– ಸರ್ಕಾರದ ವಿರುದ್ಧ ಬಿಜೆಪಿ ಖಂಡನೆ
ಬೆಂಗಳೂರು: ಪ್ರತ್ಯೇಕ ಲಿಂಗಾಯತ ಧರ್ಮದ ವಿಚಾರವಾಗಿ ಗೃಹ ಸಚಿವ ಎಂ.ಬಿ.ಪಾಟೀಲ್ ಅವರ ನಕಲಿ ಪತ್ರ ವೈರಲ್ ಮಾಡಿದ್ದ ಆರೋಪದ ಹಿನ್ನೆಲೆಯಲ್ಲಿ ಸಿಐಡಿ ಸೈಬರ್ ಘಟಕದ ಪೊಲೀಸರು ಪೋಸ್ಟ್ಕಾರ್ಡ್.ಕಾಂ ಸಂಪಾದಕ ಮಹೇಶ್ ವಿಕ್ರಂ ಹೆಗ್ಡೆಯನ್ನು ಬಂಧಿಸಿದ್ದಾರೆ.
ಪ್ರತ್ಯೇಕ ಲಿಂಗಾಯತ ಧರ್ಮದ ವಿಚಾರವಾಗಿ ಗೃಹ ಸಚಿವ ಎಂ.ಬಿ.ಪಾಟೀಲ್ ಅವರು ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಪತ್ರ ಬರೆದಿದ್ದಾರೆ ಎನ್ನುವ ರೀತಿಯಲ್ಲಿ ಪತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡಲಾಗಿತ್ತು. ಬಳಿಕ ಈ ಪತ್ರವು ವೈರಲ್ ಆಗಿ ಭಾರೀ ಚರ್ಚೆಗೆ ಕಾರಣವಾಗಿತ್ತು. ಈ ಪತ್ರವನ್ನು ನಾನು ಬರೆದಿಲ್ಲ. ಯಾರೋ ಉದ್ದೇಶಪೂರ್ವಕವಾಗಿ ಹೀಗೆ ಮಾಡಿದ್ದಾರೆ ಎಂದು ಆರೋಪಿಸಿ ಸಚಿವರು ವಿಜಯಪುರದ ಆದರ್ಶನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ನಂತರ ಈ ಪ್ರಕರಣವನ್ನು ಸಿಐಡಿಗೆ ವರ್ಗಾವಣೆ ಮಾಡಲಾಗಿತ್ತು. ಈಗ ಈ ಪ್ರಕರಣದ ಹಿನ್ನೆಲೆಯಲ್ಲಿ ಸಿಐಡಿ ಆರೋಪಿಯನ್ನು ಬಂಧಿಸಿದೆ.
Advertisement
Advertisement
ಮಹೇಶ್ ವಿಕ್ರಂ ಹೆಗ್ಡೆ ಈ ಹಿಂದೆ ಜೈನ ಮುನಿ ಯೋರ್ವರ ಕುರಿತು ದೇಶಾದ್ಯಂತ ವೈರಲ್ ಆಗಿದ್ದ ಸುದ್ದಿಯೊಂದನ್ನು ಟ್ವೀಟ್ ಮಾಡಿದ್ದರು. ಆ ಸುದ್ದಿಯ ಕುರಿತಾಗಿ ಗಫರ್ ಬೇಗ್ ಎನ್ನುವವರು ಕೇಸ್ ದಾಖಲಿಸಿದ್ದರು. ಈ ದೂರಿನ ಹಿನ್ನೆಲೆಯಲ್ಲಿ ಪೊಲೀಸರು ರಾತ್ರೋರಾತ್ರಿ ಮಹೇಶ್ ವಿಕ್ರಂ ಹೆಗ್ಡೆ ಅವರನ್ನು ಬಂಧಿಸಿದ್ದರು. ನಂತರ ಜಾಮೀನಿನ ಮೇಲೆ ಮಹೇಶ್ ಹೆಗ್ಡೆ ಅವರನ್ನು ಕೋರ್ಟ್ ಬಿಡುಗಡೆ ಮಾಡಿತ್ತು.
Advertisement
ಸರ್ಕಾರದ ವಿರುದ್ಧ ಖಂಡನೆ:
ಸರ್ಕಾರ ಮಹೇಶ್ ಹೆಗ್ಡೆ ಅವರನ್ನು ಬಂಧಿಸಿದನ್ನು ಖಂಡಿಸಿ ಸಾಮಾಜಿಕ ಜಾಲತಾಣದಲ್ಲಿ ಸರ್ಕಾರ ವಿರುದ್ಧ ನೆಟ್ಟಿಗರು ಕಿಡಿಕಾರುತ್ತಿದ್ದಾರೆ. ಕರ್ನಾಟಕ ಸರ್ಕಾರ ರಾಜ್ಯದಲ್ಲಿ ತುರ್ತು ಪರಿಸ್ಥಿತಿಯನ್ನು ಜಾರಿಗೊಳಿಸಿದೆ. ಗಾಂಧಿ ಕುಟುಂಬದ ಸುಳ್ಳನ್ನು ಬಹಿರಂಗ ಪಡಿಸಿದ್ದಕ್ಕೆ ಮಹೇಶ್ ಹೆಗ್ಡೆಯನ್ನು ಬಂಧಿಸಲಾಗಿದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಟ್ವೀಟ್ ಮಾಡಿದ್ದಾರೆ.
Advertisement
https://twitter.com/ShobhaBJP/status/1120957950531522560
ಬಿಜೆಪಿ ಕಾಯಕರ್ತರ ವಿರುದ್ಧ ದುರುದ್ದೇಶಪೂರ್ವಕವಾಗಿ ಕುಮಾರಸ್ವಾಮಿ ಸರ್ಕಾರ ವಿಕ್ರಂ ಹೆಗ್ಡೆ ಅವರನ್ನು ಬಂಧಿಸಿದೆ. ಯಾವುದೇ ಕಾರಣ ಇಲ್ಲದೇ ವಿಕ್ರಂ ಹೆಗ್ಡೆಯನ್ನು ಸರ್ಕಾರ ಬಂಧಿಸಿದೆ ಎಂದು ಸಿಟಿ ರವಿ ಕಿಡಿಕಾರಿದ್ದಾರೆ.
In another act of Dictatorship, Karnataka Government has arrested Nationalist @mvmeet without any valid reason.
I strongly condemn this undemocratic move by CM @hd_kumaraswamy who is playing Vendetta Politics against @BJP4India Supporters.#ISupportMaheshHegde
— C T Ravi ???????? ಸಿ ಟಿ ರವಿ (@CTRavi_BJP) April 24, 2019