ಒಡಿಶಾದಲ್ಲಿ ಹಳಿ ತಪ್ಪಿದ ಬೆಂಗಳೂರು-ಗುವಾಹಟಿ ಕಾಮಾಕ್ಯ ಎಕ್ಸ್‌ಪ್ರೆಸ್‌

Public TV
1 Min Read
Bengaluru Guwahati Kamakhya Express train derails in Choudwar of Odisha

ಭುವನೇಶ್ವರ: ಬೆಂಗಳೂರಿನಿಂದ (Bengaluru)  ಅಸ್ಸಾಂನ ಗುವಾಹಟಿಗೆ (Guwahati) ಸಂಚರಿಸುತ್ತಿದ್ದ ಕಾಮಾಕ್ಯ ಎಕ್ಸ್‌ಪ್ರೆಸ್‌ (Kamakhya Express) ರೈಲು ಒಡಿಶಾದಲ್ಲಿ ಹಳಿ ತಪ್ಪಿದೆ.

ಚೌದ್ವಾರ ಪ್ರದೇಶದ ಮಂಗೂಲಿಯ ಪ್ಯಾಸೆಂಜರ್ ನಿಲ್ದಾಣದ ಬಳಿ ಸೂಪರ್‌ಫಾಸ್ಟ್‌ ಎಕ್ಸ್‌ಪ್ರೆಸ್‌ ರೈಲು ಹಳಿ ತಪ್ಪಿದೆ. ರೈಲಿನ ಕನಿಷ್ಠ 11 ಬೋಗಿಗಳು ಹಳಿ ತಪ್ಪಿವೆ.

ಬೆಳಿಗ್ಗೆ 11:54 ಕ್ಕೆ ಹಳಿ ತಪ್ಪಿದ್ದು, ಹಲವು ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಇದನ್ನೂ ಓದಿ: ಅಂಬುಲೆನ್ಸ್‌ನಲ್ಲೇ 14ನೇ ಮಗುವಿಗೆ ಜನ್ಮ- 50ರ ಬಾಣಂತಿ ತಾಯಿ ಜೊತೆ ಇದ್ದ 22ರ ಮಗ

ಬಿ -6 ರಿಂದ ಬಿ -14 ವರೆಗಿನ ಬೋಗಿಗಳು ಹಳಿ ತಪ್ಪಿವೆ. ರೈಲಿನ ಬೋಗಿಗಳು ಹಳಿ ತಪ್ಪಿ ಹೊಲದಲ್ಲಿ ಇಳಿದಿದೆ. ಈ ಸಂದರ್ಭದಲ್ಲಿ ಪ್ರಯಾಣಿಕರು ರೈಲಿನಿಂದ ಜಿಗಿದಿದ್ದಾರೆ. ಈ ಮಾರ್ಗದಲ್ಲಿ ಸಂಚರಿಸಬೇಕಿದ್ದ ಇತರ ರೈಲುಗಳನ್ನು ರದ್ದುಗೊಳಿಸಲಾಗಿದೆ ಎಂದು ರೈಲ್ವೆ ಇಲಾಖೆ ತಿಳಿಸಿದೆ. ಇದನ್ನೂ ಓದಿ: ಭೂಕಂಪದಿಂದಾಗಿ ಆಸ್ಪತ್ರೆ ನಾಮಾವಶೇಷ – ಬ್ಯಾಂಕಾಕ್‌ನ ರಸ್ತೆಯಲ್ಲೇ ಮಗುವಿಗೆ ಜನ್ಮ ನೀಡಿದ ಮಹಿಳೆ

ಬೆಂಗಳೂರಿನ ವಿಶ್ವೇಶ್ವರಯ್ಯ ಟರ್ಮಿನಲ್‌ನಿಂದ ಹೊರಟಿದ್ದ ಕಾಮಾಕ್ಯ ಎಕ್ಸ್‌ಪ್ರೆಸ್‌ ರೈಲು ತಮಿಳುನಾಡು, ಆಧ್ರಪ್ರದೇಶ, ಒಡಿಶಾ, ಬಿಹಾರ, ಪಶ್ಚಿಮ ಬಂಗಾಳದ ಮೂಲಕ ಅಸ್ಸಾಂ ಗುವಾಹಟಿಗೆ ತೆರಳುತ್ತಿತ್ತು.

Share This Article