Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೇರಳ ಆರೋಗ್ಯ ಸಚಿವೆಯೊಂದಿಗೆ ಸುಧಾಕರ್ ವಿಡಿಯೋ ಸಂವಾದ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕೇರಳ ಆರೋಗ್ಯ ಸಚಿವೆಯೊಂದಿಗೆ ಸುಧಾಕರ್ ವಿಡಿಯೋ ಸಂವಾದ

Bengaluru City

ಕೇರಳ ಆರೋಗ್ಯ ಸಚಿವೆಯೊಂದಿಗೆ ಸುಧಾಕರ್ ವಿಡಿಯೋ ಸಂವಾದ

Public TV
Last updated: May 11, 2020 4:57 pm
Public TV
Share
3 Min Read
K Sudhakar
SHARE

– ಕೊರೊನಾ ನಿಂತ್ರಣದ ಬಗ್ಗೆ ವಿಚಾರ ವಿನಿಮಯ

ಬೆಂಗಳೂರು: ಕೋವಿಡ್ ವಿರುದ್ಧದ ಹೋರಾಟದಲ್ಲಿ ಅಳವಡಿಸಿಕೊಂಡಿರುವ ಉತ್ತಮ ನಿಯಂತ್ರಣ ಮತ್ತು ಚಿಕಿತ್ಸಾ ಪದ್ಧತಿಗಳ ಕುರಿತು ಕೇರಳದ ಆರೋಗ್ಯ ಸಚಿವೆ ಕೆ.ಕೆ. ಶೈಲಜಾ ಟೀಚರ್ ಅವರ ಜೊತೆ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಅವರು ಸೋಮವಾರ ವಿಡಿಯೋ ಸಂವಾದ ನಡೆಸಿದರು. ಐವತ್ತು ನಿಮಿಷಗಳಿಗೂ ಹೆಚ್ಚು ಕಾಲ ನಡೆದ ಸಂವಾದದಲ್ಲಿ ಎರಡೂ ರಾಜ್ಯಗಳಲ್ಲಿ ರೋಗದ ಪತ್ತೆ, ಪರೀಕ್ಷೆ ಮತ್ತು ಚಿಕಿತ್ಸೆಗೆ ಅಳವಡಿಸಿಕೊಂಡಿರುವ ಕ್ರಮಗಳು, ಅವುಗಳಿಂದ ದೊರಕಿರುವ ಫಲಿತಾಂಶ, ಲಾಕ್‍ಡೌನ್ ಸಡಿಲಿಕೆ ನಂತರ ಎದುರಾಗುವ ಸವಾಲುಗಳನ್ನು ಎದುರಿಸಲು ಕೈಗೊಳ್ಳಲಿರುವ ಮುನ್ನೆಚ್ಚರಿಕೆ ಕ್ರಮ ಕುರಿತು ವಿವರವಾಗಿ ಚರ್ಚಿಸಲಾಯಿತು. ರೋಗ ನಿಯಂತ್ರಣಕ್ಕೆ ಬರುವತನಕ ಇನ್ನು ಮುಂದೆ ನಿಯಮಿತವಾಗಿ ಸಂವಾದ ನಡೆಸಿ, ರೋಗಿಗಳಿಗೆ ಗುಣಮಟ್ಟದ ಚಿಕಿತ್ಸೆ ನೀಡುವ ಬಗ್ಗೆ ಮಾಹಿತಿ ವಿನಿಮಯ ಮಾಡಿಕೊಳ್ಳಲು ಇಬ್ಬರೂ ಸಚಿವರು ಸಹಮತ ವ್ಯಕ್ತಪಡಿಸಿದರು.

