ಬೆಂಗಳೂರು: ಕಲಾಸಿಪಾಳ್ಯದಲ್ಲಿ (Kalasipalya) ಬಾಲಕಿಯೊಬ್ಬಳು ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ.
ಆತ್ಮಹತ್ಯೆಗೆ ಶರಣಾದ ಬಾಲಕಿಯನ್ನು ಶರ್ಮಿಳಾ (16) ಎಂದು ಗುರುತಿಸಲಾಗಿದೆ. ಬಾಲಕಿ ತಂದೆ ತಾಯಿಯ ಜೊತೆಗೆ ವಾಸವಿದ್ದಳು. ಪೋಷಕರು ತಮಿಳುನಾಡಿನ ದೇವಸ್ಥಾನ ಒಂದಕ್ಕೆ ತೆರಳಿದ್ದಾಗ ಮನೆಯಲ್ಲಿ ನೇಣಿಗೆ ಶರಣಾಗಿದ್ದಾಳೆ ಎಂದು ತಿಳಿದುಬಂದಿದೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಇದನ್ನೂ ಓದಿ: ಐಸಿಸ್ ಉಗ್ರ & ರೇಪಿಸ್ಟ್ ಉಮೇಶ್ ರೆಡ್ಡಿಗೆ ಜೈಲಲ್ಲಿ ರಾಜಾತಿಥ್ಯ ಕೇಸ್ – ಎನ್‌ಸಿಆರ್ ದಾಖಲು
ಕಲಾಸಿಪಾಳ್ಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಯ ಶವಾಗಾರಕ್ಕೆ ರವಾನೆ ಮಾಡಲಾಗಿದೆ. ಇದನ್ನೂ ಓದಿ: ಐಸಿಸ್ ಉಗ್ರ, ವಿಕೃತ ಕಾಮಿಗೆ ಸೆಂಟ್ರಲ್ ಜೈಲಲ್ಲಿ ರಾಜಾತಿಥ್ಯ – ತಪ್ಪು ಮಾಡಿದವರ ಮೇಲೆ ಕಠಿಣ ಕ್ರಮಕ್ಕೆ ಸಿಎಂ ಸೂಚನೆ!

