ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಕೊರೊನಾ ಸೋಂಕಿತ ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಶರಣಾದ ಘಟನೆ ಇಂದು ನಡೆದಿದೆ.
ರೋಗಿ ನಂಬರ್ 466 ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದನು. ಹೀಗಾಗಿ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದನು. ಆದರೆ ಇಂದು ಈತ ವಿಕ್ಟೋರಿಯಾ ಆಸ್ಪತ್ರೆಯ ವಿಕ್ಟೋರಿಯಾದ ಟ್ರಾಮಾ ಸೆಂಟರ್ ನಿಂದ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ವಿವಿ ಪುರಂ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.