ಬೆಂಗಳೂರು: ಕೊರೊನಾ ವೈರಸ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆ ಪ್ರತಿ ವರ್ಷ ನಡೆಯುತ್ತಿದ್ದ ಬೆಂಗಳೂರು ಕರಗ ಮಹೋತ್ಸವವನ್ನು ಈ ಬಾರಿ ರದ್ದುಗೊಳಿಸಲಾಗಿದೆ.
ದೇಶಾದ್ಯಂತ ಲಾಕ್‍ಡೌನ್ ಜಾರಿಯಿರುವ ಹಿನ್ನೆಲೆ ಜನರು ಮನೆಯಿಂದ ಹೊರ ಬರಬಾರದೆಂದು ಸೂಚನೆ ಇದೆ. ಹಾಗೆಯೇ ಯಾವುದೇ ಧಾರ್ಮಿಕ ಪೂಜಾ ಕಾರ್ಯಕ್ರಮ ನಡೆಸಬಾರದು ಎಂದು ತಿಳಿಸಲಾಗಿದೆ. ಹೀಗಾಗಿ ಗೃಹ ಇಲಾಖೆಯ ಆದೇಶದ ಅಡಿ ಕರಗ ಮಹೋತ್ಸವವನ್ನು ರದ್ದುಗೊಳಿಸಲಾಗಿದ ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
Advertisement
Advertisement
ಕಳೆದ ಬಾರಿ ಚೈತ್ರ ಪೂರ್ಣಿಮೆಯ ದಿನದಂದು ಮಧ್ಯರಾತ್ರಿ ಧರ್ಮರಾಯಸ್ವಾಮಿ ದೇವಸ್ಥಾನದಲ್ಲಿ ಧಾರ್ಮಿಕ ವಿಧಿ-ವಿಧಾನಗಳೊಂದಿಗೆ ಬೆಂಗಳೂರು ಕರಗ ಮಹೋತ್ಸವ ವೈಭವಪೂರ್ಣವಾಗಿ ನಡೆದಿತ್ತು.
Advertisement
ಕರಗ ಹೊತ್ತಿದ್ದ ಅರ್ಚಕ ಎನ್. ಮನು ಒಂದು ಕೈಯಲ್ಲಿ ಕತ್ತಿ, ಮತ್ತೊಂದು ಕೈಯಲ್ಲಿ ಮಂತ್ರದಂಡ ಹಿಡಿದು ಧರ್ಮರಾಯಸ್ವಾಮಿ ದೇವಾಲಯದ ಗುಡಿಯಿಂದ ಹೊರಕ್ಕೆ ಬರುತ್ತಿದ್ದಂತೆ ತಮಟೆ, ಮಂಗಳ ವಾದ್ಯಗಳು ಮೊಳಗಿದ್ದವು. ಖಡ್ಗ ಹಿಡಿದಿದ್ದ ನೂರಾರು ವೀರಕುಮಾರರು ಗೋವಿಂದಾ ಗೋವಿಂದಾ ಎಂದು ನಾಮಸ್ಮರಣೆ ಮಾಡುತ್ತಾ ಕರಗದೊಂದಿಗೆ ಹೆಜ್ಜೆ ಹಾಕಿದ್ದರು.