ಬೆಂಗ್ಳೂರಲ್ಲಿ ದಂಪತಿಯ ಬರ್ಬರ ಹತ್ಯೆ- ಮಗ ಟೆಕ್ಕಿಯಿಂದ್ಲೇ ಕೃತ್ಯ ಶಂಕೆ

Public TV
1 Min Read
BNG MURDER

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ದಂಪತಿಯ ಬರ್ಬರ ಹತ್ಯೆ ನಡೆದಿದ್ದು, ಮಗ ಟೆಕ್ಕಿಯೇ ಕೃತ್ಯವೆಸಗಿರುವ ಶಂಕೆ ವ್ಯಕ್ತವಾಗಿದೆ.

ಗೋವಿಂದಪ್ಪ(65), ಶಾಂತಮ್ಮ(55) ಕೊಲೆಯಾದ ದಂಪತಿ. ಇವರನ್ನು ಮಗ ನವೀನ್ ಕೊಲೆಗೈದಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಬೆಂಗಳೂರಿನ ಕೋಣನಕುಂಟೆ ಬಳಿಯ ಆರ್ ಬಿಐ ಲೇಔಟ್ ನಲ್ಲಿ ಈ ಘಟನೆ ನಡೆದಿದೆ.

BNG 6

ಗೋವಿಂದಪ್ಪ ಅವರು ಆರ್ ಬಿಐ ನಿವೃತ್ತ ನೌಕರನಾಗಿದ್ದು, ಮಗ ನವೀನ್ ಸಾಫ್ಟ್ ವೇರ್ ಎಂಜಿನಿಯರ್ ಆಗಿದ್ದಾನೆ. ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ತಂದೆ-ತಾಯಿಯನ್ನು ಕೊಲೆ ಮಾಡಿದ್ದು, ಕುಡಿದ ಮತ್ತಿನಲ್ಲಿ ಕೃತ್ಯವೆಸಗಿರುವ ಶಂಕೆ ವ್ಯಕ್ತವಾಗಿದೆ.

ಕೋಣನಕುಂಟೆ ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ಸಂಬಂಧ ನವೀನ್ ನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

BNG 2 3

Share This Article
Leave a Comment

Leave a Reply

Your email address will not be published. Required fields are marked *