– ನಾಳೆ ಸಚಿವರ ಹುಟ್ಟೂರಲ್ಲಿ ಅಂತ್ಯಸಂಸ್ಕಾರ
ಬೆಂಗಳೂರು: ಪೌರಾಡಳಿತ ಸಚಿವ ಸಿಎಸ್ ಶಿವಳ್ಳಿ ಅವರ ನಿಧನಕ್ಕೆ ಸಿಎಂ ಕುಮಾರಸ್ವಾಮಿ, ಮಾಜಿ ಸಿಎಂ ಸಿದ್ದರಾಮಯ್ಯ, ಮಾಜಿ ಸಿಎಂ ಜಗದ್ದೀಶ್ ಶೆಟ್ಟರ್ ಸೇರಿದಂತೆ ಹಲವು ನಾಯಕರು ಸಂತಾಪ ಸೂಚಿಸಿದ್ದಾರೆ.
ಹಾಸನದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸಿಎಂ ಕುಮಾರಸ್ವಾಮಿ ಅವರು ಮಾತನಾಡಿ, ನಿನ್ನೆ ತಾನೇ ಕಟ್ಟಡ ಕುಸಿತದ ಸ್ಥಳ ಪರಿಶೀಲನೆ ವೇಳೆ ನನ್ನ ಜೊತೆಗೆ ಇದ್ದರು. ಈಗ ವೇದಿಕೆಯಲ್ಲಿ ಇದ್ದಾಗ ಸುದ್ದಿ ತಿಳಿಯಿತು. ಅವರ ನಿಧನದಿಂದ ತೀವ್ರ ದುಃಖವಾಗಿದೆ ಎಂದು ತಿಳಿಸಿದರು. ಬಳಿಕ ಒಂದು ನಿಮಿಷ ಮೌನಾಚರಣೆ ಮಾಡಿ ಸಂತಾಪ ಸೂಚಿಸಿದರು.
Advertisement
Advertisement
ಇತ್ತ ಹುಬ್ಬಳ್ಳಿಯ ಲೈಫ್ ಲೈನ್ ಆಸ್ಪತ್ರೆಯ ಆಸ್ಪತ್ರೆಯಲ್ಲಿ ಸಚಿವರ ನಿಧನ ಸುದ್ದಿ ತಿಳಿಯುತ್ತಿದಂತೆ ಕುಟುಂಬಸ್ಥರು ಆಸ್ಪತ್ರೆಗೆ ಆಗಮಿಸಿದ್ದರು. ಅಲ್ಲದೇ ಸಾವಿರಾರು ಸಂಖ್ಯೆಯಲ್ಲಿ ಅಭಿಮಾನಿಗಳು ಆಸ್ಪತ್ರೆ ಮುಂದೆ ಜಮಾಸಿಯಿಸಿದ್ದರು.
Advertisement
ಸದ್ಯ ಅವರ ಪಾರ್ಥಿವ ಶರೀರವನ್ನು ಆಸ್ಪತ್ರೆಯಿಂದ ಹುಬ್ಬಳ್ಳಿ ಸ್ವಗೃಹ ಮದಿನಾ ಕಾಲೋನಿಯತ್ತ ಕೊಂಡ್ಯೊಲಾಗಿದೆ. ಹುಬ್ಬಳ್ಳಿಯ ಮನೆಯಲ್ಲಿ ಸಂಜೆ 6:30ರ ವರೆಗೂ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಬೆಳಗಿನವರೆಗೂ ಕುಂದಗೋಳದಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ನೀಡಲಾಗಿದ್ದು, ಬೆಳಿಗ್ಗೆ 6 ಘಂಟೆಗಳ ನಂತರ ಸ್ವಗ್ರಾಮ ಯರಗುಪ್ಪಿಯಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುತ್ತದೆ. ಬಳಿಕ ಕುಟುಂಬ ಒಪ್ಪಿಗೆಯಂತೆ ಅಂತಿಮ ಕಾರ್ಯ ನಡೆಸಲಾಗುವುದು ಎಂಬ ಮಾಹಿತಿ ಲಭಿಸಿದೆ.
