ಬೆಂಗಳೂರು: ರಾಜ್ಯದಲ್ಲಿ ಕೊರೊನಾ ವೈರಸ್‍ಗೆ ಓರ್ವ ಬಲಿಯಾಗಿದ್ದು, ಬೆಂಗಳೂರಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಈ ಮಧ್ಯೆ ಕೆಲವೊಂದು ಕಡೆ ಕದ್ದು ಮುಚ್ಚಿ ಶಾಲೆ ತೆರೆದಿರುವ ಪ್ರಸಂಗವೊಂದು ಬೆಳಕಿಗೆ ಬಂದಿದೆ.
ಕೇಂದ್ರೀಯ ವಿದ್ಯಾಲಯದ ಶಾಲೆಗಳು ಸರ್ಕಾರದ ಆದೇಶಕ್ಕೂ ಕಿಮ್ಮತ್ತು ನೀಡಿಲ್ಲ. ಬೆಂಗಳೂರಿನ ಶಾಲೆಗಳಲ್ಲಿ ಎಂದಿನಂತೆ ತರಗತಿ ನಡೆಯುತ್ತಿದ್ದು, ಸರ್ಕಾರ ರಜೆ ಘೋಷಿಸಿದ್ದರೂ 3, 4 ಮತ್ತು 5ನೇ ಕ್ಲಾಸ್ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸುತ್ತಿದೆ.
Advertisement
ರಾಜ್ಯದ ಮುಖ್ಯ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನಿರ್ಧರಿಸಿದಂತೆ ಬಿಬಿಎಂಪಿ, ಬೆಂಗಳೂರುನಗರ ಜಿಲ್ಲೆ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಎಲ್ಲಾ ಪ್ರಾಥಮಿಕ ಶಾಲೆಗಳಿಗೆ ಮುಂದಿನ ಆದೇಶದವರೆಗೆ ರಜೆ ಘೋಷಿಸಲಾಗಿದೆ.
— S.Suresh Kumar (@nimmasuresh) March 9, 2020
Advertisement
ಬಸವೇಶ್ವರನಗರ ಜೆಮ್ಸ್ ಕನ್ನಡ ಶಾಲೆಯಲ್ಲಿ ಎಲ್‍ಕೆಜಿ, ಯುಕೆಜಿ, 5 ನೇ ತರಗತಿವರೆಗಿನ ಶಾಲೆ ನಡೆಯುತ್ತಿದೆ. ಪಬ್ಲಿಕ್ ಟಿವಿ ಕ್ಯಾಮೆರಾ ಕಂಡ ಕೂಡಲೇ ಶಾಲೆಗೆ ರಜೆ ಘೋಷಣೆ ಮಾಡಲಾಗಿದೆ. ತಪ್ಪಾಗಿದೆ ಇಂದಿನಿಂದ ರಜೆ ಕೊಡುತ್ತೇವೆ ಎಂದು ಶಿಕ್ಷಕರು ತಬ್ಬಿಬ್ಬಾದ ಪ್ರಸಂಗವೂ ನಡೆಯಿತು.
Advertisement
ಕೊರೊನಾ ಭೀತಿ ಹಿನ್ನೆಲೆಯಲ್ಲಿ ಈಗಾಗಲೇ ಪೂರ್ವ ಪ್ರಾಥಮಿಕ ತರಗತಿಯಿಂದ ಆರನೇ ತರಗತಿವರೆಗೂ ಪರೀಕ್ಷೆ ರದ್ದುಗೊಳಿಸಲಾಗಿದೆ. ಜೊತೆಗೆ 6 ರಿಂದ 10 ನೇ ತರಗತಿ ವಿದ್ಯಾರ್ಥಿಗಳಿಗೆ ರಜೆ ನೀಡಲಾಗಿದೆ. ಆದರೂ ಸರ್ಕಾರದ ಆದೇಶವನ್ನೇ ಧಿಕ್ಕರಿಸಿ ಕೆಲವೊಂದು ಕಡೆಗಳಲ್ಲಿ ಪರೀಕ್ಷೆ ನಡೆಸುತ್ತಿದ್ದಾರೆ. ಸರ್ಕಾರ ಆದೇಶ ಹೊರಡಿಸದ ಮೇಲೂ ಪರೀಕ್ಷೆ ಇದೆ ಅಂತ ಶಾಲಾ ಆಡಳಿತ ಮಂಡಳಿ ಮೆಸೇಜ್ ಕಳುಹಿಸಿ ಪೇಚಿಗೆ ಸಿಲುಕಿದೆ.