– ಕೆಐಎಎಲ್‍ನಲ್ಲಿ ಹೈ ಅಲರ್ಟ್
ಬೆಂಗಳೂರು: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತಡರಾತ್ರಿ ಬಂದ 72 ಮಂದಿ ಪ್ರಯಾಣಿಕರನ್ನು ಕೊರೊನಾ ತಪಾಸಣೆಗೆ ಒಳಪಡಿಸಲಾಗಿದೆ.
ಫ್ರಾನ್ಸ್ ಹಾಗೂ ಜರ್ಮನಿಯಿಂದ ಬಂದ 72 ಮಂದಿ ಪ್ರಯಾಣಿಕರಲ್ಲಿ ಆಕಾಶ್ ಆಸ್ಪತ್ರೆಗೆ 63 ಮಂದಿ ಹಾಗೂ ಸರ್ ಸಿ.ವಿ. ರಾಮನ್ ಆಸ್ಪತ್ರೆಯಲ್ಲಿ 09 ಮಂದಿಯನ್ನು ತಪಾಸಣೆಗೆ ಒಳಪಡಿಸಲಾಗಿದೆ. ಇವರಲ್ಲಿ ಅಮೆರಿಕಾದಿಂದ ಫ್ರಾನ್ಸ್ ಗೆ ಬಂದು, ಫ್ರಾನ್ಸ್ ನಿಂದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿದ್ದ ಓರ್ವ ವ್ಯಕ್ತಿಗೆ ಕೊರೊನಾ ಸೋಂಕಿನ ಲಕ್ಷಣಗಳು ಕಂಡು ಬಂದಿದೆ.
Advertisement
Advertisement
ಈ ಹಿನ್ನೆಲೆಯಲ್ಲಿ ಶಂಕಿತ ಪ್ರಕರಣ ಎಂದು ಹೇಳಿ ವ್ಯಕ್ತಿಯನ್ನು ಬೆಂಗಳೂರಿನ ರಾಜೀವ್ ಗಾಂಧಿ ಎದೆರೋಗ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ವಿದೇಶದಿಂದ ಬರುವ ಎಲ್ಲಾ ಪ್ರಯಾಣಿಕರನ್ನು ಆಸ್ಪತ್ರೆಗಳಿಗೆ ಕರೆದುಕೊಂಡು ಹೋಗಿ ತಪಾಸಣೆ ನಡೆಸಲಾಗುತ್ತಿದೆ. ಪ್ರಯಾಣಿಕರನ್ನು ಎ, ಬಿ, ಸಿ ಎಂದು ವಿಂಗಡನೆ ಮಾಡಿ ತಪಾಸಣೆ ಮಾಡಲಾಗುತ್ತಿದೆ.