ಇತರೆ ರಾಜ್ಯಗಳಿಗೆ ಮತ್ತು ದೇಶದ ಶೇಕಡಾವಾರು ಮರಣ ಪ್ರಮಾಣಕ್ಕೆ ಹೋಲಿಸಿದರೆ ಕೇರಳ ಉತ್ತಮವಾಗಿ ಕೋವಿಡ್ ನಿರ್ವಹಣೆ ಮಾಡಲು ಕೈಗೊಂಡ ಕ್ರಮಗಳನ್ನು ವಿವರಿಸಿದ ಸಚಿವೆ ಶೈಲಜಾ ಟೀಚರ್, ವುಹಾನ್‍ನಲ್ಲಿ ಸೋಂಕು ಕಾಣಿಸಿಕೊಂಡು ಅಲ್ಲಿನ ವಿದ್ಯಾರ್ಥಿಗಳು ಕೇರಳಕ್ಕೆ ಹಿಂತಿರುಗುತ್ತಿದ್ದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಯಿತು ಎಂದು ತಿಳಿಸಿದರು. ಪಿಎಚ್‍ಸಿ ಮತ್ತು ತಾಲ್ಲೂಕು ಮಟ್ಟದಲ್ಲಿ ಉತ್ತಮ ಆರೋಗ್ಯ ಸೇವೆ ಜಾಲ ಹೊಂದಿರುವುದರಿಂದ ಕೊರೋನಾ ಸೋಂಕಿತರನ್ನು ಮುಂಚಿತವಾಗಿ ಪತ್ತೆ ಹಚ್ಚಿ ಚಿಕಿತ್ಸೆಗೆ ಒಳಪಡಿಸಿದ್ದರಿಂದ ಮತ್ತು ಪ್ರಾಥಮಿಕ ಮತ್ತು ದ್ವತೀಯ ಹಂತದ ಸೋಂಕಿತರನ್ನು ಪ್ರತ್ಯೇಕಿಸಿ ಕಟ್ಟುನಿಟ್ಟಾಗಿ ಅವರ ಮೇಲೆ ನಿಗಾವಹಿಸಿದ್ದರಿಂದ ಕೇರಳದಲ್ಲಿ ಮರಣ ಪ್ರಮಾಣ ಹೆಚ್ಚಾಗದಂತೆ ತಡೆಯಲು ಸಾಧ್ಯವಾಯಿತು ಎಂದು ತಿಳಿಸಿದರು.

ವೀಡಿಯೋ ಕಾನ್ಫರೆನ್ಸ್ ಮೂಲಕ ಇಂದು ಕೇರಳ ಆರೋಗ್ಯ ಸಚಿವೆ ಶ್ರೀಮತಿ @shailajateacher ಅವರೊಂದಿಗೆ ಸಮಾಲೋಚನೆ ನಡೆಸಿದೆ. ಕೋವಿಡ್19 ನಿಯಂತ್ರಣದಲ್ಲಿ ಎರಡೂ ಸರ್ಕಾರಗಳ ಪರಿಣಾಮಕಾರಿ ಕ್ರಮಗಳನ್ನು ಚರ್ಚಿಸಲಾಯಿತು. ಮುಂದೆ ಪರಸ್ಪರ ಸಹಕಾರದಿಂದ ಮುನ್ನೆಡೆಯುವ ನಿಟ್ಟಿನಲ್ಲಿ ಒಮ್ಮತಕ್ಕೆ ಬರಲಾಗಿದೆ. ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು. pic.twitter.com/29KNIj0Ueo

