– ವಾಹನ ದಟ್ಟಣೆಯಲ್ಲಿ ಸಿಲುಕಿ ಜನ ಪರದಾಟ
ಬೆಂಗಳೂರು: ದೀಪಾವಳಿ ಹಬ್ಬಕ್ಕೆ ಸಾಲು ಸಾಲು ರಜೆ ಹಿನ್ನೆಲೆ ಊರುಗಳಿಗೆ ತೆರಳಿದ್ದ ಜನ, ರಜೆ ಮುಗಿಸಿ ವಾಪಸಾಗುತ್ತಿರುವ ಪರಿಣಾಮ ಬೆಂಗಳೂರಿನಲ್ಲಿ (Bengaluru Traffic Jam) ಟ್ರಾಫಿಕ್ ಜಾಮ್ ಸಮಸ್ಯೆ ಉಂಟಾಯಿತು.
ಸೋಮವಾರ ಕರ್ತವ್ಯಕ್ಕೆ ತೆರಳಬೇಕಾದ ಹಿನ್ನೆಲೆ ಒಮ್ಮೆಲೆ ಬೆಂಗಳೂರಿಗೆ ಜನ ಲಗ್ಗೆಯಿಟ್ಟಿದ್ದಾರೆ. ಈ ಹಿನ್ನೆಲೆ ಭಾನುವಾರ ನಗರದ ಪ್ರಮುಖ ರಸ್ತೆಗಳಲ್ಲಿ ವಾಹನ ದಟ್ಟಣೆ ಉಂಟಾಯಿತು. ಪೀಣ್ಯ ಎಲಿವೇಟೆಡ್ ಫ್ಲೈಓವರ್‌ನಲ್ಲಿ ಫುಲ್ ಟ್ರಾಫಿಕ್ ಜಾಮ್ ಆಯಿತು. ಸಂಜೆಯಾಗುತ್ತಿದ್ದಂತೆ ಜನ ವಾಹನ ದಟ್ಟಣೆ ಸಮಸ್ಯೆ ಅನುಭವಿಸಿದರು. ಇದನ್ನೂ ಓದಿ: ಕಾರವಾರ | ಖಿನ್ನತೆಯಿಂದ ಬಳಲುತಿದ್ದ ವ್ಯಕ್ತಿಗೆ ಹೊಸ ಬಟ್ಟೆ ಕೊಡಿಸಿ ಮಾನವೀಯತೆ ಮೆರೆದಿದ್ದ ಗುರುಪ್ರಸಾದ್!
ಗೊರಗುಂಟೆಪಾಳ್ಯ ಸಿಗ್ನಲ್‌ನಿಂದ ಫ್ಲೈಓವರ್ ಹಿಂಭಾಗಕ್ಕೆ ಎರಡು ಕಿ.ಮೀ ವರೆಗೆ ಟ್ರಾಫಿಕ್ ಜಾಮ್ ಆಗಿರುವ ದೃಶ್ಯ ಕಂಡುಬಂತು. ವಾಹನ ದಟ್ಟಣೆಯಿಂದ ಸವಾರರು ಪರದಾಡಿದರು. ಮೈಸೂರು ರಸ್ತೆಯಲ್ಲೂ ದಟ್ಟಣೆ ಹೆಚ್ಚಾಗಿತ್ತು. ಚಿತ್ರದುರ್ಗದಿಂದ ತುಮಕೂರುಗೆ ಬರುವ ಮಾರ್ಗ ಮಧ್ಯೆಯೂ ಟ್ರಾಫಿಕ್ ಜಾಮ್ ಆಗಿತ್ತು.
ಗುರುವಾರ ನರಕ ಚತುರ್ದಶಿ, ಶುಕ್ರವಾರ ಕನ್ನಡ ರಾಜ್ಯೋತ್ಸವ, ಶನಿವಾರ ಬಲಿಪಾಡ್ಯಮಿ ಹಾಗೂ ಭಾನುವಾರ ವಾರಾಂತ್ಯ ರಜೆ ಇತ್ತು. ಹೀಗೆ ಸಾಲು ಸಾಲು ರಜೆ ಇದ್ದ ಕಾರಣ ಜನರು ದಂಡು ದಂಡಾಗಿ ಊರುಗಳತ್ತ ತೆರಳಿದ್ದರು. ಇದನ್ನೂ ಓದಿ: ಮುಸ್ಲಿಮರ ಓಲೈಕೆಗಾಗಿ ಜಮೀನು ಕಬಳಿಕೆ, ಇದರ ವಿರುದ್ಧ ಬಿಜೆಪಿ ಬೃಹತ್ ಹೋರಾಟ: ಅಶೋಕ್