ಬೆಂಗ್ಳೂರಿಗೆ ತಟ್ಟಿದ ಪ್ರತಿಭಟನೆ ಬಿಸಿ- ಖಾಸಗಿ ಬಸ್‍ಗೆ ಬೆಂಕಿ

Public TV
1 Min Read
bus fire

ಬೆಂಗಳೂರು: ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಬಂಧನ ಖಂಡಿಸಿ ರಾಮನಗರ, ಕನಕಪುರದಲ್ಲಿ ದೊಡ್ಡ ಮಟ್ಟದಲ್ಲಿ ಪ್ರತಿಭಟನೆ ನಡೆಯುತ್ತಿದೆ. ಪ್ರತಿಭಟನೆಯ ಬಿಸಿ ಬೆಂಗಳೂರಿಗೆ ತಾಗಿದ್ದು, ಸ್ಯಾಂಕಿ ಟ್ಯಾಂಕಿ ರಸ್ತೆಯಲ್ಲಿ ಖಾಸಗಿ ಬಸ್‍ಗೆ ಕಲ್ಲು ಹೊಡೆದು ಬೆಂಕಿ ಹೆಚ್ಚಲಾಗಿದೆ.

ಬಸ್ ನಲ್ಲಿ ಪ್ರಯಾಣಿಕರು ಇಲ್ಲದ ಪರಿಣಾಮ ದೊಡ್ಡ ಅನಾಹುತವೊಂದು ತಪ್ಪಿದೆ. ವಿಷಯ ತಿಳಿದು ವೈಯಾಲಿ ಕಾವಲ್ ಪೊಲೀಸರು ಆಗಮಿಸುತ್ತಿದ್ದಂತೆ ಬೆಂಕಿ ಹೆಚ್ಚಿದ್ದವರು ಸ್ಥಳದಿಂದ ಪರಾರಿಯಾಗಿದ್ದಾರೆ. ಪೊಲೀಸರು ಕೂಡಲೇ ರಸ್ತೆಯಿಂದ ಬಸ್ ತೆರವುಗೊಳಿಸಿ ಸಂಚಾರಕ್ಕೆ ಅನುಕೂಲ ಮಾಡಿಕೊಟ್ಟಿದ್ದಾರೆ.

vlcsnap 2019 09 04 09h31m20s143

ರಾಮನಗರದಲ್ಲಿ ಮಂಗಳವಾರ ರಸ್ತೆ ತಡೆದು ಪ್ರತಿಭಟನೆ ನಡೆಸಿ ಸಾರ್ವಜನಿಕ ಆಸ್ತಿ ಹಾನಿ ಮಾಡಿದ್ದಕ್ಕೆ 15 ಜನರ ವಿರುದ್ಧ ಪೊಲೀಸರು ಎಫ್‍ಐಆರ್ ದಾಖಲಿಸಿಕೊಂಡಿದ್ದಾರೆ. ಕನಕಪುರ ಮತ್ತು ರಾಮನಗರ ಬಂದ್ ವಾತಾವರಣ ನಿರ್ಮಾಣವಾಗಿದ್ದು, ಬಸ್ ಗಳು ರಸ್ತೆಗೆ ಇಳಿದಿಲ್ಲ.

Share This Article
Leave a Comment

Leave a Reply

Your email address will not be published. Required fields are marked *