ಬೆಂಗಳೂರು: ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಆರೋಗ್ಯದಲ್ಲಿ ಸಮಸ್ಯೆ ಕಾಣಿಸಿಕೊಂಡಿದ್ದು, ನಗರದ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಬೆನ್ನು ನೋವು, ಹೈ ಶುಗರ್, ಬಿಪಿ ವ್ಯತ್ಯಯ ಹಿನ್ನೆಲೆಯಲ್ಲಿ ನಗರದ ಶೇಷಾದ್ರಿಪುರಂ ಅಪೋಲೋ ಆಸ್ಪತ್ರೆಗೆ ಡಿ.ಕೆ.ಶಿವಕುಮಾರ್ ಆಗಮಿಸಿದ್ದರು. ತಪಾಸಣೆ ನಡೆಸಿದ ವೈದ್ಯರು ಮಾಜಿ ಸಚಿವರನ್ನು ದಾಖಲಿಸಿಕೊಂಡು ಚಿಕಿತ್ಸೆ ಮುಂದುವರಿಸಿದ್ದಾರೆ ಎಂದು ಮೂಲಗಳಿಂದ ಮಾಹಿತಿ ಲಭ್ಯವಾಗಿದೆ. ಇದನ್ನೂ ಓದಿ: ಡಿಕೆಶಿ ಮನೆಗೆ ಸಿದ್ದರಾಮಯ್ಯ, ಪರಮೇಶ್ವರ್, ಮುನಿಯಪ್ಪ ಭೇಟಿ – ‘ಬಂಡೆ’ ಆಲಂಗಿಸಿ ಭಾವುಕರಾದ ಪರಂ
Advertisement
Advertisement
ದೆಹಲಿಯ ತಿಹಾರ್ ಜೈಲಿನಲ್ಲಿ 48 ದಿನಗಳಿದ್ದ ಡಿ.ಕೆ.ಶಿವಕುಮಾರ್ ಅವರು ಅಕ್ಟೋಬರ್ 23ರಂದು ಜಾಮೀನನ ಮೇಲೆ ಹೊರ ಬಂದಿದ್ದರು. ತಿಹಾರ್ ಜೈಲಿನಲ್ಲಿದ್ದಾಗ ಅನಾರೋಗ್ಯ ಸಮಸ್ಯೆ ಎದುರಿಸಿದ್ದ ಮಾಜಿ ಸಚಿವರಿಗೆ ಆರ್‌ಎಂಎಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿತ್ತು. ಜಾಮೀನು ಪಡೆದು ಅಕ್ಟೋಬರ್ 26ರಂದು ಬೆಂಗಳೂರಿಗೆ ಆಗಮಿಸಿದ್ದ ಅವರನ್ನು ಅದ್ಧೂರಿಯಾಗಿ ಸ್ವಾಗತಿಸಲಾಗಿತ್ತು. ಇದನ್ನೂ ಓದಿ: ಇದು ಕೇವಲ ಆರಂಭ ಅಷ್ಟೇ, ಅಂತ್ಯ ಅಲ್ಲ: ಗುಡುಗಿದ ಕನಕಪುರ ಬಂಡೆ
Advertisement
ಬೆಂಗಳೂರಿಗೆ ಆಗಮಿಸಿದ ಡಿ.ಕೆ.ಶಿವಕುಮಾರ್ ರಾಜ್ಯದ ವಿವಿಧ ಮಠಗಳಿಗೆ ಭೇಟಿ ನೀಡಿ, ಶ್ರೀಗಳ ಆಶೀರ್ವಾದ ಪಡೆದಿದ್ದರು. ಬೆಂಗಳೂರಿಗೆ ಆಗಮಿಸಿದ ದಿನವೇ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ್ದರು. ಆದರೆ ಇಂದು ಸಂಜೆ ಬಿಪಿ, ಶುಗರ್ ಪರೀಕ್ಷೆಗೆಂದು ಅಪೋಲೋ ಆಸ್ಪತ್ರೆಗೆ ಲಗೇಜ್ ಸಮೇತ ಆಗಮಿಸಿದ್ದರು. ಪರೀಕ್ಷೆ ನಡೆಸಿದ ವೈದ್ಯರು ಮಾಜಿ ಸಚಿವರನ್ನು ದಾಖಲಿಸಿಕೊಂಡು ಚಿಕಿತ್ಸೆ ನೀಡುತ್ತಿದ್ದಾರೆ. ಆಸ್ಪತ್ರೆಗೆ ಪತ್ನಿ ಉಷಾ ಶಿವಕುಮಾರ್ ಹಾಗೂ ಪುತ್ರಿ ಐಶ್ವರ್ಯ ಆಗಮಿಸಿ, ಯೋಗಕ್ಷೇಮ ವಿಚಾರಿಸಿದ್ದಾರೆ.