ಕಾರವಾರ: ಭಾರೀ ಮಳೆ ಹಾಗೂ ಭೂಕುಸಿತ ಹಿನ್ನೆಲೆಯಲ್ಲಿ ಬೆಂಗಳೂರಿನಿಂದ ಕಾರವಾರಕ್ಕೆ ಬರುವ ರೈಲುಗಳು ರದ್ದಾಗಿವೆ.
ಕೆಎಸ್‌ಆರ್ ಬೆಂಗಳೂರು–ಕಾರವಾರ ಪಂಚಗಂಗಾ ಎಕ್ಸ್‌ಪ್ರೆಸ್ (16595), ಕಾರವಾರ–ಕೆಎಸ್‌ಆರ್ ಬೆಂಗಳೂರು ಪಂಚಗಂಗಾ ಎಕ್ಸ್‌ಪ್ರೆಸ್ (16596) ರೈಲುಗಳ ಪ್ರಯಾಣ ರದ್ದುಗೊಂಡಿವೆ.
ವಿಜಯಪುರ–ಎಸ್‌ಎಸ್‌ಎಸ್ ಹುಬ್ಬಳ್ಳಿ ಪ್ಯಾಸೆಂಜರ್ (56920) ರೈಲಿನ ಸೇವೆಯನ್ನೂ ರದ್ದುಗೊಳಿಸಲಾಗಿದೆ.
