ಬೆಂಗಳೂರು: ʼಸಿದ್ದು ನಿಜ ಕನಸುಗಳುʼ ಪುಸ್ತಕ ಬಿಡುಗಡೆ ಸಿಟಿ ಸಿವಿಲ್ ಕೋರ್ಟ್ (City Civil Court) ತಡೆ ನೀಡಿದೆ.
ಇಂದು ಮಧ್ಯಾಹ್ನ 3 ಗಂಟೆಗೆ ಬೆಂಗಳೂರಿನ ಪುರಭವನದಲ್ಲಿ ʼಸಿದ್ದು ನಿಜಕನಸುಗಳು ಸಂಪುಟ 1ʼ (Siddu Nija Kanasugalu) ಪುಸ್ತಕ ಬಿಡುಗಡೆ ಕಾರ್ಯಕ್ರಮ ಆಯೋಜನೆಗೊಂಡಿತ್ತು.
Advertisement
Advertisement
ಉನ್ನತ ಶಿಕ್ಷಣ ಸಚಿವ ಡಾ. ಸಿಎನ್ ಅಶ್ವತ್ಥನಾರಾಯಣ್ ಪುಸ್ತಕವನ್ನು ಬಿಡುಗಡೆಗೊಳಿಸಬೇಕಿತ್ತು. ಈ ಪುಸ್ತಕ ಬಿಡುಗಡೆಯಾಗುತ್ತಿದೆ ಎಂಬ ವಿಚಾರ ತಿಳಿದು ಪುರಭವವನದ ಬಳಿ ಕಾಂಗ್ರೆಸ್ ಮತ್ತು ಸಿದ್ದರಾಮಯ್ಯ ಅಭಿಮಾನಿಗಳು ಪ್ರತಿಭಟನೆ ನಡೆಸಿದ್ದರು. ಇದನ್ನೂ ಓದಿ: ಸಿದ್ದು ನಿಜಕನಸು ಪುಸ್ತಕಕ್ಕೆ ಸಿದ್ದರಾಮಯ್ಯ ಕೌಂಟರ್- ಸರಣಿ ಪೋಸ್ಟರ್ ಮೂಲಕ ತಿರುಗೇಟು
Advertisement
Advertisement
ಪುಸ್ತಕ ಬಿಡುಗಡೆ ವಿಚಾರ ಚರ್ಚೆ ಆಗುತ್ತಿದ್ದಂತೆ ಸಿದ್ದರಾಮಯ್ಯ ಪುತ್ರ ಯತೀಂದ್ರ (Yathindra Siddaramaiah) ಅವರು ಕೋರ್ಟ್ ಮೊರೆ ಹೋಗಿ ತಡೆ ನೀಡುವಂತೆ ಮನವಿ ಮಾಡಿದ್ದರು.
ಈ ಮನವಿಯನ್ನು ಪುರಸ್ಕರಿಸಿದ ನಗರದ ಸಿಟಿ ಸಿವಿಲ್ ಕೋರ್ಟ್ ಪುಸ್ತಕ ಬಿಡುಗಡೆಗೆ ತಡೆ ನೀಡಿದೆ. ಪುಸ್ತಕ ಬಿಡುಗಡೆ, ಮಾರಾಟ ಅಲ್ಲದೇ ಮಾಧ್ಯಮ ಪ್ರಸಾರಕ್ಕೆ ಕೋರ್ಟ್ ತಡೆಯಾಜ್ಞೆ ನೀಡಿ ಮುಂದಿನ ವಿಚಾರಣೆಯನ್ನು ಫೆ.9ಕ್ಕೆ ಮುಂದೂಡಿದೆ.
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k