Connect with us

Bengaluru City

ಸದ್ಯಕ್ಕೆ ರಾಜ್ಯ ಕಾಂಗ್ರೆಸ್ಸಿಗೆ ಯಾವುದೇ ನೇಮಕ ಇಲ್ಲ

Published

on

ಬೆಂಗಳೂರು: ವಿಪಕ್ಷ ನಾಯಕ, ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ(ಸಿಎಲ್‍ಪಿ) ನಾಯಕ ಹಾಗೂ ಕೆಪಿಸಿಸಿ ಅಧ್ಯಕ್ಷರ ನೇಮಕ ಸದ್ಯಕ್ಕಿಲ್ಲ. ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಸಿದ್ದರಾಮಯ್ಯ ಭೇಟಿ ಮಾಡಿ ಮಾತುಕತೆ ನಡೆಸಿದ ನಂತರ ಮಾಜಿ ಸಿಎಂಗೆ ಇದು ಖಚಿತವಾಗಿದೆ.

ಸೋನಿಯಾ ಹಾಗೂ ಸಿದ್ದರಾಮಯ್ಯ ನಡುವಿನ ಮಾತುಕತೆ ವಿಫಲವಾಗಿದೆ. ವಿಪಕ್ಷ ನಾಯಕನ ಸ್ಥಾನ, ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನ ಸ್ಥಾನ ಹಾಗೂ ಕೆಪಿಸಿಸಿ ಅಧ್ಯಕ್ಷ ಸ್ಥಾನ ಯಾವುದರ ಬಗ್ಗೆಯೂ ಸ್ಪಷ್ಟ ನಿರ್ಧಾರ ಕೈಗೊಂಡಿಲ್ಲ. ಹೈಕಮಾಂಡ್ ಜೊತೆಗಿನ ಮಾತುಕತೆಯಲ್ಲಿ ಈ ವಿಷಯದಲ್ಲಿ ಯಾವುದೇ ಒಮ್ಮತ ಅಭಿಪ್ರಾಯಕ್ಕೆ ಬರಲು ಸಾಧ್ಯವಾಗದೆ ಮಾತುಕತೆ ಮುಕ್ತಾಯವಾಗಿದೆ.

ನಾಳೆಯಿಂದ ಸೋನಿಯಾ ಗಾಂಧಿ 10 ದಿನಗಳ ಇಟಲಿ ಪ್ರವಾಸಕ್ಕೆ ತೆರಳುತ್ತಿದ್ದಾರೆ. ಇಟಲಿ ಪ್ರವಾಸ ಮುಗಿಸಿ ಬಂದ ನಂತರ ಆಯ್ಕೆ ಪ್ರಕ್ರಿಯೆ ನಡೆಯುವ ಸಾಧ್ಯತೆ ಇದೆ.