— Dr Sudhakar K (@mla_sudhakar) May 11, 2020

ಕರ್ನಾಟಕಕ್ಕೆ ಹೋಲಿಸಿದರೆ ಕೇರಳದಲ್ಲಿ ಜನಸಾಂದ್ರತೆ ವಿರಳ. ಸೋಂಕಿನ ಸರಪಳಿಯನ್ನು ತುಂಡರಿಸಲು ಆರೋಗ್ಯ ಇಲಾಖೆ ಸಿಬ್ಬಂದಿ ಜತೆ, ಆಶಾ ಕಾರ್ಯಕರ್ತೆಯರು ನೆರವಾಗುತ್ತಿದ್ದಾರೆ. ಇವರೊಂದಿಗೆ ಸಿಸಿಬಿ ಪೊಲೀಸರ ನೆರವನ್ನೂ ಪಡೆಯಲಾಗುತ್ತಿದೆ. ಸೋಂಕಿತರು ಹೆಚ್ಚಿನ ಜನರ ಸಂಪರ್ಕಕ್ಕೆ ಬಾರದಂತೆ ಕಠಿಣ ಕ್ರಮ ಕೈಗೊಂಡಿರುವುದು ಸಹ ಉತ್ತಮ ಫಲಿತಾಂಶ ನೀಡಿದೆ. ಲಾಕ್‍ಡೌನ್ ಸಡಿಲಿಕೆ ನಂತರ ಹೊರ ರಾಜ್ಯ ಮತ್ತು ವಿದೇಶಗಳಿಂದ ಬಹು ದೊಡ್ಡ ಸಂಖ್ಯೆಯಲ್ಲಿ ಕೇರಳಿಗರು ಮರಳಲು ನೋಂದಣಿ ಮಾಡಿಕೊಂಡಿದ್ದಾರೆ. ಇತ್ತೀಚಿಗೆ ಚೆನ್ನೈನಿಂದ ಆಗಮಿಸಿದ ಅನೇಕರು ಪಾಸಿಟಿವ್ ಆಗಿರುವುದು ದೊಡ್ಡ ಸವಾಲಾಗಿದೆ ಎಂದು ಕೇರಳ ಆರೋಗ್ಯ ಸಚಿವರು ಸಂವಾದದಲ್ಲಿ ಹೇಳಿದರು.

KK Shailaja 2

ಮುಂದೆ ದೊಡ್ಡ ಸಂಖ್ಯೆಯಲ್ಲಿ ಜನರು ಆಗಮಿಸಲು ಆರಂಭಿಸಿದ ಬಳಿಕವಷ್ಟೇ ಸವಾಲು ಎದುರಾಗುತ್ತದೆ. ಈ ಹಂತದಲ್ಲಿ ಕರ್ನಾಟಕದಂತಹ ಉತ್ತಮ ಚಿಕಿತ್ಸಾ ಪದ್ಧತಿಗಳನ್ನು ಅಳವಡಿಸಿಕೊಂಡಿರುವ ರಾಜ್ಯದ ಸಲಹೆ, ಸಹಕಾರ ಅಗತ್ಯವಿದೆ ಎಂದರು. ಸಂವಾದ ಸಂದರ್ಭದಲ್ಲಿ ಸಚಿವ ಸುಧಾಕರ್ ಅವರಿಂದ ಕರ್ನಾಟಕದಲ್ಲಿ ಅಳವಡಿಸಿಕೊಂಡಿರುವ ತಂತ್ರಜ್ಞಾನ ಮತ್ತು ತಜ್ಞರ ಆಧರಿತ ಚಿಕಿತ್ಸಾ ಕ್ರಮ, ಆರಂಭದಲ್ಲಿ ಎರಡರಷ್ಟಿದ್ದ ಲ್ಯಾಬ್‍ಗಳ ಸಂಖ್ಯೆ ಇದೀಗ 35 ಕ್ಕೆ ಏರಿಕೆಯಾಗಿರುವ ಮತ್ತು ಪ್ರತಿದಿನ ಐದೂವರೆ ಸಾವಿರ ಟೆಸ್ಟ್ ಮಾಡುತ್ತಿರುವ ಮಾಹಿತಿ ಪಡೆದು ಮೆಚ್ಚುಗೆ ವ್ಯಕ್ತಪಡಿಸಿದರು. ಗರ್ಭಿಣಿ ಮತ್ತು ಹಿರಿಯ ನಾಗರಿಕರ ಚಿಕಿತ್ಸೆಗೆ ಸಂಬಂಧಿಸಿದಂತೆ ಐಸಿಎಂಆರ್ ಮಾರ್ಗಸೂಚಿ ಮತ್ತು ಎದುರಾಗಿರುವ ಗೊಂದಲಗಳ ಬಗ್ಗೆಯೂ ಸಚಿವದ್ವಯರು ಚರ್ಚಿಸಿ, ಇಂತಹ ವಿಷಯಗಳ ಬಗ್ಗೆ ಏಕರೂಪದ ಕ್ರಮಗಳ ಬಗ್ಗೆ ಮಾರ್ಗಸೂಚಿ ನೀಡುವಂತೆ ಕೇಂದ್ರಕ್ಕೆ ಮನವಿ ಮಾಡಲು ನಿರ್ಧರಿಸಿದರು.

