ಬೆಂಗಳೂರು: 2022ಕ್ಕೆ ಟಾಟಾ ಹೇಳಿ, 2023ಕ್ಕೆ ಹಾಯ್ ಹಾಯ್ ಹೇಳಲು ಇನ್ನು ಕೆಲವೇ ಗಂಟೆಯಷ್ಟೇ ಬಾಕಿ. ಈಗಾಗಲೇ ಬೆಂಗಳೂರು (Bengaluru), ಮೈಸೂರು (Mysuru), ಹುಬ್ಬಳ್ಳಿ(Hubballi), ಕಲಬುರಗಿ, ಬೆಳಗಾವಿ (Belagavi), ಮಂಗಳೂರು (Managaluru) ಸೇರಿ ರಾಜ್ಯದೆಲ್ಲೆಡೆ ಸಂಭ್ರಮಾಚರಣೆಗಳು ಶುರುವಾಗಿವೆ. ಎಲ್ಲರೂ ರಂಗು ರಂಗಾಗಿದ್ದಾರೆ.
12 ಗಂಟೆ ಯಾವಾಗ ಆಗುತ್ತಪ್ಪಾ ಎಂದು ಎಲ್ಲರೂ ಕಾತರದಿಂದ ಕಾಯುತ್ತಿದ್ದಾರೆ. ಬೆಂಗಳೂರಿನ ಎಂಜಿ ರೋಡ್, ಬ್ರಿಗೇಡ್ ರೋಡ್‍ಗಳು ಯುವ ಸಮೂಹದಿಂದ ಕಿಕ್ಕಿರಿಯುತ್ತಿವೆ. ಪಬ್, ಬಾರ್ ಅಂಡ್ ರೆಸ್ಟೋರೆಂಟ್‍ಗಳು ಕಲರ್‌ಫುಲ್ ಆಗಿವೆ. ಮುಂಜಾಗ್ರತಾ ಕ್ರಮವಾಗಿ 8,500ಕ್ಕೂ ಹೆಚ್ಚು ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿದೆ.
Advertisement
Advertisement
ಈಗಾಗಲೇ ಇಂದಿರಾನಗರ ಚರ್ಚ್ ಸ್ಟ್ರೀಟ್ ಬಂದ್ ಆಗಿದ್ದು, ದುಬಾರಿ ಚಾರ್ಜ್ ನಡುವೆಯೂ ಪಬ್‍ಗಳಿಗೆ ಫುಲ್ ಬೇಡಿಕೆ ಕೇಳಿಬರುತ್ತಿವೆ. ಚರ್ಚ್ ಸ್ಟ್ರೀಟ್ ರಸ್ತೆಯಲ್ಲಿ ಪಬ್‍ಗಳು ಭರ್ತಿಯಾಗಿದ್ದು, ಪಬ್‍ಗಳು ಹೊಸ ವರ್ಷದ ಪಾರ್ಟಿಗೆ ದರ ಹೆಚ್ಚಿಸಿದೆ. ಪ್ರತಿಬಾರಿಗಿಂತ ಇಂದು ಶೇ.50ರಷ್ಟು ಏರಿಕೆ ಆಗಿದ್ದು, 2.5 ಸಾವಿರ ಇದ್ದ ಚಾರ್ಚ್ 4.5 ರಿಂದ 5 ಸಾವಿರ ಚಾರ್ಚ್ ಮಾಡಲಾಗುತ್ತಿದೆ. ದುಪ್ಪಟ್ಟು ಚಾರ್ಚ್ ನಡುವೆಯೂ ಪಾರ್ಟಿ ಪ್ರೀಯರು ಮುಂಗಡ ಬುಕ್ಕಿಂಗ್ ಮಾಡಿದ್ದಾರೆ. ಇದನ್ನೂ ಓದಿ: ಬಂಡೀಪುರದಲ್ಲಿ ಹೊಸ ವರ್ಷದ ಸಂಭ್ರಮಾಚರಣೆಗೆ ಅವಕಾಶವಿಲ್ಲ – ಪ್ರವಾಸಿಗರಿಗೆ ಕಾಟೇಜ್ ಕೊಡದಿರಲು ನಿರ್ಧಾರ
Advertisement
Advertisement
ವಾಚ್ ಟವರ್, ವುಮೆನ್ ಸೇಫ್ ಹೌಸ್ ನಿರ್ಮಿಸಲಾಗಿದೆ. ಸಿಸಿಟಿವಿಗಳ ಕಣ್ಗಾವಲು, ಆರೆಂಜ್ ಸ್ಕ್ವಾಡ್ ಕೂಡ ಇದೆ. ಮಧ್ಯರಾತ್ರಿ 1 ಗಂಟೆಯವರೆಗೆ ಮಾತ್ರ ಸಂಭ್ರಮಾಚರಣೆಗೆ ಅವಕಾಶವಿದೆ. ನಸುಕಿನಜಾವ 2 ಗಂಟೆಯವರೆಗೂ ಮೆಟ್ರೋ ಸೇವೆ ಇರಲಿದೆ. ಅವಧಿ ಮೀರಿದ್ರೆ ಪೊಲೀಸರು ಕಠಿಣ ಕ್ರಮ ಕೈಗೊಳ್ಳಲಿದ್ದಾರೆ. ಈಗಾಗಲೇ ಏರ್‌ಪೋರ್ಟ್ ಮೇಲ್ಸೇತುವೆ ಹೊರತುಪಡಿಸಿ ಉಳಿದೆಲ್ಲಾ ಫ್ಲೈಓವರ್ ಬಂದ್ ಆಗಿವೆ. ಇದನ್ನೂ ಓದಿ: ಕಾಂಗ್ರೆಸ್ ತುಕ್ಡೆ ತುಕ್ಡೆ ಗ್ಯಾಂಗ್ ಜೊತೆ ಹೊಂದಾಣಿಕೆ ಮಾಡಿಕೊಂಡಿದೆ: ಅಮಿತ್ ಶಾ