Bengaluru City
ಅಕ್ರಮವಾಗಿ ಬಂದೂಕು ಮಾರಾಟ ಮಾಡ್ತಿದ್ದ ಆರೋಪಿಯ ಬಂಧನ

ಬೆಂಗಳೂರು: ಅಕ್ರಮವಾಗಿ ನಾಡ ಬಂದೂಕು ತಯಾರಿಸಿ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ರಾಮನಗರ ಜಿಲ್ಲೆಯ ಲಿಂಗಾಚಾರಿ ಬಂಧಿತ ಆರೋಪಿ. ಇಟ್ಟುಮಡು ಚಿತ್ತೂರು ಬಸ್ ನಿಲ್ದಾಣದ ಬಳಿ ಬೈಕಿನಲ್ಲಿ ಎರಡು ಬಂದೂಕುಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಎಂಬ ಖಚಿತ ಮಾಹಿತಿಯ ಮೇರೆಗೆ ಪಿ ಎಸ್ ಐ ಮನೋಜ್ ಕುಮಾರ್ ಸ್ಥಳಕ್ಕೆ ಧಾವಿಸಿ ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿ ಬಳಿ ಇದ್ದ 11 ಸಿಂಗಲ್ ಬ್ಯಾರಲ್ ಬಂದೂಕುಗಳನ್ನ ವಶಕ್ಕೆ ಪಡೆದುಕೊಂಡಿದ್ದಾರೆ.
ಬಂದೂಕು ತಯಾರಿಸಲು ಬಳಸುತ್ತಿದ್ದ 5 ಮರದ ಬಟ್, ಕಬ್ಬಿಣದ ಬ್ಯಾರಲ್ ಕೊಳವೆಗಳು, ಟ್ರಿಗರ್ ಸೇರಿ ಹಲವು ವಸ್ತುಗಳನ್ನು ಕೂಡ ವಶಕ್ಕೆ ಪಡೆದ್ದಾರೆ. ಈ ಕುರಿತಂತೆ ಚೆನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
