ಬೆಂಗಳೂರು: ಸಿಲಿಕಾನ್ ಸಿಟಿ, ಉದ್ಯಾನ ನಗರಿ ಬೆಂಗಳೂರು ರಾಜ್ಯದ ನಂಬರ್ 1 ಕೊರೊನಾ ಹಾಟ್‍ಸ್ಪಾಟ್ ಆಗಿದೆ. ಬೆಂಗಳೂರು ಸೀಲ್‍ಡೌನ್ ಆಗುವ ಸಾಧ್ಯತೆಗಳು ಹೆಚ್ಚಿವೆ.
ಲಾಕ್‍ಡೌನ್ ಆಗಿದ್ದರೂ ಬೆಂಗಳೂರಿಗರು ಅಜ್ಜಿ ಮನೆಗೆ ಹೋಗಿ ಹೋಳಿಗೆ ತಂದೆ ಎಂಬಿತ್ಯಾದಿ ಕುಂಟು ನೆಪ ಹೇಳಿ ಮನೆಯಿಂದ ಹೊರ ಬರುತ್ತಿದ್ದಾರೆ. ಬೆಂಗಳೂರು ನಗರದಲ್ಲಿ ಒಟ್ಟು 68 ಕೊರೊನಾ ಪ್ರಕರಣಗಳು ಬೆಳಕಿಗೆ ಬಂದಿವೆ. ಸುಮಾರು ಆರು ಸಾವಿರಕ್ಕೂ ಅಧಿಕ ಮಂದಿಯನ್ನು ಶಂಕಿತರೆಂದು ಗುರುತಿಸಲಾಗಿದೆ. 25 ಸಾವಿರಕ್ಕೂ ಅಧಿಕ ಜನರನ್ನು ಹೋಮ್ ಕ್ವಾರಂಟೈನ್ ಮಾಡಲಾಗಿದ್ದು, ಬಹುತೇಕರ ಪ್ರತ್ಯೇಕ ವಾಸದ ಅವಧಿ ಅಂತ್ಯವಾಗುತ್ತಿದೆ. ಚೀನಾದಲ್ಲಿ ಗುಣಮುಖವಾದವರಲ್ಲಿಯೂ ಕೊರೊನಾ ಲಕ್ಷಣಗಳು ಕಾಣಿಸಿಕೊಂಡ ಉದಾಹರಣೆಗಳಿವೆ. ಹಾಗಾಗಿ ಕೊರೊನಾ ಹಾಟ್‍ಸ್ಪಾಟ್ ಆಗಿರೂ ಬೆಂಗಳೂರು ಬಹುತೇಕ್ ಸೀಲ್‍ಡೌನ್ ಆಗಲಿದೆ ಎನ್ನಲಾಗುತ್ತಿದೆ.
Advertisement
Advertisement
ಬೆಂಗಳೂರು ಸೀಲ್ ಸಾಧ್ಯತೆ ಯಾಕೆ?
1. ಬೆಂಗಳೂರಿನಲ್ಲಿಯೇ ಅತಿ ಹೆಚ್ಚು ಪ್ರಕರಣ ಒಟ್ಟು 68 ಕೇಸ್ ದಾಖಲಾಗಿವೆ.
2. ಬೆಂಗಳೂರಿನಲ್ಲಿ ಲಾಕ್ ಡೌನ್ ಪಾಲನೆ ಸರಿಯಾಗಿ ಆಗುತ್ತಿಲ್ಲ. ದಿನಸಿ, ಮಟನ್ ಅಂಗಡಿ ಉಚಿತ ಹಾಲು, ಪೋಸ್ಟ್ ಆಫೀಸ್ ಪಡಿತರ ಅಂಗಡಿ ಮಾರ್ಕೆಟ್ ಎಲ್ಲಾ ಕಡೆ ಮುಗಿಬೀಳುತ್ತಿದ್ದಾರೆ.
3. ಅತಿ ಹೆಚ್ಚು ಜನಸಂಖ್ಯೆ ಇರುವ ಪ್ರದೇಶವಾಗಿರೋದರಿಂದ ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು ದೊಡ್ಡ ಸವಾಲು. ಒಂದು ವೇಳೆ ಲಾಕ್ ಡೌನ್ ಸಡಿಲಿಸಿದ್‍ರೆ ಅಪಾಯ ಕಟ್ಟಿಟ್ಟ ಬುತ್ತಿ.
4. ಬೆಂಗಳೂರಿನಲ್ಲಿ ಅತಿ ಹೆಚ್ಚು ಕೈಗಾರಿಕೆ, ಖಾಸಗಿ ಸಂಸ್ಥೆ, ಸಾರಿಗೆ ವ್ಯವಸ್ಥೆ ಇದೆ. ಸೀಲ್ ಮಾಡದೇ ಹೋದ್ರೇ ಏಕಕಾಲಕ್ಕೆ ಜನ ಹೊರಗಡೆ ಬಂದರೆ ಕೊರೊನಾ ರುದ್ರ ನರ್ತನ ಜೋರಾಗಲಿದೆ.
Advertisement
5. 272 ಜನ ನಿಜಾಮುದ್ದೀನ್ ಧಾರ್ಮಿಕ ಕಾರ್ಯಕ್ರಮದಲ್ಲಿ ಬೆಂಗಳೂರಿನಿಂದ ಭಾಗವಹಿಸಿದ್ದರು. ಇದುವರೆಗೂ ಎಲ್ಲರನ್ನು ಪತ್ತೆ ಹಚ್ಚಲು ಸಾಧ್ಯವಾಗಿಲ್ಲ. ಈಗಾಗಲೇ ನಾಲ್ಕು ತಬ್ಲಿಘಿ ಜಮಾತ್ ನಿಂದ ಪ್ರಕರಣಗಳು ದಾಖಲಾಗಿದೆ. ಹೋಮ್ ಕ್ವಾರಂಟೈನ್ ಒಳಗಾದ ಕೆಲವರು ಮನೆಯಲ್ಲಿರದೇ ಹೊರಗೆ ಓಡಾಡುತ್ತಿರೋದು ಮತ್ತಷ್ಟು ಆತಂಕಕ್ಕೆ ಕಾರಣವಾಗಿದೆ.
Advertisement
6. 27 ವರ್ಷದ ಯುವಕ ಹಾಗೂ 40 ವರ್ಷದ ಪುರುಷ ಇಬ್ಬರಿಗೆ ಟ್ರಾವೆಲ್ ಹಿಸ್ಟರಿಯಿಲ್ಲದೇ ಸೋಂಕು ತಗಲಿದೆ. ಹೀಗಾಗಿ ಬೆಂಗಳೂರಿನ ಕೆಲ ಭಾಗದಲ್ಲಿ ಸಮುದಾಯ ಮಟ್ಟದಲ್ಲಿ ರೋಗ ಹಬ್ಬುವ ಭೀತಿ ಎದುರಾಗಿದೆ. ಇವರಿಬ್ಬರಿಗೆ ಉಸಿರಾಟದ ಸಮಸ್ಯೆ ಇತ್ತು ಅಂತಾ ಹೇಳಿದ್ರೂ ವೈದ್ಯಕೀಯ ತನಿಖೆ ನಡೆಯುತ್ತಿದೆ.