ಬೆಂಗಳೂರು: ಮಚ್ಚಿನಿಂದ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಕೊಚ್ಚಿ ಪತಿ ಹತ್ಯೆಗೈದಿರುವ ಘಟನೆ ನಗರದ ಜಾಲಹಳ್ಳಿ ಕ್ರಾಸ್ (Jalahalli Cross) ಬಳಿ ನಡೆದಿದೆ.
ಮೃತರನ್ನು ಪತ್ನಿ ಭಾಗ್ಯಮ್ಮ, ನವ್ಯ (19), ಹೇಮಾವತಿ (22) ಹಾಗೂ ಆರೋಪಿಯನ್ನು ಪತಿ ಗಂಗರಾಜು ಎಂದು ಗುರುತಿಸಲಾಗಿದೆ.ಇದನ್ನೂ ಓದಿ: ಗಂಗಾವತಿಯಲ್ಲಿ ಬೆಂಕಿ ಅವಘಡ – ನಾಲ್ವರ ಜೀವ ಉಳಿಸಿದ ಸಾಕು ನಾಯಿ
ಇಂದು ಸಂಜೆ 5 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ಆರೋಪಿ ಗಂಗರಾಜು ಹೋಮ್ ಗಾರ್ಡ್ ಕೆಲಸ ಮಾಡಿಕೊಂಡಿದ್ದ. ಮಚ್ಚಿನಿಂದ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಕೊಚ್ಚಿಕೊಲೆ ಮಾಡಿದ್ದಾನೆ. ಕೊಲೆ ಮಾಡಿ ಬಳಿಕ ಪೊಲೀಸ್ ಠಾಣೆಗೆ ಶರಣಾಗಿದ್ದಾನೆ. ಸ್ಥಳಕ್ಕೆ ಪೀಣ್ಯಾ ಪೊಲೀಸರ ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದಾರೆ.
ಕೌಟುಂಬಿಕ ಕಲಹದಿಂದಾಗಿ ಕೊಲೆ ಮಾಡಿದ್ದು, ಪತ್ನಿಯ ಶೀಲ ಶಂಕಿಸಿ ಕೊಲೆ ಮಾಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.ಇದನ್ನೂ ಓದಿ: ರಿಯಲ್ ಎಸ್ಟೇಟ್ ಜೊತೆ ಪೊಲೀಸರು ಕೈ ಜೋಡಿಸಿದ್ರೆ ಸಹಿಸೊಲ್ಲ- ಸಿಎಂ ಎಚ್ಚರಿಕೆ