ಬೆಂಗಳೂರು: ಶನಿವಾರ ಸುರಿದ ಮಳೆಯಂತೆ ಭಾನುವಾರ ಮತ್ತು ಸೋಮವಾರವೂ ಬೆಂಗಳೂರು ನಗರದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.
ಹವಾಮಾನ ಇಲಾಖೆ ಮಳೆಯಾಗುವ ಬಗ್ಗೆ ಮಾಹಿತಿ ನೀಡಿದ್ದು, ಭಾರೀ ಗಾಳಿ, ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ. ಮಳೆಯಾಗುವ ಮಾಹಿತಿ ಸಿಕ್ಕಿದ ಕಾರಣ ತುರ್ತು ಸಂದರ್ಭ ಹೊರತುಪಡಿಸಿ ಮನೆಯಿಂದ ರಾತ್ರಿಯ ಸಮಯದಲ್ಲಿ ಹೊರಗೆ ಹೋಗದೇ ಇರುವುದು ಉತ್ತಮ.
ಶನಿವಾರ ರಾತ್ರಿ ಸುರಿದ ಗುಡುಗು ಸಿಡಿಲಿನ ಭಾರೀ ಮಳೆ ನಗರದಲ್ಲಿ ಭಾರೀ ಅನಾಹುತವನ್ನೇ ಸೃಷ್ಟಿಸಿದೆ. ಕುರುಬರಹಳ್ಳಿಯಲ್ಲಿ ರಾಜಕಾಲುವೆಯ ನೀರಿಗೆ ವ್ಯಕ್ತಿಯೊಬ್ಬರು ಕೊಚ್ಚಿ ಹೋಗಿದ್ದರೆ, ಹಲವೆಡೆ ಮರಗಳು ಧರೆಗೆ ಉರುಳಿ ಬಿದ್ದಿವೆ. ಮಳೆಯಿಂದಾಗಿ ಇಡೀ ನಗರವೇ ಜಾಮ್ ಆಗಿದ್ದರೆ, ತಗ್ಗು ಪ್ರದೇಶಗಳಿಗೆ ಎಂದಿನಂತೆ ನೀರು ನುಗ್ಗಿತ್ತು.