sudhakar 3

ಕೊರೋನಾ ಸೋಂಕಿತರು ಮತ್ತು ಕುಟುಂಬ ಸದಸ್ಯರನ್ನು ಕಳಂಕಿತರಂತೆ ಕಾಣುವ ಮನೋಭಾವ ಸುಶಿಕ್ಷಿತರಲ್ಲೂ ಕಾಣುತ್ತಿದೆ. ಸಾಮಾಜಿಕ ಪಿಡುಗಿನಂತೆ ಕಾಣುವ ಮನೋಭಾವ ಕೆಲವರಲ್ಲಿದೆ, ಕೇರಳದ ಪರಿಸ್ಥಿತಿ ಏನು ಎಂಬ ಸಚಿವ ಸುಧಾಕರ್ ಅವರ ಪ್ರಶ್ನೆಗೆ, “ಕೇರಳದಲ್ಲೂ ಅದೇ ಸ್ಥಿತಿಯಿದೆ. ಸೋಂಕಿತರನ್ನು ಕ್ವಾರಂಟೈನ್ ಮಾಡುವುದಕ್ಕೆ ಸಂಬಂಧಿಸಿದಂತೆ ತಕರಾರು ವ್ಯಕ್ತವಾಗುತ್ತಿದೆ. ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಮಾಧ್ಯಮಗಳ ಮೂಲಕ ಪ್ರತಿದಿನವೂ ಜನರಲ್ಲಿ ಅರಿವು ಮೂಡಿಸುವ ಯತ್ನ ನಡೆಸಿದ್ದಾರೆ” ಎಂದರು.

kk shailaja759

ಸೋಂಕಿತರನ್ನು ಕ್ವಾರಂಟೈನ್‍ಗೆ ಒಳಪಡಿಸುತ್ತಿರುವ ರೀತಿ, ಅವರನ್ನು ಟೆಸ್ಟ್ ಗೆ ಒಳಪಡಿಸುತ್ತಿರುವುದು, ಉಸಿರಾಟ ಹಾಗೂ ಇತರೆ ಕಾಯಿಲೆಗಳಿರುವವರಿಗೆ ಔಷಧ ಉಪಚಾರ ನೀಡುತ್ತಿರುವುದು, ಖಾಸಗಿ ಮೆಡಿಕಲ್ ಕಾಲೇಜು ಮತ್ತು ವೈದ್ಯರ ಸಹಕಾರ, ಮೃತಪಟ್ಟವರ ಅಂತ್ಯ ಸಂಸ್ಕಾರಕ್ಕೆ ಸಂಬಂಧಿಸಿದಂತೆ ಅಳವಡಿಸಿಕೊಂಡಿರುವ ಕ್ರಮ, ಗರ್ಭಿಣಿಯರಿಗೆ ನೀಡುತ್ತಿರುವ ಚಿಕಿತ್ಸೆ, ವಿದೇಶಿ ಪ್ರಯಾಣಿಕರ ಆಗಮನದ ಬಳಕ ಅವರನ್ನು ಕ್ವಾರಂಟೈನ್‍ಗೆ ಒಳಪಡಿಸುತ್ತಿರುವುದು ಸೇರಿದಂತೆ ಇತರೆ ಪ್ರಮುಖ ವಿಷಯಗಳ ಬಗ್ಗೆ ವಿಚಾರ ವಿನಿಮಯ ಮಾಡಿಕೊಳ್ಳಲಾಯಿತು.

corona 6

ವಿಡಿಯೋ ಸಂವಾದ ಸಂದರ್ಭದಲ್ಲಿ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್, ರಾಜೀವ್ ಗಾಂಧಿ ಆರೋಗ್ಯ ವಿವಿಯ ಕುಲಪತಿ ಡಾ. ಸಚ್ಚಿದಾನಂದ, ಡಿಎಂಇ ಡಾ. ಗಿರೀಶ್, ಜಯದೇವ ಆಸ್ಪತ್ರೆ ಮುಖ್ಯಸ್ಥ ಡಾ. ಮಂಜುನಾಥ್, ಕಿಮ್ಸ್ ನಿವೃತ್ತ ನಿರ್ದೇಶಕ ಡಾ. ಸುದರ್ಶನ್ ಮತ್ತಿತರೆ ಅಧಿಕಾರಿಗಳು ಹಾಜರಿದ್ದರು.

