ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ (Bengaluru) ಕಳೆದ ರಾತ್ರಿ ಸುರಿದ ಧಾರಾಕಾರ ಮಳೆಗೆ (Rain) ಜನಜೀವನ ಅಸ್ತವ್ಯಸ್ತವಾಗಿದೆ. ಮುಂದಿನ 6 ದಿನಗಳವರೆಗೆ ನಗರದಲ್ಲಿ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಗುರುವಾರ ರಾತ್ರಿ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಭಾರೀ ಮಳೆ ಸುರಿದಿದೆ. ಧಾರಾಕಾರ ಮಳೆಗೆ ನಗರದ ಹಲವು ರಸ್ತೆ, ತಗ್ಗುಪ್ರದೇಶದ ಮನೆಗಳಿಗೆ ಮಳೆಯ ನೀರು ನುಗ್ಗಿದೆ. ಬೆಂಗಳೂರಿನ ಶಾಂತಿನಗರ, ಕಲಾಸಿಪಾಳ್ಯ, ಸಿಟಿ ಮಾರ್ಕೆಟ್, ಜಯನಗರ, ವಿಲ್ಸನ್ ಗಾರ್ಡನ್, ಎಂಜಿ ರಸ್ತೆ, ವಿವೇಕ ನಗರ, ಕೋರಮಂಗಲ, ಹೆಚ್‌ಎಸ್‌ಆರ್ ಲೇಔಟ್, ಬೆಳ್ಳಂದೂರು, ವರ್ತೂರು, ಸರ್ಜಾಪುರ, ಮಾರತಹಳ್ಳಿ, ಕಾಡುಗೋಡಿ, ವೈಟ್ ಫೀಲ್ಡ್, ಕೆಆರ್ ಪುರಂ ಸೇರಿದಂತೆ ಹಲವೆಡೆ ಭಾರೀ ಮಳೆಯಾಗಿದೆ. ಹೆಬ್ಬಾಳದ ತಗ್ಗು ಪ್ರದೇಶದ ಮನೆಗಳಿಗೆ ಮಳೆ ನೀರು ನುಗ್ಗಿದೆ.
Advertisement
Advertisement
ಎಲ್ಲೆಲ್ಲಿ ಎಷ್ಟು ಮಳೆ?
ಗುಟ್ಟಹಳ್ಳಿಯಲ್ಲಿ ಅತಿ ಹೆಚ್ಚು ಎಂದರೆ 9.1 ಸೆಂ.ಮೀ. ಮಳೆಯಾಗಿದೆ. ರಾಜಮಹಲ್‌ನಲ್ಲಿ 4 ಸೆಂ.ಮೀ., ವಿದ್ಯಾರಣ್ಯಪುರ 8.5 ಸೆಂ.ಮೀ., ಕೊಡಿಗೆಹಳ್ಳಿ 6.5 ಸೆಂ.ಮೀ., ಅಟ್ಟೂರು ಹಾಗೂ ವಿಶ್ವನಾಥ ನಾಗೇನಹಳ್ಳಿಯಲ್ಲಿ ತಲಾ 5.8 ಸೆಂ.ಮೀ., ಚೌಡೇಶ್ವರಿ ವಾರ್ಡ್ 4.7 ಸೆಂ.ಮೀ., ಹೆಚ್‌ಎಎಲ್ ವಿಮಾನ ನಿಲ್ದಾಣ 4.2 ಸೆಂ.ಮೀ., ಸಂಪAಗಿರಾಮನಗರ 4.0 ಸೆಂ.ಮೀ., ನಾಗಪುರ ಹಾಗೂ ನಂದಿನಿ ಲೇಔಟ್‌ನಲ್ಲಿ ತಲಾ 3.5 ಸೆಂ.ಮೀ., ಮಾರತಹಳ್ಳಿ 3.3 ಸೆಂ.ಮೀ., ಗಾಳಿ ಆಂಜನೇಯ ದೇವಸ್ಥಾನ 2.5 ಸೆಂ.ಮೀ., ವರ್ತೂರು 2.3 ಸೆಂ.ಮೀ. ಹಾಗೂ ಬೆಳ್ಳಂದೂರಿನಲ್ಲಿ 2.1 ಸೆಂ.ಮೀ. ಮಳೆಯಾಗಿದೆ.
Advertisement
ಶುಕ್ರವಾರ ಮತ್ತು ಶನಿವಾರವೂ ಧಾರಾಕಾರ ಮಳೆಯ ಎಚ್ಚರಿಕೆ ನೀಡಲಾಗಿದೆ. ಉತ್ತರ, ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಇದನ್ನೂ ಓದಿ: ಹೆಚ್‍ಡಿಕೆ ಶೀಘ್ರ ಗುಣಮುಖರಾಗಲೆಂದು ಅಭಿಮಾನಿಯಿಂದ ಉರುಳು ಸೇವೆ
Advertisement
ನಿನ್ನೆ ರಾತ್ರಿ ನಗರದಲ್ಲೇ ಅತಿ ಹೆಚ್ಚು ಮಳೆ ದಾಖಲಾಗಿದೆ. 2 ದಿನ ನಗರದಲ್ಲಿ ಅತಿ ಹೆಚ್ಚು ಮಳೆಯ ಎಚ್ಚರಿಕೆ ನೀಡಲಾಗಿದೆ. ಈಗಾಗಲೇ 40% ಮಳೆ ಕೊರತೆ ಇತ್ತು. ನಿನ್ನೆ ಒಂದೇ ದಿನ ನಗರದಲ್ಲಿ 9 ಸೆಂ.ಮೀ. ಮಳೆ ದಾಖಲಾಗಿದೆ. ಇಂದು ಮತ್ತು ನಾಳೆ ಗುಡುಗು ಮಿಂಚು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ.
ಸೆಪ್ಟೆಂಬರ್ ಮೊದಲ ವಾರದಲ್ಲಿ ವಾಡಿಕೆಯಂತೆ ಮಳೆ ಪ್ರಾರಂಭವಾಗಿದೆ. ಎಷ್ಟು ಪ್ರಮಾಣದಲ್ಲಿ ಮಳೆ ಆಗಬಹುದು ಎನ್ನುವ ನಿರೀಕ್ಷೆಯಲ್ಲಿದ್ದೇವೆ. ಐದಾರು ದಿನ ಮಳೆ ಮುಂದುವರಿಕೆ ಸಾಧ್ಯತೆ ಇದೆ ಎಂದು ಪಬ್ಲಿಕ್ ಟಿವಿಗೆ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಇದನ್ನೂ ಓದಿ: ಇಂದಿನಿಂದ ಟೋಲ್ ದರ ಏರಿಕೆ ಬಿಸಿ- ವಾಹನ ಸವಾರರ ಆಕ್ರೋಶ
Web Stories