ಬೆಂಗಳೂರು: ಕೆಪಿಎಲ್ ಮ್ಯಾಚ್ ಫಿಕ್ಸಿಂಗ್ ಹಗರಣದ ಸಂಬಂಧ ಸ್ಯಾಂಡಲ್ ವುಡ್ ನಟಿಯರನ್ನು ವಿಚಾರಣೆಗೆ ಒಳಪಡಿಸಲು ಮುಂದಾಗಿರುವ ಸಿಸಿಬಿ ಅಧಿಕಾರಿಗಳಿಗೆ ಸ್ಯಾಂಡಲ್ ವುಡ್ ನಟಿಯರು ಷರತ್ತು ವಿಧಿಸಿದ್ದಾರೆ.
ಕೆಪಿಎಲ್ ಮ್ಯಾಚ್ ಫಿಕ್ಸಿಂಗ್ ಹನಿಟ್ರ್ಯಾಪ್ ಅಲ್ಲಿ ಸ್ಯಾಂಡಲ್ ವುಡ್‍ನ ಮೂವರು ನಟಿಯರು ಭಾಗಿಯಾಗಿದ್ದಾರೆ ಅನ್ನೋ ಆರೋಪ ಇದೆ. ಈ ಆರೋಪ ಹಿನ್ನೆಲೆಯಲ್ಲಿ ಸಾಕಷ್ಟು ತನಿಖೆ ನಡೆಸಿರೋ ಸಿಸಿಬಿ ಅಧಿಕಾರಿಗಳು ಕೆಲವೊಂದು ಸಾಕ್ಷ್ಯಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಆಟಗಾರರ ಜೊತೆಯಲ್ಲಿ ಪಂಚತಾರಾ ಹೋಟೆಲ್ ಗಳಲ್ಲಿ ಕಾಣಿಸಿಕೊಂಡಿರೋ ಈ ನಟಿಯರು ಹನಿಟ್ರ್ಯಾಪ್ ಅಲ್ಲಿ ಭಾಗಿಯಾಗಿದ್ರಾ ಎನ್ನುವ ಅನುಮಾನ ಇದೆ.
Advertisement
Advertisement
ಈ ಹಿನ್ನೆಲೆಯಲ್ಲಿ ವಿಚಾರಣೆಗೆ ಮುಂದಾಗಿರುವ ಸಿಸಿಬಿ ಅಧಿಕಾರಿಗಳಿಗೆ ಸ್ಯಾಂಡಲ್ ವುಡ್ ನಟಿಮಣಿಯರು ಒಂದು ಷರತ್ತುಗಳನ್ನು ಹಾಕಿದ್ದಾರೆ. ನಾವು ವಿಚಾರಣೆಗೆ ಹಾಜರಾಗಲು ಯಾವುದೇ ಭಯ ಇಲ್ಲ. ಚಾಮರಾಜಪೇಟೆಯಲ್ಲಿ ಇರುವ ಕೇಂದ್ರ ಕಚೇರಿಗೆ ವಿಚಾರಣೆಗೆ ಹಾಜರಾಗೋದಿಲ್ಲ. ಅಲ್ಲಿ ವಿಚಾರಣೆಗೆ ಹಾಜರಾದರೇ ಮಾಧ್ಯಮಗಳಿಗೆ ಸಿಕ್ಕಿ ಬೀಳುತ್ತೇವೆ. ಆ ಹಿನ್ನೆಲೆಯಲ್ಲಿ ನಾವು ಅಲ್ಲಿಗೆ ವಿಚಾರಣೆಗೆ ಬರೋದಿಲ್ಲ ಎಂದು ಮನವಿ ಮಾಡಿದ್ದಾರೆ.
Advertisement
ಅಷ್ಟೇ ಅಲ್ಲದೆ ರಾಜಕಾರಣಿಗಳ ಮೂಲಕ ಕೂಡ ಅಧಿಕಾರಿಗಳ ಮೇಲೆ ಒತ್ತಡ ಹೇರಲಾಗ್ತಿದೆ ಎನ್ನುವ ವಿಚಾರ ಮೂಲಗಳಿಂದ ಸಿಕ್ಕಿದೆ.