ಬೆಂಗಳೂರು: ವಿಶ್ವವಿಖ್ಯಾತ ಬೆಂಗಳೂರು ಕರಗ (Bengaluru Karaga) ಶಕ್ತ್ಯೋತ್ಸವಕ್ಕೆ ದಿನಾಂಕ ಫಿಕ್ಸ್ ಆಗಿದೆ. ಏಪ್ರಿಲ್ 15 ರಿಂದ 23ರ ವರೆಗೆ ಬೆಂಗಳೂರು ಕರಗ ಮಹೋತ್ಸವ ನಡೆಯಲಿದೆ.
ಏಪ್ರಿಲ್ 23ರ ಚೈತ್ರ ಪೌರ್ಣಮಿಯಂದು ಕರಗ ಶಕ್ತ್ಯೋತ್ಸವ ನಡೆಯಲಿದೆ. ಈ ಬಾರಿಯೂ ಪೂಜಾರಿ ಎ. ಜ್ಞಾನೇಂದ್ರ ಅವರು ಕರಗ ಹೊರಲಿದ್ದಾರೆ. ಈ ಮೂಲಕ ಬರೋಬ್ಬರಿ 13ನೇ ಬಾರಿ ಇವರು ಕರಗ ಹೊರಲಿದ್ದಾರೆ. ಇದನ್ನೂ ಓದಿ: ಲೋಕ ಅಖಾಡಕ್ಕಿಳಿಯಲು ಹಿಂದೇಟು – ಹೆಚ್.ಸಿ ಮಹದೇವಪ್ಪಗೆ ಡಬಲ್ ಒತ್ತಡ
ಕರಗ ಉತ್ಸವ ಸಂಬಂಧ ಭಾನುವಾರ ಸಭೆ ನಡೆದಿತ್ತು. ಈ ಸಭೆಯಲ್ಲಿ ದಿನಾಂಕ ಫಿಕ್ಸ್ ಮಾಡಲಾಗಿದೆ. ಜೊತೆಗೆ ಮುಜರಾಯಿ ಇಲಾಖೆ ಮತ್ತು ಧರ್ಮರಾಯ ಸ್ವಾಮಿ ದೇವಾಲಯದ ಆಡಳಿತ ಮಂಡಳಿಯು ಕರಗ ಹೊರಲು ಜ್ಞಾನೇಂದ್ರ ಸ್ವಾಮಿ ಅವರನ್ನು ಆಯ್ಕೆ ಮಾಡಿದೆ. ಯಾವುದೇ ಸಮಸ್ಯೆಯಾಗದಂತೆ ಶಾಸ್ತ್ರೋಕ್ತವಾಗಿ ಕರಗ ನಡೆಸಲು ಸಭೆಯಲ್ಲಿ ನಿರ್ಧರಿಸಲಾಗಿದೆ.
ಕಳೆದ ವರ್ಷ ಕೆಲ ಕಿಡಿಗೇಡಿಗಳು ಎ. ಜ್ಞಾನೇಂದ್ರ ಅವರ ಮೇಲೆ ಕೆಮಿಕಲ್ ಎರಚಿ ಕರಗಕ್ಕೆ ಅಡ್ಡಿಪಡಿಸಲು ಮುಂದಾಗಿದ್ದರು. ಆದರೂ ಜ್ಞಾನೇಂದ್ರ ಅವರು ಯಶಸ್ವಿಯಾಗಿ ದ್ರೌಪದಿದೇವಿ ಕರಗವನ್ನು ರಾಜಬೀದಿ ಉತ್ಸವ ಮುಗಿಸಿ ಧರ್ಮರಾಯ ಸ್ವಾಮಿ ದೇವಾಲಯ ತಲುಪಿಸಿದ್ದರು.