ಬೆಂಗಳೂರು: ಇತ್ತೀಚೆಗೆ ಸಿಲಿಕಾನ್ ಸಿಟಿ ಬೆಂಗಳೂರಲ್ಲಿ (Bengaluru) ವಿದ್ಯಾರ್ಥಿಗಳ ಆತ್ಮಹತ್ಯೆ ಪ್ರಕರಣ (Suicide Case) ಹೆಚ್ಚಾಗುತ್ತಿದೆ. ಆ ಸಾಲಿಗೆ ಮತ್ತೊಂದು ಪ್ರಕರಣ ಸೇರ್ಪಡೆಯಾಗಿದೆ.
ವಿವಿ ಪುರಂನಲ್ಲಿರುವ ಖಾಸಗಿ ಕಾಲೇಜು ಕಟ್ಟಡದ 6ನೇ ಮಹಡಿಯಿಂದ ಜಿಗಿದು ವಾಣಿ ಎಂಬ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ಎಲ್ಲರನ್ನೂ ಪ್ರೀತಿಸುವುದು, ಒಟ್ಟಿಗೆ ಬಾಳುವುದು ಮಾನವೀಯತೆಯ ಗುರುತು – ಕ್ರೈಸ್ತ ನಮನ ಕಾರ್ಯಕ್ರಮದಲ್ಲಿ ಗೆಹ್ಲೋಟ್
Advertisement
Advertisement
ಕಾನೂನು ವಿಭಾಗದ ವಿದ್ಯಾರ್ಥಿನಿಯಾಗಿದ್ದ (Law Student) ತ್ಯಾಗರಾಜನಗರದ ನಿವಾಸಿ ವಾಣಿ ಆತ್ಮಹತ್ಯೆಗೆ ಎಂಗೇಜ್ಮೆಂಟ್ ಬ್ರೇಕಪ್ ಕಾರಣ ಎಂದು ಪೊಲೀಸರು (Police) ತಿಳಿಸಿದ್ದಾರೆ. ಇದನ್ನೂ ಓದಿ: ನನ್ನನ್ನು ಕಳ್ಳತನ ಕೇಸ್ನಲ್ಲಿ ಅರೆಸ್ಟ್ ಮಾಡಿಲ್ಲ – ಎರಡನೇ ಮದುವೆ ಕೂಡ ಆಗಿಲ್ಲ: ಅಟ್ಟಿಕಾ ಬಾಬು ಸ್ಪಷ್ಟನೆ
Advertisement
Advertisement
ಆತ್ಮಹತ್ಯೆ ಸ್ಥಳದಲ್ಲಿ ಡೆತ್ನೋಟ್ (Death Note) ಸಿಕ್ಕಿದ್ದು, ಅದರಲ್ಲಿ ಪ್ರಮುಖವಾಗಿ ಇದೇ ಅಂಶ ಉಲ್ಲೇಖವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.