ಬೆಂಗಳೂರಿನಲ್ಲಿ ಮಗನಿಗೆ ಗುಂಡಿಟ್ಟು ಹತ್ಯೆಗೈದ ತಂದೆ!

Public TV
1 Min Read
POLICE STATION

ಬೆಂಗಳೂರು: ತಂದೆಯೇ ಮಗನನ್ನು ಗುಂಡು ಹಾರಿಸಿ ಕೊಲೆಗೈದ ದಾರುಣ ಘಟನೆ ಬೆಂಗಳೂರಿನ (Bengaluru) ಕರೆಕಲ್‍ನಲ್ಲಿ ನಡೆದಿದೆ.

ನರ್ತನ್ ಬೋಪಣ್ಣ (32) ಹತ್ಯೆಯಾದ ವ್ಯಕ್ತಿಯಾಗಿದ್ದಾರೆ. ಅವರ ತಂದೆ ಸುರೇಶ್ ವಿನಾಕಾರಣ ಬಂದೂಕಿನಿಂದ ಗುಂಡು ಹಾರಿಸಿದ್ದಾನೆ ಎಂದು ತಿಳಿದುಬಂದಿದೆ. ಗುಂಡೇಟಿನಿಂದ ಸಾವು ಬದುಕಿನ ಮಧ್ಯೆ ಹೋರಾಟ ಮಾಡುತ್ತಿದ್ದ ಅವರನ್ನು ಕೂಡಲೇ ಪೊಲೀಸರು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ದುರದೃಷ್ಟವಶಾತ್ ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವಿಗೀಡಾಗಿದ್ದಾರೆ. ಇದನ್ನೂ ಓದಿ: ಬಾಗಲಕೋಟೆಯಲ್ಲಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ – ಸ್ಥಳದಲ್ಲೇ ನಾಲ್ವರ ದುರ್ಮರಣ!

ನರ್ತನ್ ಅವರ ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನೆಯ ಹಿಂದಿನ ಕಾರಣ ಇನ್ನೂ ತಿಳಿದು ಬಂದಿಲ್ಲ. ಘಟನೆ ಬಳಿಕ ಸ್ಥಳೀಯರ ಮಾಹಿತಿ ಮೇರೆಗೆ ಸ್ಥಳಕ್ಕೆ ಪೊಲೀಸರು (Police) ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಸಂಬಂಧ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಡ್ರೋಣ್ ಪ್ರತಾಪ್ ಮೋಸದ ಆರೋಪ: ಡಾ.ಪ್ರಯಾಗ್ ಎಂಟ್ರಿ

Share This Article