Advertisement
ಸಚಿವ ನಿಧನ ಸುದ್ದಿ ತಿಳಿದು ಮಾಜಿ ಸಚಿವ ವಿನಯ ಕುಲಕರ್ಣಿ ಆಸ್ಪತ್ರೆಗೆ ಭೇಟಿ ನೀಡಿ ಅಂತಿಮ ದರ್ಶನ ಪಡೆದರು. ಈ ವೇಳೆ ನಗರದ ಹೊಸ ಬಸ್ ನಿಲ್ದಾಣದ ಎದುರಿನ ಲೈಫ್ ಲೈನ್ ಆಸ್ಪತ್ರೆಯ ಬಳಿ ಅಭಿಮಾನಿಗಳ ಗೋಳಾಟ ಮುಗಿಲು ಮುಟ್ಟಿತ್ತು. ಅಲ್ಲದೇ ಶಾಸಕ ಪ್ರಸಾದ್ ಅಬ್ಬಯ್ಯ ಅವರು ಭೇಟಿ ನೀಡಿ, ಸಚಿವರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
ಮಹದಾಯಿ ನೀರಾವರಿ ಹೋರಾಟದಲ್ಲಿ ಪ್ರಮುಖ ಪಾತ್ರವಹಿಸಿದ್ದ ಶಿವಳ್ಳಿ ಅವರು 1994ರಲ್ಲಿ ಪಕ್ಷೇತರರಾಗಿ ಆಯ್ಕೆಯಾಗಿದ್ದರು. ಕುಂದಗೋಳ ಕ್ಷೇತ್ರದ ಶಾಸಕರಾಗಿ ಮೂರು ಬಾರಿ ಆಯ್ಕೆ ಆಗಿ, ಈ ಬಾರಿ ಸಚಿವರಾಗಿದ್ರು. ಸಿದ್ದರಾಮಯ್ಯ ಆಪ್ತ ಅವರ ಮಾರ್ಗದರ್ಶನದಲ್ಲಿ ರಾಜಕಾರಣ ನಡೆಸಿದ್ದ ಶಿವಳ್ಳಿ ಅವರು 2004 ಗೆಲುವು ಪಡೆದರೆ, 2008 ರಲ್ಲಿ ಸೋಲುಂಡಿದ್ದರು. ಆದರೆ 2013, 2018 ರಲ್ಲಿ ಗೆಲುವು ಪಡೆದಿದ್ದು. 2018ರ ಚುನಾವಣೆಯಲ್ಲಿ 64,871 ಮತಗಳನ್ನು ಪಡೆದು ಬಿಜೆಪಿ ಅಭ್ಯರ್ಥಿ ವಿರುದ್ಧ ಜಯಗಳಿಸಿದ್ದರು. ಸರಳ ಸಜ್ಜನ ಜೀವನಕ್ಕೆ ಹೆಸರಾಗಿದ್ದ ಶಿವಳ್ಳಿ ಅವರು ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದರು.
ಸುದೀರ್ಘ ಕಾಲದ ನನ್ನ ಸ್ನೇಹಿತರಾದ ಪೌರಾಡಳಿತ ಸಚಿವ ಸಿ.ಎಸ್.ಶಿವಳ್ಳಿ ಅವರ ನಿಧನದಿಂದ ಆಘಾತಕ್ಕೀಡಾಗಿದ್ದೇನೆ. ಶಿವಳ್ಳಿ ಅವರು ಮೆಲುಮಾತಿನ,ಸರಳ ವ್ಯಕ್ತಿತ್ವದ, ಜನಾನುರಾಗಿ ನಾಯಕರಾಗಿದ್ದರು.
ಅವರ ಕುಟುಂಬದ ಸದಸ್ಯರು ಮತ್ತು ಅಭಿಮಾನಿಗಳ ದು:ಖದಲ್ಲಿ ನಾನೂ ಭಾಗಿಯಾಗಿದ್ದೇನೆ.@INCKarnataka pic.twitter.com/swXAWGNIqJ
— Siddaramaiah (@siddaramaiah) March 22, 2019
ಪೌರಾಡಳಿತ ಸಚಿವ ಸಿಎಸ್ ಶಿವಳ್ಳಿ ಅವರ ನಿಧನ ನನಗೆ ತೀವ್ರ ಆಘಾತವನ್ನು ತಂದಿದೆ.ಧಾರವಾಡದ ಕಟ್ಟಡ ದುರಂತ ಸ್ಥಳದಲ್ಲಿ ಕಳೆದ ಮೂರು ದಿನಗಳಿಂದ ಉಪಸ್ಥಿತರಿದ್ದು ಕಾರ್ಯಾಚರಣೆಯ ಉಸ್ತುವಾರಿ ವಹಿಸಿದ್ದ ಶಿವಳ್ಳಿ ಅವರು ಇನ್ನಿಲ್ಲ ಎನ್ನುವುದನ್ನು ನಂಬಲಾಗುತ್ತಿಲ್ಲ.ಕುಂದಗೋಳ ಕ್ಷೇತ್ರದಿಂದ ಮೂರು ಬಾರಿ ಆಯ್ಕೆಯಾಗಿದ್ದ ಶಿವಳ್ಳಿ ಜನಾನುರಾಗಿಗಳಾಗಿದ್ದರು.
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) March 22, 2019
ಪೌರಾಡಳಿತ ಸಚಿವ ಸಿ ಎಸ್ ಶಿವಳ್ಳಿಯವರ ನಿಧನ ನನಗೆ ಅತೀವ ಆಘಾತವನ್ನುಂಟು ಮಾಡಿದೆ. ಹುಷಾರಿದ್ದ ಕೊನೆ ಕ್ಷಣದವರೆಗೂ ಧಾರವಾಡ ಕಟ್ಟಡ ಕುಸಿತದ ತೆರವು ಪ್ರಕ್ರಿಯೆಯ ಉಸ್ತುವಾರಿ ವಹಿಸಿದ್ದರು. ರಾಜ್ಯ ಹಾಗೂ ಪಕ್ಷ ಒಬ್ಬ ಉತ್ತಮ ನಾಯಕನನ್ನು ಕಳೆದುಕೊಂಡಿದೆ. ಭಗವಂತ ಶಿವಳ್ಳಿಯವರ ಕುಟುಂಬಕ್ಕೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ನೀಡಲಿ. pic.twitter.com/Zz5UDDW6ip
— Dr. G Parameshwara (@DrParameshwara) March 22, 2019