ಅಮರಾವತಿ: ಬೆಂಗಳೂರಿನಿಂದ (Bengaluru) ಕೋಲ್ಕತ್ತಾಗೆ ಹೋಗುತ್ತಿದ್ದ ಹೌರಾ ಎಕ್ಸ್‌ಪ್ರೆಸ್ (Howrah Express) ರೈಲಿನಲ್ಲಿ ಭಾನುವಾರ ಬೆಂಕಿ (Fire) ಕಾಣಿಸಿಕೊಂಡಿದೆ.
ಹೌರಾ ಎಕ್ಸ್‌ಪ್ರೆಸ್‌ನ ಎಸ್ 9 ಎಸಿ ಕೋಚ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಬಳಿಕ ರೈಲನ್ನು ಆಂಧ್ರಪ್ರದೇಶದ (Andhra Pradesh) ಚಿತ್ತೂರು (Chittoor) ಜಿಲ್ಲೆಯ ಕುಪ್ಪಂ ನಿಲ್ದಾಣದಲ್ಲಿ ನಿಲ್ಲಿಸಲಾಗಿದೆ. ರೈಲ್ವೇ ಸಿಬ್ಬಂದಿ ಬೆಂಕಿಯನ್ನು ಕಂಡು ಎಚ್ಚರಿಕೆ ನೀಡಿದ್ದಾರೆ. ಈ ವೇಳೆ ಪ್ರಯಾಣಿಕರು ರೈಲಿನಿಂದ ಇಳಿದು ಹೊರ ಬಂದಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ ನಗರಸಭಾ ಸದಸ್ಯನ ಬರ್ತ್‌ಡೇಯಲ್ಲಿ ನಂಗನಾಚ್ – ಯುವಕನಿಗೆ ಚಾಕು ಇರಿತ
Advertisement
Chittoor, Andhra Pradesh | Local police rushed to rescue passengers after a fire broke out in a bogie of the Bangalore – Howrah express train. No casualties have yet been reported. Fire is being doused. Further details awaited pic.twitter.com/gO4XVFxSod
— ANI (@ANI) November 27, 2022
Advertisement
ಸದ್ಯ ಇಲ್ಲಿಯವರೆಗೆ ಯಾರಿಗೂ ಪ್ರಾಣಾಪಾಯವಾಗಿರುವ ಬಗ್ಗೆ ವರದಿಯಾಗಿಲ್ಲ. ರೈಲಿಗೆ ಹೊತ್ತಿಕೊಂಡಿರುವ ಬೆಂಕಿಯನ್ನು ನಂದಿಸಲಾಗುತ್ತಿದೆ ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ತಿಹಾರ್ ಜೈಲಿನಲ್ಲಿ ಸತ್ಯೇಂದ್ರ ಜೈನ್ ಸೇವೆ ಮಾಡಲು ನೇಮಕವಾಗಿದ್ರು 10 ಜನ!