– ಖುದ್ದು ವಿಚಾರಣೆಗೆ ಹಾಜರಾಗಲು ಸೂಚನೆ
ಬೆಂಗಳೂರು: ಸನಾತನ ಧರ್ಮ (Sanatan Dharma) ಡೆಂಗ್ಯೂ, ಮಲೇರಿಯಾ ಇದ್ದಂತೆ ಅಂತ ವಿವಾದಾತ್ಮಕ ಹೇಳಿಕೆ ನೀಡಿದ್ದ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್‌ಗೆ ಬೆಂಗಳೂರು ಕೋರ್ಟ್ (Bengaluru Court) ಸಮನ್ಸ್ ನೀಡಿದೆ.
ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್‌ಗೆ (Udhayanidhi Stalin) ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸಮನ್ಸ್ ನೀಡಿದ್ದು, ಖುದ್ದಾಗಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ. ಮಾರ್ಚ್ 4 ರಂದು ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಲಾಗಿದೆ. ಇದನ್ನೂ ಓದಿ: ಸನಾತನ ಧರ್ಮವನ್ನು ಕೊನೆವರೆಗೂ ವಿರೋಧಿಸುತ್ತೇನೆ: ಉದಯನಿಧಿ ಸ್ಟಾಲಿನ್
ಬೆಂಗಳೂರಿನ ಪರಮೇಶ್ ಎಂಬುವವರು ಉದಯನಿಧಿ ಹೇಳಿಕೆ ವಿರುದ್ಧ ಖಾಸಗಿ ದೂರು ಸಲ್ಲಿಸಿದ್ದರು. ಈ ಸಂಬಂಧ ವಿಚಾರಣೆ ನಡೆಸಿದ 42ನೇ ಎಸಿಎಂಎಂ ಕೋರ್ಟ್ ನ್ಯಾಯಾಧೀಶರಾದ ಜೆ. ಪ್ರೀತ್ ಅವರಿದ್ದ ಪೀಠ ಸಮನ್ಸ್ ಜಾರಿಗೊಳಿಸಿದೆ. ಇದನ್ನೂ ಓದಿ: ಸನಾತನ ಧರ್ಮದ ಬಗ್ಗೆ ಮಾತನಾಡಿದ್ದಕ್ಕೆ ಚಿಕ್ಕ ಮಗುವನ್ನ ಬೇಟೆಯಾಡ್ತಿದ್ದಾರೆ; ಉದಯನಿಧಿ ಸ್ಟಾಲಿನ್ ಬೆಂಬಲಿಸಿದ ಕಮಲ್
ಏನಿದು ಪ್ರಕರಣ?
2023ರ ಸೆಪ್ಟೆಂಬರ್ 3 ರಂದು ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ, ಸನಾತನನ ಧರ್ಮವು ಡೆಂಗ್ಯೂ, ಮಲೇರಿಯಾ ಇದ್ದಂತೆ. ಅದನ್ನು ನಿರ್ಮೂಲನೆ ಮಾಡಬೇಕೇ ಹೊರತು, ವಿರೋಧಿಸಬಾರದು ಎಂದು ಉದಯನಿಧಿ ಸ್ಟಾಲಿನ್ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಇದನ್ನೂ ಓದಿ: ಬಿಜೆಪಿ 400ಕ್ಕೂ ಹೆಚ್ಚು ಕ್ಷೇತ್ರ ಗೆಲ್ಲಲಿದೆ- ಖರ್ಗೆ ಹೇಳಿಕೆಗೆ ಜೋರಾಗಿ ನಕ್ಕ ಪ್ರಧಾನಿ
ಸನಾತನ ಧರ್ಮದ ನಿರ್ಮೂಲನೆ ಆಗಬೇಕು. ಅದು ಸಾಮಾಜಿಕ ನ್ಯಾಯ ಮತ್ತು ಸಮಾನತೆಗೆ ವಿರುದ್ಧವಾಗಿದೆ ಎಂದು ಕರೆ ನೀಡಿದ್ದರು. “ಕೆಲವು ವಿಷಯಗಳನ್ನು ವಿರೋಧಿಸಲು ಸಾಧ್ಯವಿಲ್ಲ. ಅದನ್ನು ನಿರ್ಮೂಲನೆ ಮಾಡಬೇಕು. ನಾವು ಡೆಂಗ್ಯೂ, ಸೊಳ್ಳೆಗಳು, ಮಲೇರಿಯಾ ಅಥವಾ ಕೊರೊನಾ ವೈರಸ್ ಅನ್ನು ವಿರೋಧಿಸಲು ಸಾಧ್ಯವಿಲ್ಲ. ಇದನ್ನು ನಿರ್ಮೂಲನೆ ಮಾಡಬೇಕು. ಅದೇ ರೀತಿ ಸನಾತನವನ್ನು ನಿರ್ಮೂಲನೆ ಮಾಡಬೇಕು ಎಂದು ಕರೆ ಕೊಟ್ಟಿದ್ದರು. ಈ ಸಂಬಂಧ ದೇಶಾದ್ಯಂತ ಪ್ರತಿಪಕ್ಷ ನಾಯಕರಿಂದ ವಿರೋಧ ವ್ಯಕ್ತವಾಗಿತ್ತು.