Bengaluru City

ಕನ್ನಡಿಗರು ಕೊಟ್ಟ ಹೆಸರಿಗೆ ಧಕ್ಕೆ ಮಾಡಿಲ್ಲ, ಯಾವತ್ತೂ ಮಾಡಲ್ಲ: ಕಣ್ಣೀರಿಟ್ಟ ಅನುಶ್ರೀ

Published

on

Share this

– ನನ್ನ ಅಪರಾಧಿಯಾಗಿ ಬಿಂಬಿಸಿದ್ದು ನೋವಾಗಿದೆ
– 1 ವಾರದಿಂದ ನೆಮ್ಮದಿ ಹಾಳಾಗಿದೆ

ಬೆಂಗಳೂರು: ಸ್ಯಾಂಡಲ್‍ವುಡ್ ಡ್ರಗ್ಸ್ ಪ್ರಕರಣ ಸಂಬಂಧ ಈಗಾಗಲೇ ಸಿಸಿಬಿ ವಿಚಾರಣೆ ಎದುರಿಸಿರುವ ನಿರೂಪಕಿ, ನಟಿ ಅನುಶ್ರೀ ಇಂದು ಕಣ್ಣೀರು ಹಾಕಿದ್ದಾರೆ.

ಈ ಸಂಬಂಧ ವೀಡಿಯೋ ಮಾಡಿರುವ ಅವರು, ಈ ವೀಡಿಯೋವನ್ನು ನಾನು ನನ್ನನ್ನು ಸಮರ್ಥಿಸಿಕೊಳ್ಳಲು ಅಥವಾ ಕರುಣೆಗೋಸ್ಕರ ಮಾಡುತ್ತಿಲ್ಲ. ಎಲ್ಲರೂ ತಮ್ಮ ತಮ್ಮ ಅಭಿಪ್ರಾಯಗಳನ್ನು ಸುತ್ತಮುತ್ತ ಹೇಳುತ್ತಿದ್ದಾರೆ. ಈ ಅಭಿಪ್ರಾಯಗಳು ನನ್ನ ಬಗ್ಗೆ ಇರುವುದರಿಂದ ಈ ವೀಡಿಯೋ ಮಾಡುತ್ತಿದ್ದೇನೆ ಎಂದು ಹೇಳಿ ಗಳಗಳನೇ ಕಣ್ಣೀರಿಟ್ಟಿದ್ದಾರೆ.

ವೀಡಿಯೋದಲ್ಲಿ ಹೇಳಿದ್ದೇನು?
20020ರ ಸೆಪ್ಟೆಂಬರ್ 24 ನನ್ನ ಜೀವನದ ಯಾವ ಘಟ್ಟದಲ್ಲೂ ನಾನು ಮತ್ತೆ ನೆನಪಿಸಿಕೊಳ್ಳೋದಕ್ಕೆ ಇಷ್ಟಪಡದಿರುವಂತಹ ದಿನ. 12 ವರ್ಷಗಳ ಹಿಂದೆ ನಾನು ಡ್ಯಾನ್ಸ್ ರಿಯಾಲಿಟಿ ಶೋ ಒಂದರಲ್ಲಿ ಗೆದ್ದಾಗ, ಆ ದಿನ ಭವಿಷ್ಯದಲ್ಲಿ ಮುಳ್ಳಾಗುತ್ತೆ ಅಂತ ಅಂದುಕೊಂಡಿರಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ನೋಟಿಸ್ ಬಂದಿರುವುದು ನನಗೆ ಬೇಜಾರಾಗಿಲ್ಲ. ಸಿಸಿಬಿ ಕಚೇರಿಗೆ ಹೋದ ಮಾತ್ರಕ್ಕೆ ನಾನು ಅಪರಾಧಿ ಅಥವಾ ಆರೋಪಿ ಅಂತ ಆಗುವುದಿಲ್ಲ. ಆ ವಿಚಾರದಲ್ಲಿ ನನ್ನನ್ನು ಬಿಂಬಿಸಿದ ರೀತಿ ನನಗೆ ತುಂಬಾನೇ ನೋವು ಮಾಡಿತ್ತು. ನೋವು ತುಂಬಾ ಸಣ್ಣ ಪದ. ಕಳೆದ ಒಂದು ವಾರದಿಂದ ನಮ್ಮ ಮನೆಯವರ ನೆಮ್ಮದಿಯನ್ನು ಹಾಳು ಮಾಡಿತ್ತು. ಆದರು ಕೂಡ ಈ ಕಷ್ಟಕಾಲದಲ್ಲಿ ಏನೂ ಹೆಳದೆ, ಏನೂ ಕೇಳದೆ ಅನುಶ್ರೀ ನೀವೇನು ಅಂತ ನಮಗೆ ಚೆನ್ನಾಗಿ ಗೊತ್ತು. ನಿಮ್ಮ ಮೇಲೆ ನಮಗೆ ಅಪಾರವಾದ ನಂಬಿಕೆ ಇದೆ ಅಂತ ನನ್ನ ಜೊತೆ ನಿಂತಿರುವ ಎಲ್ಲಾ ಕನ್ನಡಿಗರಿಗೆ ತುಂಬು ಹೃದಯದ ಧನ್ಯವಾದಗಳು. ಇದನ್ನು ನಾನು ಯಾವತ್ತೂ ಮರೆಯಲ್ಲ ಎಂದು ಹೇಳಿದ್ದಾರೆ.

