ಇದೇ ಮೊದಲ ಬಾರಿಗೆ ಬೆಂಗಳೂರಿನಲ್ಲಿ ನಡೆಯುತ್ತಿರುವ ಕಂಬಳದ ಮೊದಲ ಕೆರೆ ಉದ್ಘಾಟನೆ ನಡೆದಿದೆ. ವಿಶೇಷ ದೀಪ ಬೆಳಗಿಸುವ ಮೂಲಕ ಕೆರೆಯನ್ನು ಉದ್ಘಾಟಿಸಿದ್ದಾರೆ ಪುನೀತ್ ಪತ್ನಿ ಅಶ್ವಿನಿ (Ashwini Puneet Rajkumar). ದೀಪಾ ಬೆಳಗಿಸಿ, ಗಂಗಾರಾತಿ ಮಾಡಿ ಕರೆಯನ್ನು ಉದ್ಘಾಟನೆ (Inauguration) ಮಾಡಲಾಗಿದೆ. ಕಂಬಳ ಸಮಿತಿ ಅಧ್ಯಕ್ಷ ಶಾಸಕ ಅಶೋಕ್ ರೈ ಹಾಗೂ ಬೆಂಗಳೂರು ಕಂಬಳ ಸಮಿತಿ ಸಂಘಟನಾ ಅಧ್ಯಕ್ಷ ಉಮೇಶ್ ಶೆಟ್ಟಿ ಸೇರಿದಂತೆ ಹಲವರು ಈ ಸಂದರ್ಭದಲ್ಲಿ ಹಾಜರಿದ್ದರು.
ಕಂಬಳಕ್ಕೆ ತಾರೆಯರ ಸಾಥ್
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇದೇ ಮೊದಲ ಬಾರಿಗೆ ಕಂಬಳ (Bengaluru Kambala) ನಡೆಯುತ್ತಿದೆ. ಕಂಬಳಕ್ಕಾಗಿ ಅರಮನೆ ಮೈದಾನ ಸಂಪೂರ್ಣವಾಗಿ ಸಿದ್ಧಗೊಂಡಿದೆ. ಇಂದು ಮತ್ತು ನಾಳೆ ನಡೆಯಲಿರುವ ಕಂಬಳಕ್ಕೆ ಅನುಷ್ಕಾ ಶೆಟ್ಟಿ (Anushka Shetty), ರಿಷಬ್ ಶೆಟ್ಟಿ, ಪೂಜಾ ಹೆಗ್ಡೆ, ವಿವೇಕ್ ಒಬೆರಾಯ್, ಸೇರಿದಂತೆ ಹಲವು ತಾರೆಯರು ಮೆರಗು ನೀಡಲಿದ್ದಾರೆ.
ಕರಾವಳಿ ಕಂಬಳ ಉತ್ಸವಕ್ಕೆ ಅನುಷ್ಕಾ ಶೆಟ್ಟಿ, ಪೂಜಾ ಹೆಗ್ಡೆ, ನಟ ದರ್ಶನ್ ಕಾಂತಾರ ಹೀರೋ ರಿಷಬ್(Rishab Shetty), ರಕ್ಷಿತ್ ಶೆಟ್ಟಿ, ಉಪೇಂದ್ರ, ಶಿವಣ್ಣ, ಆಶಿಶ್ ಬಲ್ಲಾಳ್, ರಾಜ್ ಬಿ ಶೆಟ್ಟಿ, ಮೇಘಾ ಶೆಟ್ಟಿ ಸೇರಿದಂತೆ ಹಲವರು ಭಾಗಿಯಾಗುತ್ತಿದ್ದಾರೆ.
ಇದು ಐತಿಹಾಸಿಕ ಕಾರ್ಯಕ್ರಮವಾಗಿದ್ದು, ಕರಾವಳಿಯ ಸಮಸ್ತ ಸಮುದಾಯದವರು ಒಂದೆಡೆ ಒಗ್ಗಟ್ಟಾಗಿ ಸೇರುವ ಬೃಹತ್ ವೇದಿಕೆ ಇದಾಗಲಿದೆ ಎಂದರು. ಇಂದಿನ ಸಮಾಲೋಚನಾ ಸಭೆಯಲ್ಲಿ ಕರಾವಳಿಯ ವಿವಿಧ ಭಾಷೆ-ಜಾತಿಗಳ 50ಕ್ಕೂ ಅಧಿಕ ಸಂಘಟನೆಗಳು ಭಾಗಿಯಾಗಿದ್ದು, ಅವರೊಂದಿಗೆ ಕಾರ್ಯಕ್ರಮದ ರೂಪುರೇಷೆ ಬಗ್ಗೆ ಮಾತುಕತೆ ನಡೆಸಲಾಗಿದೆ.
ಬೆಂಗಳೂರು ಕಂಬಳಕ್ಕೆ ಈಗಾಗಲೇ 150ಕ್ಕೂ ಅಧಿಕ ಕೋಣಗಳ ನೋಂದಣಿ ಆಗಿದ್ದು, ಬೆಂಗಳೂರು ಕಂಬಳ ಬೆಂಗಳೂರಿನ ಅರಮನೆ ಮೈದಾನದ 70 ಎಕರೆ ಜಾಗದಲ್ಲಿ ನಡೆಯಲಿದೆ ಎಂದು ಬೆಂಗಳೂರಿನ ಕಂಬಳ ತಂಡ ತಿಳಿಸಿದೆ.