ಬೆಂಗಳೂರು: ಈಗಾಗಲೇ ರಾಜ್ಯದಲ್ಲಿ ಕೊರೊನಾ ಭೀತಿ ಹೆಚ್ಚಾಗಿದೆ. ದೆಹಲಿಯಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ರಾಜ್ಯದ ಶಾಲಾ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಜ್ವರ ಕಾಣಿಸಿಕೊಂಡರೆ ರಜೆ ಕೊಡುವಂತೆ ಶಿಕ್ಷಣ ಇಲಾಖೆ ಸುತ್ತೋಲೆ ನೀಡಿದೆ.
ಇದರ ಬೆನ್ನಲ್ಲೆ ಕೊರೊನಾ ಭೀತಿ ತೀರಾ ಹೆಚ್ಚಾದರೆ ಶಾಲೆಯಲ್ಲಿ ಹೆಚ್ಚಿನ ಮಕ್ಕಳಿಗೆ ಜ್ವರದಂತಹ ಸಾಂಕ್ರಾಮಿಕ ರೋಗ ಕಾಣಿಸಿಕೊಂಡರೆ ಅಂತಹ ಶಾಲಾ ಕಾಲೇಜಿಗೆ ರಜೆ ಘೋಷಣೆ ಮಾಡಲಾಗುತ್ತದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.
Advertisement
Advertisement
ಈ ಮೊದಲು ಪಿಯುಸಿ ಪರೀಕ್ಷಾ ಕೊಠಡಿಯಲ್ಲಿ ಮೂವತ್ತು ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದರು. ಈ ಬಾರಿ ಮಾತ್ರ ಹದಿನೈದು ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ಕೊಟ್ಟಿದ್ದಾರೆ. ಸಾಂಕ್ರಾಮಿಕ ರೋಗ ಭೀತಿಯಲ್ಲಿ ಬೆಂಜ್‍ಗಳನ್ನು ದೂರ ದೂರ ಇಡಲಾಗಿದ್ದು, ಮಾಸ್ಕ್ ಧರಿಸಲು ಅವಕಾಶ ಕೊಡಲಾಗಿದೆ.