ಬೆಂಗಳೂರು: ಸುಪ್ರೀಂಕೋರ್ಟಿನಲ್ಲಿ ಸಾಲು ಸಾಲು ಹಿನ್ನೆಡೆಯ ಬಳಿಕ ಅನರ್ಹ ಶಾಸಕರಿಗೆ ಮತ್ತೊಂದು ಶಾಕ್ ಎದುರಾಗಿದೆ.
ಹೌದು. ಇಂದು ಕೇಂದ್ರ ಚುನಾವಣಾ ಆಯೋಗದಿಂದ ರಾಜ್ಯದ 17 ಕ್ಷೇತ್ರಗಳ ಉಪ ಚುನಾವಣೆಗೆ ದಿನಾಂಕ ಘೋಷಣೆಯಾಗುವ ಸಾಧ್ಯತೆ ಇದೆ. ಮಹಾರಾಷ್ಟ್ರ, ಹರಿಯಾಣ ರಾಜ್ಯಗಳ ವಿಧಾನಸಭೆ ಚುನಾವಣೆಗೆ ದಿನಾಂಕವನ್ನು ಆಯೋಗವು ಇಂದು ಮಧ್ಯಾಹ್ನ 12 ಗಂಟೆಗೆ ದಿನಾಂಕ ಪ್ರಕಟಿಸಲಿದೆ.
ಮಹಾರಾಷ್ಟ್ರ, ಹರಿಯಾಣ ಜೊತೆಗೆ ರಾಜ್ಯದ 17 ಕ್ಷೇತ್ರಗಳಿಗೆ ಕೂಡ ಉಪ ಚುನಾವಣೆ ದಿನಾಂಕ ಘೋಷಣೆಯಾಗುವ ಸಾಧ್ಯತೆಗಳಿವೆ. ಈ ಹಿನ್ನೆಲೆಯಲ್ಲಿ ಚುನಾವಣೆಗೂ ಮುನ್ನ ಮಂತ್ರಿಯಾಗುವ ಆಸೆಯಲ್ಲಿದ್ದ ಅನರ್ಹ ಶಾಸಕರಿಗೆ ಬಿಗ್ ಶಾಕ್ ಉಂಟಾಗಿದೆ.