TAGGED:bengaluruCoronaK SudhakarKerala Health MinisterKK ShailajaPublic TVVideo Conversationಕೆ.ಸುಧಾಕರ್ಕೆಕೆ ಶೈಲಜಾಕೇರಳ ಆರೋಗ್ಯ ಸಚಿವೆಕೊರೊನಾಪಬ್ಲಿಕ್ ಟಿವಿಬೆಂಗಳೂರುವಿಡಿಯೋ ಸಂವಾದ
Share This Article
Facebook Whatsapp Whatsapp Telegram

Cinema news

Shivarajkumar
100% ಗಿಲ್ಲಿನೇ ಬಿಗ್‌ ಬಾಸ್‌ ಗೆಲ್ಲೋದು – ಶಿವಣ್ಣ ಬ್ಯಾಟಿಂಗ್‌
Cinema Latest Main Post Sandalwood
Sukhibhava
ಸುಖೀಭವ ಸಿನಿಮಾ ಟೀಸರ್, ಸಾಂಗ್ ರಿಲೀಸ್
Cinema Latest Sandalwood Top Stories
gilli rakshita shetty bigg boss
ಗಿಲ್ಲಿಯ ಆ ಒಂದು ಮಾತು.. ಕಣ್ಣೀರಾಕಿದ ಕರುನಾಡು; ಯಾಕೆ ಗೊತ್ತಾ?
Cinema Latest Top Stories TV Shows
dhanush 1
ಸ್ಟಾರ್ ನಟಿ ಜೊತೆ ಶೀಘ್ರವೇ ಧನುಷ್ ಮದ್ವೆ
Cinema Latest South cinema

You Might Also Like

Ex Gangster Arun Gawli Daughters
Latest

ಮಾಜಿ ಗ್ಯಾಂಗ್‌ಸ್ಟರ್ ಅರುಣ್ ಗಾವ್ಳಿ ಇಬ್ಬರು ಪುತ್ರಿಯರಿಗೂ ಬಿಎಂಸಿ ಚುನಾವಣೆಯಲ್ಲಿ ಸೋಲು

Public TV
By Public TV
21 seconds ago
Rahul Gandhi 3
Latest

ಮುಂಬೈ ಪಾಲಿಕೆ ಎಲೆಕ್ಷನ್‌ನಲ್ಲಿ ಇಂಕ್ ವಿವಾದ – ವೋಟ್‌ ಚೋರಿ ರಾಷ್ಟ್ರದ್ರೋಹದ ಕೃತ್ಯ ಎಂದ ರಾಹುಲ್‌!

Public TV
By Public TV
19 minutes ago
walkie talkie 1
Automobile

ವಾಕಿ ಟಾಕಿ ಅಕ್ರಮ ಮಾರಾಟ: 13 ಇ-ಕಾಮರ್ಸ್ ವೆಬ್‌ಸೈಟ್‌ಗಳಿಗೆ ತಲಾ 10 ಲಕ್ಷ ರೂ. ದಂಡ

Public TV
By Public TV
24 minutes ago
Ramanagudda Reservoir
Chamarajanagar

40 ವರ್ಷಗಳ ಬಳಿಕ ರಾಮನಗುಡ್ಡ ಜಲಾಶಯಕ್ಕೆ ನೀರು; ಕುಣಿದು ಕುಪ್ಪಳಿಸಿದ ರೈತರು

Public TV
By Public TV
1 hour ago
Lakkundi Gold 3
Districts

ನಿಧಿ ಸಿಕ್ಕ ಲಕ್ಕುಂಡಿಯಲ್ಲಿ ಉತ್ಖನನ ಕಾರ್ಯ ಶುರು – ಇವತ್ತಿನ ಶೋಧದಲ್ಲೂ ಸಿಗುತ್ತಾ ಚಿನ್ನ, ವಜ್ರ..?

Public TV
By Public TV
2 hours ago
Train
Bengaluru City

ಪೊಂಗಲ್ ಹಬ್ಬ: ಕೊಟ್ಟಾಯಂ-ಬೆಂಗಳೂರು ಕಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?