಕೊನೆ ಗಳಿಗೆಯಲ್ಲಿ ಸುಮ್ಮನಾದೆ. ಆದರೆ ಈಗಲೂ ಅದರ ಬಗ್ಗೆ ಯೋಚಿಸುತ್ತಿದ್ದೇನೆ ಅಂದಿದ್ದರು. ಇದರಿಂದ ಗಾಬರಿಯಾದ ಆತ್ಮೀಯರು ಹಾಗೆ ಮಾಡಬೇಡಿ ಅಂದಿದ್ದಾರೆ. ಅದಕ್ಕೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಒಂದು ಕೋಳಿ ಕೂಗದಿದ್ದರೆ ಬೆಳಕು ಹರಿಯಲ್ವ ಎಂದಿದ್ದಾರಂತೆ. ಇದನ್ನೂ ಓದಿ: ಸಿಎಲ್‍ಪಿ ನಾಯಕನ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ
Advertisement
ಸೂರ್ಯ ಪ್ರತಿದಿನ ಹುಟ್ಟುತ್ತಾನೆ ಪ್ರತಿದಿನ ಮುಳುಗುತ್ತಾನೆ. ಹಾಗೆಯೇ ರಾಜಕಾರಣಕ್ಕೆ ನಾನು ಅನಿವಾರ್ಯ ಅಲ್ಲ. ನಾನು ಇಲ್ಲದಿದ್ದರೂ ರಾಜಕಾರಣ ಇದ್ದೇ ಇರುತ್ತದೆ ಎನ್ನುವ ಮೂಲಕ ಆಪ್ತರ ಮನವೊಲಿಕೆ ಯತ್ನಕ್ಕೆ ಬ್ರೇಕ್ ಹಾಕಿದ್ದಾರೆ ಎಂಬುದಾಗಿ ತಿಳಿದುಬಂದಿದೆ.