ಬೆಂಗಳೂರು: ಸಚಿವ ಕೆ.ಎಸ್ ಈಶ್ವರಪ್ಪ ರಾಜೀನಾಮೆಗೆ ಒತ್ತಾಯಿಸಿ ಕಾಂಗ್ರೆಸ್ ನಾಯಕರು ನಡೆಸುತ್ತಿರುವ ಅಹೋರಾತ್ರಿ ಧರಣಿ ಎರಡನೇ ದಿನವೂ ಮುಂದುವರಿದಿದೆ.
ಧರಣಿಯಲ್ಲಿ ಪಾಲ್ಗೊಳ್ಳುತ್ತಿರುವ ಹಲವು ಕಾಂಗ್ರೆಸ್ ಸದಸ್ಯರು ವಿರೋಧ ಪಕ್ಷದವರ ಮೊಗಸಾಲೆಯಲ್ಲಿ ಕ್ರಿಕೆಟ್ ಮ್ಯಾಚ್ ವೀಕ್ಷಣೆ ಮಾಡಿದ್ದಾರೆ. ಇನ್ನು ಧರಣಿ ಹಿನ್ನೆಲೆ ವಿಧಾನಸೌಧದಲ್ಲಿ ಕಾಂಗ್ರೆಸ್ ಶಾಸಕರಿಗೆ ಊಟದ ವ್ಯವಸ್ಥೆ ಮಾಡಲಾಗಿದೆ. ವಿಜಯನಗರದ ಖಾಸಗಿ ಹೋಟೆಲ್‍ನಿಂದ ರಾತ್ರಿ ಊಟ ಬಂದಿದ್ದು, ಸ್ಪೀಕರ್ ಸಚಿವಾಲಯದಿಂದ ವೆಜ್ ಊಟದ ವ್ಯವಸ್ಥೆ ಕಲ್ಪಿಸಲಾಗಿದೆ.
Advertisement
Advertisement
ಕಾಂಗ್ರೆಸ್ ಧರಣಿ ಹಿನ್ನೆಲೆಯಲ್ಲಿ ವಿಧಾನಸೌಧದಲ್ಲಿ ಕಾಂಗ್ರೆಸ್ ನಾಯಕರಿಗೆ ಬೆಡ್, ತಲೆ ದಿಂಬುಗಳು ಹಾಗೂ ಹೊದಿಕೆ ವ್ಯವಸ್ಥೆ ಮಾಡಲಾಗಿತ್ತು. ಧರಣಿ ಹಿನ್ನೆಲೆಯಲ್ಲಿ ಮಾಜಿ ಸಚಿವ ಯು.ಟಿ.ಖಾದರ್ ಅವರು ಟ್ರಾಕ್ ಪ್ಯಾಂಟ್ ಹಾಗೂ ಟೀ ಶರ್ಟ್ ಧರಿಸಿ ಆಗಮಿಸಿದ್ದರು. ಇದನ್ನೂ ಓದಿ: ನೀವಿಬ್ಬರೂ ಒಂದಾಗಿ ನಮ್ಮ ಕ್ಷೇತ್ರಗಳಿಗೆ ಬಂದ್ರೆ ಚುನಾವಣೆ ಗೆಲ್ಲಬಹುದು: ಡಿಕೆಶಿ, ಸಿದ್ದರಾಮಯ್ಯಗೆ ಕೈ ಶಾಸಕರ ಮನವಿ
Advertisement
Advertisement
ಸಚಿವ ಈಶ್ವರಪ್ಪರಿಂದ ರಾಜೀನಾಮೆ ಪಡೆಯೋದಲ್ಲ ಅವರನ್ನು ಸಚಿವ ಸ್ಥಾನದಿಂದ ವಜಾ ಮಾಡಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಇಂದು ಪಬ್ಲಿಕ್ ಟಿವಿ ಜೊತೆಗೆ ಮಾತನಾಡಿದ ಅವರು, ನಾವು ರಾಷ್ಟ್ರದ್ರೋಹದ ಕೆಲಸ ಮಾಡಿಲ್ಲ, ಈಶ್ವರಪ್ಪ ರಾಷ್ಟ್ರ ದ್ರೋಹದ ಕೆಲಸ ಮಾಡಿರೋದು. ಡಿಜಿ ವಿರುದ್ಧ ಮೊದಲು ಕ್ರಮ ಕೈಗೊಳ್ಳಬೇಕು ಎಂದರು. ಇದನ್ನೂ ಓದಿ: ವಿದ್ಯಾರ್ಥಿನಿಗೆ ಶರ್ಟ್ ಬಿಚ್ಚಿಕೊಡಲು ಮುಂದಾದ ಕಾಫಿನಾಡಿನ ಸರ್ಕಲ್ ಇನ್ಸ್‌ಪೆಕ್ಟರ್
ಡಿಜಿ ಯಾಕೆ ಇದುವರೆಗೆ ಈಶ್ವರಪ್ಪ ವಿರುದ್ಧ ಕೇಸು ದಾಖಲಿಸಿಲ್ಲ..? ಕುಮಾರಸ್ವಾಮಿಯವರು ನಮ್ಮನ್ನು ಟೀಕಿಸೋ ಬದಲು ಇಲ್ಲಿ ಬಂದು ಅಹೋರಾತ್ರಿ ಧರಣಿ ಮಾಡಲಿ. ಸೋಮವಾರದಿಂದ ಪ್ರತಿ ತಾಲೂಕುಗಳಲ್ಲಿ ರಾಷ್ಟ್ರಧ್ವಜ ಹಿಡಿದು ಪ್ರತಿಭಟನೆ ರ್ಯಾಲಿ ನಡೆಸುತ್ತೇವೆ. ತಹಸೀಲ್ದಾರರಿಗೆ ಮನವಿ ಕೊಟ್ಟು ರಾಜ್ಯಪಾಲರಿಗೆ ತಲುಪಿಸುತ್ತೇವೆ ಎಂದು ಡಿಕೆಶಿವಕುಮಾರ್ ಹೇಳಿದ್ದಾರೆ.