– ಚಿಕಿತ್ಸೆ ಫಲಕಾರಿಯಾಗದೆ ಪತ್ನಿ ಸಾವು
ಬೆಂಗಳೂರು: ಗೃಹಿಣಿಯೊಬ್ಬರು ಅನುಮಾನಾಸ್ಪದವಾಗಿ ಸಾವಿಗೀಡಾದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಆಶಾರಾಣಿ(30) ಮೃತಪಟ್ಟ ಮಹಿಳೆ. ಈಕೆ ನವಂಬರ್ 30 ರಂದು ನೇಣು ಬಿಗಿದುಕೊಂಡಿದ್ದಾಳೆಂದು ಪತಿ ಆಸ್ಪತ್ರೆಗೆ ದಾಖಲಿಸಿದ್ದನು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೆ ಆಶಾರಾಣಿ ಸಾವನ್ನಪ್ಪಿದ್ದಾರೆ.
Advertisement
Advertisement
ಆಶಾರಾಣಿಗೆ ಕಳೆದ 6 ವರ್ಷಗಳ ಹಿಂದೆ ಚಿತ್ರದುರ್ಗದ ರವಿ ಎಂಬಾತನೊಂದಿಗೆ ವಿವಾಹ ಮಾಡಿಕೊಡಲಾಗಿತ್ತು. ಪತಿ-ಪತ್ನಿ ಇಬ್ಬರೂ ಖಾಸಗಿ ಆಸ್ಪತ್ರೆಯಲ್ಲಿ ನರ್ಸ್ ಆಗಿ ಕೆಲಸ ಮಾಡುತ್ತಿದ್ದರು. ದಂಪತಿ ಪೀಣ್ಯದ ಎಸ್ ಆರ್ ಎಸ್ ರಸ್ತೆಯ ಮನೆಯೊಂದರಲ್ಲಿ ವಾಸವಿದ್ದರು.
Advertisement
ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಇಬ್ಬರ ನಡುವೆ ಆಗಾಗ ಜಗಳವಾಗುತ್ತಿತ್ತು ಎನ್ನಲಾಗಿದೆ. ಸದ್ಯ ಪೊಲೀಸರು ಪತಿ ರವಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
Advertisement
ಆರ್ ಎಂಸಿ ಯಾರ್ಡ್ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.