ಬೆಂಗಳೂರು: ಪ್ರತಿಷ್ಠಿತ ಕಾಲೇಜು ವಿದ್ಯಾರ್ಥಿಗಳಿಗೆ ಡ್ರಗ್ಸ್ ಮಾರಾಟ ಮಾಡುತ್ತಿದ್ದವರನ್ನು ಸಿಲಿಕಾನ್ ಸಿಟಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಬಂಧಿತ ಆರೋಪಿಗಳನ್ನು ಆಂಧ್ರಪ್ರದೇಶ ಮೂಲದ ಹರಿಕೃಷ್ಣನ್, ಮಹಮ್ಮದ್, ಫಿಬಿನ್, ಹರಿಶಂಕರ್, ರಾಹುಲ್ ಎಂದು ಗುರುತಿಸಲಾಗಿದೆ. ವಿಶೇಷ ಎಂದರೆ ಬಂಧಿತ ಆರೋಪಿಗಳೆಲ್ಲ ಎಂಎಸ್ಸಿ, ಬಿಎಸ್ಸಿ ಮತ್ತು ಮೆಕ್ಯಾನಿಕಲ್ ಎಂಜಿನಿಯರ್ ವಿದ್ಯಾರ್ಥಿಗಳಾಗಿರೋದು ದುರಂತ. ಆಂಧ್ರ ಪ್ರದೇಶದ ವಿಶಾಖಪಟ್ಟಣದಿಂದ ಡ್ರಗ್ಸ್ ಗಳನ್ನು ತರುತ್ತಿದ್ದ ಆರೋಪಿಗಳು, ನಗರದ ಶ್ರೀಮಂತರ ಮಕ್ಕಳನ್ನು ಟಾರ್ಗೆಟ್ ಮಾಡಿ ಮಾರಾಟ ಮಾಡುತ್ತಿದ್ದರು.
Advertisement
Advertisement
ಬೆಂಗಳೂರು ಪೊಲೀಸರು ಡ್ರಗ್ಸ್ ಮಾರಾಟದ ವಿರುದ್ಧ ಎಷ್ಟೇ ಕಠಿಣ ಕ್ರಮ ಕೈಕೊಳ್ಳುತ್ತಿದ್ದರು, ಡ್ರಗ್ಸ್ ಮಾರಾಟ ದಂಧೆ ಮಾತ್ರ ನಿಲ್ಲುತ್ತಿರಲಿಲ್ಲ. ನಗರದ ಪ್ರತಿಷ್ಠಿತ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೇರೆ ಬೇರೆ ರಾಜ್ಯದಿಂದ ವಿವಿಧ ರೀತಿಯ ಡ್ರಗ್ಸ್ ಗಳನ್ನು ಮಾರಾಟ ಮಾಡುವವರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಲೇ ಇತ್ತು. ಹೀಗಾಗಿ ನಗರ ಪೂರ್ವ ವಿಭಾಗದ ಪ್ರತಿಷ್ಠಿತ ಕಾಲೇಜುಗಳು, ಪಬ್‍ಗಳು, ಐಟಿಬಿಟಿ ಸೆಕ್ಟರ್ ಗಳಿಗೆ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಮಾಹಿತಿ ಬೆಂಗಳೂರು ಸಿಸಿಬಿ ಪೊಲೀಸರು ವಿವಿಧ ಕಡೆಗಳಲ್ಲಿ ದಾಳಿ ನಡೆಸಿದರು.
Advertisement
ದಾಳಿ ವೇಳೆ ಕೆಆರ್ ಪುರ, ಮಾರತ್ತಹಳ್ಳಿ ಸುತ್ತಮುತ್ತಲಿನ ಕಾಲೇಜುಗಳ ಬಳಿ ಆಂಧ್ರದಿಂದ ವಿವಿಧ ಮಾದರಿಯ ಡ್ರಗ್ಸ್‍ಗಳನ್ನು ತಂದು ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ ನಾಲ್ವರು ಮಧ್ಯವರ್ತಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ಸುಮಾರು 50 ಲಕ್ಷ ಮೌಲ್ಯದ ಡ್ರಗ್ಸ್ ಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.
Advertisement
ಈ ಸಂಬಂಧ ಕೆಆರ್ ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ನಗರದ ಬೇರೆ ಯಾವ ಜಾಗಗಳಲ್ಲಿ ಇದನ್ನು ಮಾರಾಟ ಮಾಡುತ್ತಿದ್ದರು ಎನ್ನುವುದರ ಬಗ್ಗೆ ವಿಚಾರಣೆ ಮುಂದುವರಿದಿದೆ.