Connect with us

Bengaluru City

ಮೂವರು ಮಕ್ಕಳನ್ನು ಕೊಂದು ತಾನೂ ಆತ್ಮಹತ್ಯೆಗೆ ಶರಣಾದ ತಂದೆ

Published

on

ಬೆಂಗಳೂರು: ಮೂವರು ಮಕ್ಕಳನ್ನು ಕೊಂದು ತಂದೆಯೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಮೈಕೋ ಲೇಔಟ್‍ನಲ್ಲಿ ನಡೆದಿದೆ.

ಮೃತರನ್ನು ತಂದೆ ಜನಕರಾಜ್ ಬಿಸ್ತಾ (32) ಮತ್ತು ಮಕ್ಕಳನ್ನು ಸರಸ್ವತಿ (14), ಹೇಮಂತಿ (9), ರಾಜ್ ಕುಮಾರ್ (3) ಎಂದು ಗುರುತಿಸಲಾಗಿದೆ. ಜನಕರಾಜ್ ಮೈಕೋ ಲೇಔಟ್ ನ ರಮಣಶ್ರೀ ಎನ್ಕ್ಲೇವ್‍ನಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದು, ಅಲ್ಲಿಯೇ ಮಕ್ಕಳನ್ನು ನೇಣು ಬಿಗಿದು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕೆಲ ದಿನಗಳ ಹಿಂದೆ ಜನಕರಾಜ್ ಪತ್ನಿ ಅನಾರೋಗ್ಯದಿಂದ ಸಾವನ್ನಪ್ಪಿದ್ದರು. ಈ ಘಟನೆಯ ನಂತರ ಜನಕರಾಜ್ ತೀವ್ರ ಖಿನ್ನತೆಗೆ ಒಳಗಾಗಿದ್ದರು. ಈ ಕಾರಣದಿಂದಲೇ ಮಕ್ಕಳನ್ನು ಕೊಂದು ತಾನು ಕೂಡ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ. ನಾಲ್ವರ ಮೃತ ದೇಹಗಳನ್ನು ವಿಕ್ಟೋರಿಯಾ ಅಸ್ಪತ್ರೆಗೆ ರವಾನೆ ಮಾಡಲಾಗಿದೆ.

ಸ್ಥಳಕ್ಕೆ ಡಿಸಿಪಿ ಶ್ರೀನಾಥ್ ಮಹದೇವ್ ಮತ್ತು ಎಸಿಪಿ ಸುದೀರ್ ಹೆಗಡೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಈ ಸಂಬಂಧ ಮೈಕೋ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Click to comment

Leave a Reply

Your email address will not be published. Required fields are marked *