ಬೆಂಗಳೂರು: ಮಳೆಯಿಂದ ಕಾರು ಟ್ರಾಫಿಕ್‍ನಲ್ಲಿ ಸಿಲುಕಿಕೊಂಡು ಡಾಕ್ಟರ್ (Doctor) ಒಬ್ಬರು 3 ಕಿ.ಮೀ ಓಡಿಕೊಂಡು ಆಸ್ಪತ್ರೆಗೆ (Hospital) ತೆರಳಿ ರೋಗಿಗೆ ಶಸ್ತ್ರಚಿಕಿತ್ಸೆ (Surgery) ಮಾಡಿರುವ ಘಟನೆ ಬೆಂಗಳೂರಿನಲ್ಲಿ (Bengaluru) ನಡೆದಿದೆ.
Advertisement
ಟ್ರಾಫಿಕ್‍ನಲ್ಲಿ ಸಿಲುಕಿದ್ದ ಡಾ. ಗೋವಿಂದ ನಂದಕುಮಾರ್ ಬೆಂಗಳೂರಿನ ಸರ್ಜಾಪುರದ ಮಣಿಪಾಲ್ ಆಸ್ಪತ್ರೆಯಲ್ಲಿ (Manipal Hospital) ಸರ್ಜನ್ ಆಗಿ ಕೆಲಸ ಮಾಡುತ್ತಿದ್ದು, ಸಕಾಲಕ್ಕೆ ರೋಗಿಗೆ ಚಿಕಿತ್ಸೆ ಸಿಗಬೇಕು ಎಂದು ಟ್ರಾಫಿಕ್‍ನಲ್ಲಿ ಸಿಲುಕಿದ್ದ ಕಾರನ್ನು ಅಲ್ಲೇ ಬಿಟ್ಟು ಓಡಿ ಶಸ್ತ್ರಚಿಕಿತ್ಸೆ ನೀಡಿ ಮಾನವೀಯತೆ ಮೆರೆದಿದ್ದಾರೆ. ಇದನ್ನೂ ಓದಿ: ಗುಂಡಿ ಮುಚ್ಚಲು ಕಟ್ಟಡ ತ್ಯಾಜ್ಯ ಬಳಸಿದ ಪಾಲಿಕೆ – BBMP ಕಳಪೆ ಕಾಮಗಾರಿಗೆ ಜನರ ಛೀಮಾರಿ
Advertisement
Advertisement
ಘಟನೆಯ ಹಿನ್ನೆಲೆ:
ಆಗಸ್ಟ್ 30 ರಂದು ರೋಗಿಯೊಬ್ಬರಿಗೆ ಲ್ಯಾಪ್ರೋ ಸ್ಕೋಪಿಕ್ ಗ್ಲಾಡ್ ಬ್ಲಡರ್ ಚಿಕಿತ್ಸೆ ಮಾಡಬೇಕಾಗಿತ್ತು. ಹಾಗಾಗಿ ಡಾ. ಗೋವಿಂದ ನಂದಕುಮಾರ್ ಕನ್ನಿಂಗ್ ಹ್ಯಾಮ್‍ನಿಂದ ಸರ್ಜಾಪುರದ ಮಣಿಪಾಲ್ ಆಸ್ಪತ್ರೆಗೆ ಕಾರಿನಲ್ಲಿ ತೆರಳುತ್ತಿದ್ದರು. ಅಂದು ವಿಪರೀತ ಮಳೆಯಾಗಿತ್ತು. ಪರಿಣಾಮ ಮಾರತಹಳ್ಳಿ ಮತ್ತು ಸರ್ಜಾಪುರದ ರಸ್ತೆ ಕಂಪ್ಲೀಟ್ ಜಾಮ್ ಆಗಿತ್ತು. ಬೆಳ್ಳಗ್ಗೆ 10 ಗಂಟೆಗೆ ಶಸ್ತ್ರಚಿಕಿತ್ಸೆ ನಿಗದಿಯಾಗಿತ್ತು. ಟ್ರಾಫಿಕ್ ಇದ್ದ ಪರಿಣಾಮ ಆಸ್ಪತ್ರೆ ತಲುಪಲು 1 ಗಂಟೆ ಸಮಯ ಹಿಡಿಯುತ್ತಿತ್ತು. ಹೀಗಾಗಿ ವೈದ್ಯರು ಕಾರನ್ನು ಆಸ್ಪತ್ರೆಗೆ ತರುವಂತೆ ಕಾರು ಚಾಲಕನಿಗೆ ಹೇಳಿ 3 ಕಿ.ಮೀ ಓಡಿಹೋಗಿ ಶಸ್ತ್ರ ಚಿಕಿತ್ಸೆ ಮಾಡಿದ್ದಾರೆ. ಇದನ್ನೂ ಓದಿ: ಗುಂಡಿ ಮುಚ್ಚಲು ಕಟ್ಟಡ ತ್ಯಾಜ್ಯ ಬಳಸಿದ ಪಾಲಿಕೆ – BBMP ಕಳಪೆ ಕಾಮಗಾರಿಗೆ ಜನರ ಛೀಮಾರಿ
Advertisement
ವೈದ್ಯರು ಓಡಿಹೋಗಿ ಮಾಡಿದ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದ್ದು, ರೋಗಿಯು ಆರೋಗ್ಯವಾಗಿ ಇದ್ದಾರೆ. ಇದೀಗ ವೈದ್ಯರ ಈ ನಡೆಗೆ ಸೋಶಿಯಲ್ ಮೀಡಿಯಾದಲ್ಲಿ ಬಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ.