- ಓರ್ವನ ಸ್ಥಿತಿ ಗಂಭೀರ
ಚಿತ್ರದುರ್ಗ: ಬೆಂಗಳೂರಿಂದ (Bengaluru) ಗೋವಾಕ್ಕೆ (Goa) ತೆರಳುತ್ತಿದ್ದ ಖಾಸಗಿ ಟೂರಿಸ್ಟ್ ಬಸ್ ಹಿರಿಯೂರು ತಾಲೂಕಿನ ಐಮಂಗಲ (Aimangala) ಬಳಿ ಪಲ್ಟಿಯಾಗಿದ್ದು (Accident), ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಐಮಂಗಲ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದೆ. ರಸ್ತೆಯ ಎಡ ಭಾಗದ ಟ್ರೆಂಚ್‌ಗೆ ಬಸ್ ಬಿದ್ದಿದ್ದು, ಬಸ್‌ನ ಮುಂಭಾಗ ಜಖಂ ಆಗಿದೆ. ಈ ಅಪಘಾತದಲ್ಲಿ 20 ಮಂದಿ ಗಾಯಗೊಂಡಿದ್ದು, ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನೂ ಓದಿ: ಆಸ್ಟನ್ ಮಾರ್ಟಿನ್ ಕಾರು ಡಿಕ್ಕಿ, ಯುವತಿ ಸಾವು; ರಾಜ್ಯಸಭಾ ಎಂಪಿ ಪುತ್ರನ ವಿರುದ್ದ ಕೇಸ್ ದಾಖಲು
ಐಲ್ಯಾಂಡ್ ಬಸ್ ಬೆಂಗಳೂರಿನಿಂದ ಗೋವಾಕ್ಕೆ ತೆರಳುತಿತ್ತು. ಬಸ್‌ನಲ್ಲಿ 53 ಜನರು ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ. ಐಮಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಅಪಘಾತ ಸಂಭವಿಸಿದೆ. ಇದನ್ನೂ ಓದಿ: ಅಡಿಕೆ ತೋಟಕ್ಕೆ ನುಗ್ಗಿದ ಬಸ್ – ಓರ್ವ ಸಾವು, 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ
ಸ್ಥಳಕ್ಕೆ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿ, ಬಸ್‌ನ್ನು ಮೇಲೆತ್ತಿದ್ದಾರೆ.

