ಬೆಂಗಳೂರು: ಕೇಂದ್ರ ಸಚಿವ ಸದಾನಂದಗೌಡ ಅವರ ಪುತ್ರ ಕಾರ್ತಿಕ್ ಗೌಡಗೆ ಮತ್ತೆ ಸಂಕಷ್ಟ ಎದುರಾಗಿದ್ದು, ನಟಿ ಮೈತ್ರಿಯಾ ಗೌಡ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣವನ್ನು ತನಿಖೆ ನಡೆಸುವಂತೆ ಸುಪ್ರೀಂ ಕೋರ್ಟ್ ಆದೇಶಿಸಿದೆ.
ನಟಿ ವಿರುದ್ಧ ಲೈಂಗಿಕ ದೌರ್ಜನ್ಯದ ಪ್ರಕರಣದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಪ್ರಕರಣದಲ್ಲಿ ಸಾಕ್ಷ್ಯಾಧಾರಗಳಿದ್ದರೆ ಮತ್ತೆ ತನಿಖೆ ನಡೆಸುವಂತೆ ಸೂಚಿಸಿದೆ. ಈ ಹಿಂದೆ ನಟಿ ಮೈತ್ರಿಯಾ ನನ್ನನ್ನು ಮದುವೆಯಾಗುವುದಾಗಿ ನಂಬಿಸಿ ವಂಚನೆ ಮಾಡಲಾಗಿದೆ ಎಂದು ಕಾರ್ತಿಕ್ ಗೌಡ ವಿರುದ್ಧ ಆರೋಪಿಸಿದ್ದರು.
Advertisement
Advertisement
ಏನಿದು ಪ್ರಕರಣ?:
ಮೈತ್ರಿಯಾ ಗೌಡ ಅವರು ಕೇಂದ್ರ ಸಚಿವ ಸದಾನಂದ ಗೌಡ ಅವರ ಪುತ್ರನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಿಸಿದ್ದರು. ಈ ವೇಳೆ ತನಿಖೆ ನಡೆಸಿ ದೋಷಾರೋಪಟ್ಟಿಯಲ್ಲಿ ಅತ್ಯಾಚಾರ ನಡೆದಿಲ್ಲ ಎಂದು ಪ್ರಕರಣದಲ್ಲಿ 376 ಸೆಕ್ಷನ್ ತೆಗೆಯಲಾಗಿತ್ತು. ದೋಷರೋಪ ಪಟ್ಟಿ ವಿರುದ್ಧ ಹೈಕೋರ್ಟ್ ನಲ್ಲೂ ಅರ್ಜಿ ಸಲ್ಲಿಸಿದ್ದ ನಟಿ ಮೈತ್ರಿಯಾ ಗೌಡ ಮುಖಭಂಗ ಅನುಭವಿಸಿ ಬಳಿಕ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ಸದ್ಯ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ ಪ್ರಕರಣದಲ್ಲಿ ಸಂತ್ರಸ್ತೆಯ ಪರ ಸಾಕ್ಷ್ಯಾಧಾರಗಳಿದ್ದರೆ ಮರು ತನಿಖೆ ನಡೆಸುವಂತೆ ಸೂಚಿಸಿದೆ. ನ್ಯಾಯಾಲಯದ ಸೂಚನೆಯಂತೆ ಕಾರ್ತಿಕ್ ಗೌಡ ವಿರುದ್ಧ ಜಿಲ್ಲಾ ನ್ಯಾಯಾಲಯದಲ್ಲಿ ಮತ್ತೆ ವಿಚಾರಣೆ ನಡೆಯಲಿದೆ.
Advertisement
ಮೈತ್ರಿಯಾ ಗೌಡ ಆರೋಪದ ಬೆನ್ನಲ್ಲೇ ಕಾರ್ತಿಕ್ ಗೌಡ ಅವರಿಗೆ ಮದುವೆಯ ಕಾರ್ಯವೂ ನಡೆದಿತ್ತು, ಈ ಮದುವೆ ರದ್ದುಪಡಿಸುವಂತೆ ನಟಿ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು. ಕಾರ್ತಿಕ್ ಗೌಡ ಅವರೊಂದಿಗೆ ನನ್ನ ಮದುವೆಯಾಗಿದೆ. ಹಿಂದೂ ಧರ್ಮದ ಪ್ರಕಾರ ತಮ್ಮ ಮದುವೆ ನಡೆದಿದೆ ಎಂದು ತಿಳಿಸಿದ್ದರು. ಆದರೆ ನ್ಯಾಯಾಲಯ ಅರ್ಜಿಯನ್ನು ತಿರಸ್ಕರಿಸಿ ಪ್ರಕರಣದ ಇತ್ಯರ್ಥ ಪಡಿಸುವಂತೆ ಸೂಚನೆ ನೀಡಿತ್ತು.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ: www.instagram.com/publictvnews