ಬೆಂಗಳೂರು: ಸಿಲಿಕಾನ್ ಸಿಟಿ ಸಿಸಿಬಿ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿ ಇಬ್ಬರು ಅಂತರರಾಜ್ಯ ಡ್ರಗ್ಸ್ ಪೆಡ್ಲರ್‌ಗಳನ್ನು ಬಂಧಿಸಿದ್ದಾರೆ.
ಮೊದಲಿಗೆ ಹೈಗ್ರೌಂಡ್ಸ್ ಪೊಲೀಸ್ ಠಾಣಾ ವ್ಯಾಪ್ತಿಯ ಕಂಟೋನ್ಮೆಂಟ್ ಮುಂಭಾಗದಲ್ಲಿ ಕಾರ್ಯಾಚರಣೆಗೆ ಇಳಿದ ಸಿಸಿಬಿ ಪೊಲೀಸರು, ಒರಿಸ್ಸಾ ಮೂಲದ ಮಿಥುನ್ ದಿಗಲ್ ಅನ್ನೋ ವ್ಯಕ್ತಿಯನ್ನು ಬಂಧಿಸಿದ್ದಾರೆ. ಆತನಿಂದ ಸುಮಾರು ಎರಡು ಲಕ್ಷ ಬೆಲೆ ಬಾಳುವ ಡ್ರಗ್ಸ್ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ.
Advertisement
Advertisement
ಇದಾದ ನಂತರ ಇದೇ ಪೊಲೀಸ್ ತಂಡ ಮತ್ತೊಂದು ಕಾರ್ಯಾಚರಣೆ ನಡೆಸಿ ಡಿಜೆ ಹಳ್ಳಿಯ ಪೊಲೀಸ್ ಠಾಣಾ ವ್ಯಾಪ್ತಿಯ ಕಾವಲ್ ಬೈರಸಂದ್ರ ಬಳಿ ನೈಜೀರಿಯಾ ಮೂಲದ ವೈಟ್ ಅನ್ನೋ ವ್ಯಕ್ತಿಯನ್ನು ವಶಕ್ಕೆ ಪಡೆದು ವಿವಿಧ ಮಾದರಿಯ ಡ್ರಗ್ಸ್ ಮತ್ತು ಗಾಂಜಾ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ. ಉತ್ತರ ಭಾರತ ಮೂಲದಿಂದ ರೈಲುಗಳ ಮೂಲಕ ಡ್ರಗ್ಸ್ ಗಳನ್ನು ತಂದು ಹೋಲ್‍ಸೇಲ್ ರೂಪದಲ್ಲಿ ಇಲ್ಲಿನ ಸ್ಥಳೀಯ ಮಾರಾಟಗಾರರಿಗೆ ಮಾರಾಟ ಮಾಡುತ್ತಿದ್ದರು ಎನ್ನಲಾಗಿದೆ.
Advertisement
ಸ್ಥಳೀಯ ಮಾರಾಟಗಾರರು, ನಗರದ ಹೈ-ಫೈ ಕಾಲೇಜುಗಳು, ಪಬ್‍ಗಳು, ಸೇರಿದಂತೆ ನಗರದ ಐಷಾರಾಮಿ ಜನರಿಗೆ ಮಾರಾಟ ಮಾಡುತ್ತಿದ್ದರು ಎಂಬುದು ಬೆಳಕಿಗೆ ಬಂದಿದೆ. ಸದ್ಯ ಇಬ್ಬರು ಆರೋಪಿಗಳನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದು, ಹೆಚ್ಚಿನ ವಿಚಾರಣೆ ನಡೆಸಿದ್ದಾರೆ.