ಬೆಂಗಳೂರು: ಪುಲ್ವಾಮಾ ದಾಳಿಯನ್ನು(Pulwama Attack) ಸಂಭ್ರಮಿಸಿ ಫೇಸ್‌ಬುಕ್‌ನಲ್ಲಿ ಪೋಸ್ಟ್ ಹಾಕಿದ್ದ ಬೆಂಗಳೂರಿನ(Bengaluru) ಎಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬನಿಗೆ ವಿಶೇಷ ಕೋರ್ಟ್(A Special Court ) 10 ಸಾವಿರ ರೂ. ದಂಡ ಮತ್ತು 5 ವರ್ಷ ಜೈಲು ಶಿಕ್ಷೆ ವಿಧಿಸಿ ತೀರ್ಪು ಪ್ರಕಟಿಸಿದೆ.
ಕಚರಕನಹಳ್ಳಿ ನಿವಾಸಿ, ಮೂರನೇ ವರ್ಷದ ಎಂಜಿನಿಯರಿಂಗ್ ವಿದ್ಯಾರ್ಥಿ ಫೈಜ್ ರಶೀದ್ ಶಿಕ್ಷೆಗೆ ಒಳಗಾದ ಅಪರಾಧಿ. 2019ರ ಫೆಬ್ರವರಿ 14 ರಂದು ಪುಲ್ವಾಮದಲ್ಲಿ ಉಗ್ರನ ಆತ್ಮಹುತಿ ದಾಳಿಗೆ 40 ಮಂದಿ ಸಿಆರ್‌ಪಿಎಫ್ ಯೋಧರು ಹುತಾತ್ಮರಾಗಿದ್ದರು. ಈ ದಾಳಿ ಬಳಿಕ ಸಾಮಾಜಿಕ ಜಾಲತಾಣದಲ್ಲಿ ರಶೀದ್ ಪೋಸ್ಟ್ ಮಾಡಿ ಸಂಭ್ರಮಿಸಿದ್ದ. ಇದನ್ನೂ ಓದಿ: ರಾಜ್ಯೋತ್ಸವ ದಿನವೇ ಕೋಪ: ಬಿಗ್ ಬಾಸ್ ಮನೆಯಿಂದ ಹೊರಟ ರೂಪೇಶ್ ರಾಜಣ್ಣ
Advertisement
Advertisement
ಪೋಸ್ಟ್ ಪ್ರಕಟಗೊಂಡ ಬಳಿಕ ಸಿಸಿಬಿ ಪೊಲೀಸರು ಆತನನ್ನು 2019ರಲ್ಲಿ ಬಂಧಿಸಿದ್ದರು. ಆತನ ಜಾಮೀನು ಅರ್ಜಿ ವಜಾಗೊಂಡಿದ್ದು, ಈಗಲೂ ಜೈಲಿನಲ್ಲೇ ಕಾಲ ಕಳೆಯುತ್ತಿದ್ದಾನೆ.
Advertisement
ಪೊಲೀಸರು ಆತನ ಮೊಬೈಲ್ ಫೋನ್ ವಶಪಡಿಸಿಕೊಂಡು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಿದ್ದರು. ಐಪಿಸಿ ಸೆಕ್ಷನ್ 153 ಎ (ಧರ್ಮದ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು), 124 ಎ (ದೇಶದ್ರೋಹ) ಮತ್ತು 201 (ಅಪರಾಧದ ಸಾಕ್ಷ್ಯವನ್ನು ಕಣ್ಮರೆಯಾಗುವಂತೆ ಮಾಡುವುದು) ಮತ್ತು ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯಿದೆಯ ಸೆಕ್ಷನ್ 13 ರ ಅಡಿಯಲ್ಲಿ ಚಾರ್ಜ್‌ಶೀಟ್ ಸಲ್ಲಿಸಿದ್ದರು.
Advertisement
ಅಂದು ಏನಾಗಿತ್ತು?
2019ರ ಫೆ. 14 ರಂದು ಪುಲ್ವಾಮಾದಲ್ಲಿ ಸಿಆರ್‌ಪಿಎಫ್ ಯೋಧರಿದ್ದ ಬಸ್ಸಿಗೆ ಜೈಷ್ ಉಗ್ರ ಅದಿಲ್ ಅಹ್ಮದ್ ದಾರ್ ಇಕೋ ಕಾರನ್ನು ಗುದ್ದಿಸಿದ್ದ. ಪರಿಣಾಮ 40 ಮಂದಿ ಸೈನಿಕರು ಹುತಾತ್ಮರಾಗಿದ್ದರು. ಸ್ಫೋಟದ ತೀವ್ರತೆಗೆ ಯೋಧರ ದೇಹದ ಭಾಗಗಳು ಛಿದ್ರ ಛಿದ್ರವಾಗಿ ದೂರದವರೆಗೆ ಚಿಮ್ಮಿತ್ತು. ಈ ದಾಳಿಗೆ ಪ್ರತೀಕಾರವಾಗಿ ಭಾರತದ ವಾಯುಸೇನೆ ಮೊದಲ ಬಾರಿಗೆ ಪಾಕ್ ಆಕ್ರಮಿತ ಕಾಶ್ಮೀರಕ್ಕೆ ನುಗ್ಗಿ ಉಗ್ರರ ಶಿಬಿರಗಳ ಮೇಲೆ ಬಾಂಬ್ ದಾಳಿ ನಡೆಸಿತ್ತು.