ಬೆಂಗಳೂರು: ಮಾಜಿ ಜಲಸಂಪನ್ಮೂಲ ಸಚಿವ, ಕಾಂಗ್ರೆಸ್ ಟ್ರಬಲ್ ಶೂಟರ್ ಡಿ.ಕೆ ಶಿವಕುಮಾರ್ ಅವರು ಹೈ ಕೋರ್ಟಿಗೆ ತುರ್ತು ಅರ್ಜಿ ಸಲ್ಲಿಸಿದ್ದಾರೆ
ಡಿಕೆಶಿಗೆ ಜಾರಿ ನಿರ್ದೇಶನಾಲಯ(ಇಡಿ) ಗುರುವಾರ ರಾತ್ರಿ 10 ಗಂಟೆ ಸುಮಾರಿಗೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಿದೆ. ಈ ಬೆನ್ನಲ್ಲೇ ಇದೀಗ ಡಿಕೆಶಿ ಪರ ವಕೀಲರು ಹೈಕೋರ್ಟಿಗೆ ತುರ್ತು ಅರ್ಜಿ ಸಲ್ಲಿಸಿದ್ದಾರೆ. ಈ ತುರ್ತು ಅರ್ಜಿಯ ವಿಚಾರಣೆ ಇಂದು ಮಧ್ಯಾಹ್ನ ಸುಮಾರು 12.30ಕ್ಕೆ ನಡೆಯಲಿದೆ.
Advertisement
ಅರ್ಜಿಯಲ್ಲಿ ಸಮನ್ಸ್ ರದ್ದು ಕೋರಿ ಮೇಲ್ಮನವಿ ಸಲ್ಲಿಸಲು ಕಾಲಾವಕಾಶ ಬೇಕು. ಇಡಿ ತಕ್ಷಣ ಬಂಧಿಸದಂತೆ ಮಧ್ಯಂತರ ತಡೆಗೆ ಮನವಿ ಮಾಡಿಕೊಳ್ಳಲಾಗಿದೆ. ನಿನ್ನೆ ಅರ್ಜಿಯ ವಜಾ ಬಗ್ಗೆ ಮೇಲ್ಮನವಿ ಸಲ್ಲಿಸಲಿದ್ದೇವೆ. ಅಲ್ಲಿಯತನಕ ಬಂಧಿಸದಂತೆ ಇಡಿಗೆ ಸೂಚಿಸಬೇಕು. ಅಲ್ಲದೆ ಮಧ್ಯಂತರ ಅರ್ಜಿ ಸಲ್ಲಿಸುವ ತನಕ ಬಂಧಿಸದಂತೆ ಸೂಚಿಸಲು ಮನವಿ ಮಾಡಿಕೊಳ್ಳಲಾಗಿದೆ ಎಂದು ತಿಳಿದು ಬಂದಿದೆ.
Advertisement
Advertisement
.