ಇದನ್ನು ಮೀರಿ ಕೂಡ ಸುತ್ತಮುತ್ತ ಕೆಲವೊಂದಷ್ಟು ಅಭಿಪ್ರಾಯಗಳು, ವಿಚಾರಗಳು, ಅಂತೆಕಂತೆಗಳು ಇದು ನಮ್ಮ ನೆಮ್ಮದಿನ ತುಂಬಾನೇ ಹಾಳು ಮಾಡುತ್ತಿದೆ. ದಯಮಾಡಿ ಇಂತಹ ವಿಚಾರಗಳನ್ನು ಹರಿದಾಡಿಸುವ ಮುನ್ನ ಒಂದು ಬಾರಿ ನಮ್ಮ ಮನಸ್ಥಿತಿ ಬಗ್ಗೆ ಯೋಚನೆ ಮಾಡಿ. ನಾನಿಷ್ಟೆ ನಿಮ್ಮಲ್ಲಿ ಕೇಳಿಕೊಳ್ಳುತ್ತಿದ್ದೇನೆ ಎಂದು ಮನವಿ ಮಾಡಿಕೊಂಡಿದ್ದಾರೆ.

ಇಷ್ಟೊಂದು ಕಷ್ಟದ ದಿನಗಳಲ್ಲಿ ನನಗೆ ನೆರಳಾಗಿ ನಿಂತಿರುವ ನನ್ನ ಕುಟುಂಬ, ನನ್ನ ತಂಡ, ಸ್ನೇಹಿತರು ಎಲ್ಲರಿಗೂ ಧನ್ಯವಾದಗಳು. ನನ್ನ ಪರಿಸ್ಥಿತಿಯನ್ನು ಅರ್ಥಮಾಡಿಕೊಂಡು ನನ್ನನ್ನು ಬೆಂಬಲಿಸುತ್ತಿರೋ ಮಾಧ್ಯಮಮಿತ್ರರಿಗೂ ಧನ್ಯವಾದ. ಕನ್ನಡಿಗರು ಕೊಟ್ಟ ಈ ಹೆಸರಿಗೆ ಯಾವುದೇ ಧಕ್ಕೆ ಬರುವಂತಹ ಯಾವುದೇ ಕೆಲಸವನ್ನು ನಾನು ಮಾಡಿಲ್ಲ. ಮುಂದೆಯೂ ಮಾಡಲ್ಲ ಎಂದು ಹೇಳುತ್ತಾ ಅನುಶ್ರೀ ಗದ್ಗದಿತರಾಗಿದ್ದಾರೆ.

ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗೇ ನಟಿಯರಾದ ರಾಗಿಣಿ ದ್ವಿವೇದಿ ಹಾಗೂ ಸಂಜನಾ ಜೈಲುಪಾಲಾಗಿದ್ದಾರೆ. ಈ ಮಧ್ಯೆ ಮಂಗೂರಿನಲ್ಲಿ ಡ್ಯಾನ್ಸರ್ ಕಿಶೋರ್ ಹಾಗೂ ತರುಣ್, ನೌಶೀನ್ ಎಂಬವರನ್ನು ಬಂಧಿಸಲಾಗಿತ್ತು. ವಿಚಾರಣೆಯ ವೇಳೆ ತರುಣ್, ಅನುಶ್ರೀ ಕುಡಿತಿದ್ದಳು ಅಂತ ಮಾತ್ರ ಹೇಳಿದ್ದ. ಆದರೆ ಪೊಲೀಸರು ತನಿಖೆ ಚುರುಕುಗೊಳಿಸಿದ ಬಳಿಕ ಒಂದೊಂದೇ ಮಾಹಿತಿ ಬಾಯ್ಬಿಟ್ಟಿದ್ದಾನೆ. ನಾವು ಡ್ರಗ್ ಪಾರ್ಟಿ ಮಾಡುತ್ತಿದ್ವಿ, ಪಾರ್ಟಿಯಲ್ಲಿ ಅನುಶ್ರೀ ಡ್ರಗ್ಸ್ ತೆಗೆದುಕೊಳ್ಳತ್ತಿದ್ದಳು ಎಂದು ಬಾಯ್ಬಿಟ್ಟಿದ್ದಾನೆ ಎನ್ನಲಾಗಿತ್ತು. ಡ್ರಗ್ಸ್ ಪೆಡ್ಲರ್ ಗಳ ಜೊತೆ ಸಂಪರ್ಕ ಹೊಂದಿದ್ದ ಆರೋಪದ ಮೇಲೆ ನಿರೂಪಕಿ ಅನುಶ್ರೀಗೆ ಈ ಹಿಂದೆ ಸಿಸಿಬಿ ನೋಟಿಸ್ ನೀಡಿತ್ತು. ಹೀಗಾಗಿ ಅನುಶ್ರೀ ವಿಚಾರಣೆಗೆ ಹಾಜರಾಗಿದ್ದರು.

Click to comment

Leave a Reply

Your email address will not be published. Required fields are marked *

Advertisement
Bengaluru City30 mins ago

ನರೇಂದ್ರ ಮೋದಿ ಹುಟ್ಟುಹಬ್ಬ- ಶುಭ ಕೋರಿದ ಎಚ್‍ಡಿಡಿ, ಎಚ್‍ಡಿಕೆ

Dharwad33 mins ago

ರಿಸರ್ವ್ ಪೊಲೀಸ್  ಇನ್ಸ್‌ಪೆಕ್ಟರ್ ಬುಲೆರೋ ವಾಹನ ಅಪಘಾತ

Bengaluru City55 mins ago

ಎಲ್ಲರಿಗೂ ಇಷ್ಟವಾಗುವಂತ ರುಚಿ ರುಚಿಯಾದ ಕ್ಯಾರೆಟ್ ಪಾಯಸ ಮಾಡಿ

Bengaluru City1 hour ago

10ನೇ ತರಗತಿಯಲ್ಲಿ ಶೇ.90 ಅಂಕ ಗಳಿಸಿದ ವಿದ್ಯಾರ್ಥಿ, ನಿವೃತ್ತ ಹವಾಲ್ದಾರ್ ಪುತ್ರ ಶೂಟ್ ಮಾಡಿಕೊಂಡು ಆತ್ಮಹತ್ಯೆ

Bengaluru City1 hour ago

ಗ್ರಾಹಕನ ಸೋಗಿನಲ್ಲಿ ಬಂದು ಮೊಬೈಲ್ ಕದ್ದ

Automobile2 hours ago

1 ದಿನದಲ್ಲೇ 600 ಕೋಟಿ ಮೌಲ್ಯದ 80 ಸಾವಿರ ಓಲಾ ಸ್ಕೂಟರ್ ಮಾರಾಟ

Dharwad2 hours ago

ಹುಬ್ಬಳ್ಳಿ ನಗರದಲ್ಲಿ ಹೊತ್ತಿ ಉರಿದ ಕಾರು

Chikkamagaluru2 hours ago

100 ಟನ್, 20 ಅಡಿ ಉದ್ದದ ರೇಣುಕಾಚಾರ್ಯರ ಪ್ರತಿಮೆಯ ಶಿಲೆ 100 ಚಕ್ರದ ಲಾರಿಯಲ್ಲಿ ರಂಭಾಪುರಿ ಮಠಕ್ಕೆ ಆಗಮನ

Bengaluru City3 hours ago

ಪಬ್ಲಿಕ್ ಟಿವಿ ಮೆಗಾ ಶೈಕ್ಷಣಿಕ ಉತ್ಸವ ವಿದ್ಯಾಪೀಠಕ್ಕೆ ನಾಳೆ ಚಾಲನೆ

Daily Horoscope in Kannada
Astrology4 hours ago

ದಿನ ಭವಿಷ್ಯ 17-09-2021